ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವುದು ಬಿಜೆಪಿಗರ ರಕ್ತದಲ್ಲಿಯೇ ಸೇರಿಕೊಂಡಿದೆ: ವೆರೋನಿಕಾ
Team Udayavani, Oct 1, 2021, 2:43 PM IST
ಉಡುಪಿ: ಮಹಿಳೆಯರನ್ನು ಸದಾ ಬಿಜೆಪಿಗರು ಮಾತೆ, ತಾಯಿ ಎಂದು ಕೇವಲ ನಾಟಕೀಯವಾಗಿ ಸಂಬೋಧಿಸುವುದು ಬಿಟ್ಟರೆ ನಿಜವಾಗಿ ಮಹಿಳೆಯರ ಮೇಲೆ ಇರುವ ಗೌರವ ಏನು ಎಂಬುದು ಬೆಳಗಾವಿ ಮಾಜಿ ಶಾಸಕ ಸಂಜಯ ಪಾಟೀಲ್ ಅವರ ಹೇಳಿಕೆಯಿಂದ ಮತ್ತೊಮ್ಮೆ ಸಾಬೀತಾಗಿದೆ ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಮಹಿಳೆಯರನ್ನು ಕೀಳಾಗಿ ಕಾಣುವುದು ಬಿಜೆಪಿಗರಿಗೆ ಇದು ಹೊಸದೇನಲ್ಲ ಓರ್ವ ಶಾಸಕಿಯಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ರಾತ್ರಿ ರಾಜಕೀಯ ಮಾಡುವ ಶಾಸಕಿ ಎನ್ನುವ ರೀತಿ ಕೀಳಾಗಿ ಮಾತನಾಡಿರುವುದು ಖಂಡನೀಯ ಎಂದರು.
ಮಹಿಳೆಯರನ್ನು ಮಾತೆ, ತಾಯಿ ಇನ್ನೆಲ್ಲಾ ಹೆಸರಿನಿಂದ ಕರೆಯುವ ಇವರಿಗೆ ಒರ್ವ ಮಹಿಳೆಗೆ ಯಾವ ರೀತಿಯಲ್ಲಿ ಗೌರವಿಸಬೇಕು ಎನ್ನುವ ಕನಿಷ್ಠ ಜ್ಞಾನ ಇಲ್ಲದಿರುವುದು ವಿಷಾದನೀಯ ಸಂಗತಿಯಾಗಿದೆ. ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವುದು ಬಿಜೆಪಿಗರ ರಕ್ತದಲ್ಲಿಯೇ ಸೇರಿಕೊಂಡಿದೆ ಎನ್ನುವುದು ಪದೇ ಪದೇ ಇವರ ನಾಯಕರು ಮಾಡಿದ ವರ್ತನೆಗಳಿಂದ ಈಗಾಗಲೇ ಸಾಬೀತಾಗಿದೆ. ಇಷ್ಟಾದರೂ ಕೂಡ ತಾವು ಸಾಚಾ ಎನ್ನುವ ರೀತಿ ಮಾತನಾಡುತ್ತಿರುವ ಬಿಜೆಪಿಗರು ಮೊದಲು ತಮ್ಮ ಬಳಸುವ ಭಾಷೆಯನ್ನು ಬದಲಾಯಿಸಿಕೊಳ್ಳುವುದು ಸೂಕ್ತ ಎಂದು ತಿಳಿಸಿದರು.
ಇದನ್ನೂ ಓದಿ:ಮಾತು ಬಾರದ, ಕಿವಿ ಕೇಳದ ಬಾಲಕಿಯ ಮೇಲೆ ಗ್ಯಾಂಗ್ ರೇಪ್
ಓರ್ವ ಮಹಿಳಾ ಶಾಸಕಿಯಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದು, ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯ ರಕ್ಷಣೆ ಇಲ್ಲ ಎನ್ನುವುದು ಇತ್ತೀಚೆಗೆ ರಾಜ್ಯದಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣಗಳಿಂದ ಜಗತ್ತಿಗೆ ತಿಳಿದಿದೆ. ಮಹಿಳೆಯರು ಸ್ವತಂತ್ರವಾಗಿ ತಿರುಗಾಡುವುದು ಸಹ ಕಷ್ಟ ಸಾಧ್ಯವಾಗುತ್ತಿದೆ. ಒಂದು ಕಡೆ ದೇಶದ ಪ್ರಧಾನಿಗಳು ಬೇಟಿ ಪಡಾವೋ ಬೇಟಿ ಬಚಾವೋ ಎಂಬ ಘೋಷಣೆ ಕೂಗುತ್ತಿದ್ದರೆ ಇವರದ್ದೇ ಪಕ್ಷದ ಶಾಸಕರು, ನಾಯಕರು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುವುದು ಮಾತ್ರವಲ್ಲದೆ ಮಹಿಳೆಯ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದಾರೆ. ಇಂತಹ ವರ್ತನೆ ಬಿಜೆಪಿಗರ ನೈಜ ಸಂಸ್ಕೃತಿ ಏನು ಎನ್ನುವುದನ್ನು ಬಿಂಬಿಸುತ್ತದೆ ಎಂದು ಹೇಳಿದರು.
ಹೆಣ್ಣನ್ನು ಪೂಜಿಸುವ ಸಮಾಜದಲ್ಲಿ ಒಬ್ಬ ಶಾಸಕಿಯ ಬಗ್ಗೆ ಹಗುರವಾಗಿ ಮಾತನಾಡಿರುವ ಸಂಜಯ ಪಾಟೀಲ ಅವರು ಕೂಡಲೇ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದ ಮಹಿಳೆಯರು ಬಿಜೆಪಿಗೆ ತಕ್ಕ ಪಾಠ ಕಲಿಸುವುದರಲ್ಲಿ ಸಂಶಯವಿಲ್ಲ ಎಂದು ಅಭಿಪ್ರಾಯ ಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.