ಕೋಟ್ಯಾಂತರ ರೂ. ಮೌಲ್ಯದ ಡ್ರಗ್, ಚಿನ್ನ ವಶ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳ ಕಾರ್ಯಾಚರಣೆ

Team Udayavani, Oct 1, 2021, 3:35 PM IST

drug-case-photo

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿ ಗಳ ಕಳೆದ ಆರು ದಿನಗಳ ಕಾರ್ಯಾಚರಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಉಗಾಂಡ ದೇಶದ ಮಹಿಳೆ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತು ಹೆರಾಯಿನ್‌ ಮತ್ತು ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ:- ಸಮರ ಕಲೆಯನ್ನುಜೀವಂತವಾಗಿರಿಸಿದ ಕೇರಳದ 78ರ ವೃದ್ಧೆ!

ಉಗಾಂಡ ಮೂಲದ ಮಹಿಳೆ ಬಂಧನ: ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತು ಹೆರಾಯಿನ್‌ ಅನ್ನು ಬೆಂಗಳೂರಿಗೆ ತಂದಿದ್ದ ಉಗಾಂಡ ಮೂಲದ ಮಹಿಳೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮತ್ತು ಕಸ್ಟಮ್ಸ್‌ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಆಕೆಯಿಂದ 28 ಕೋಟಿ ರೂ. ಮೌಲ್ಯದ ನಾಲ್ಕು ಕೆ.ಜಿ. ಶೇ.100 ರಷ್ಟು ಶುದ್ಧ ಹೆರಾಯಿನ್‌ ವಶಕ್ಕೆ ಪಡೆಯಲಾಗಿದೆ. ಕೀನ್ಯಾದಿಂದ ದುಬೈಗೆ ಅಲ್ಲಿಂದ ಬೆಂಗಳೂರಿಗೆ ಸೆ.28ರಂದು ಮಹಿಳೆ ಬಂಧಿದ್ದರು. ಆಕೆ ದುಬೈನಿಂದ ಹೊರಟಾಗಲೇ ಡಿಆರ್‌ಐ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ಸಿಕ್ಕಿತ್ತು. ನಂತರ ಈಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರುವ ಮೊದಲೇ ತನಿಖಾಧಿಕಾರಿಗಳು ನಿಲ್ದಾಣದಲ್ಲಿ ಬಿಡು ಬಿಟ್ಟು, ಆಕೆಯನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ವೈದ್ಯಕೀಯ ವೀಸಾ ಪಡೆದು ಬಂದಿರುವುದಾಗಿ ಹೇಳಿದ್ದಳು. ಅನಂತರ ಈಕೆಯ ಬ್ಯಾಗ್‌ ಪರಿಶೀಲಿಸಿದಾಗ, ಮೂರು ಕಡೆಗಳಲ್ಲಿ ಹೆರಾಯಿನ್‌ ತುಂಬಿದ ಸಣ್ಣ-ಸಣ್ಣ ಪೊಟ್ಟಣಗಳು ಪತ್ತೆಯಾಗಿದೆ.

ಆಫ್ರಿಕಾ‍ದಂತ ದೇಶಗಳಲ್ಲಿಯೇ ಶೇ.100ರಷ್ಟು ಶುದ್ಧ ಹೆರಾಯಿನ್‌ ಸಿಗುತ್ತದೆ. ಅಲ್ಲಿನ ದಂಧೆಕೋರರು ಆರ್ಥಿಕವಾಗಿ ಹಿಂದುಳಿದ ಮಹಿಳೆಯರು, ಯುವಕರಿಂದ ಬೇರೆ ದೇಶಗಳಿಗೆ ಮಾದಕ ವಸ್ತು ಸರಬರಾಜು ಮಾಡಲು ಬಳಸುತ್ತಾರೆ. ಅದೇ ರೀತಿ ಈಕೆಯಿಂದಲೂ ಕಳುಹಿಸಿದ್ದು, ಇಲ್ಲಿನ ಪೆಡ್ಲರ್‌ಗಳಿಗೆ ಕೊಟ್ಟು, ಅದನ್ನು ಬೇರೆ ವಸ್ತುವಿನ ಜತೆ ಮಿಶ್ರಣ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿಸಲು ಮಹಿಳೆಗೆ ದಂಧೆಕೋರರು ಸೂಚಿಸಿದ್ದರು ಎಂಬುದು ಪತ್ತೆಯಾಗಿದೆ. ಅಲ್ಲದೆ, ಈಕೆ ಈ ಹಿಂದೆಯೂ ಬಹಳಷ್ಟು ಬಾರಿ ಬೆಂಗಳೂರಿಗೆ ಮಾದಕ ವಸ್ತು ತಂದಿರುವ ಮಾಹಿತಿ ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ.

ಚಿನ್ನದ ಪೇಸ್ಟ್‌ ಪತ್ತೆ: ಮತ್ತೊಂದು ಪ್ರಕರಣದಲ್ಲಿ ಒಳಉಡುಪಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನದ ಪೇಸ್ಟ್‌ ಕೊಂಡೊಯ್ಯುತ್ತಿದ್ದ ಕೇರಳ ಮೂಲದ 26 ವರ್ಷದ ಯುವಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದು, ಆತನಿಂದ 99.32 ಲಕ್ಷ ರೂ. ಮೌಲ್ಯದ 2.09 ಕೆ.ಜಿ. ಚಿನ್ನದ ಪೇಸ್ಟ್‌ ವಶಕ್ಕೆ ಪಡೆದುಕೊಂಡಿದ್ದಾರೆ. ಸೆ.22ರಂದು ಕೇರಳದ ಕೊಚ್ಚಿಯಿಂದ ಮಾಲ್ಡೀವ್‌ಗೆ ಹೋಗಿದ್ದ ಆರೋಪಿ, ಸೆ.26ರಂದು ಬೆಂಗಳೂರಿಗೆ ಬಂದಿದ್ದಾನೆ.

ಆತನ ವರ್ತನೆಯಿಂದ ಅನುಮಾನಗೊಂಡ ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿ ದ್ದಾರೆ. ಆಗ ಆತ, ತಾನೂ ಪ್ರವಾಸಿ ವೀಸಾ ಪಡೆದು ಮಾಲ್ಡೀವ್ಸ್‌ಗೆ ಹೋಗಿರುವುದಾಗಿ ಹೇಳಿದ್ದ. ಬಳಿಕ ಬ್ಯಾಗ್‌ ಶೋಧಿಸಿದಾಗ ಯಾವುದೇ ವಸ್ತುಗಳು ಸಿಕ್ಕಿರಲಿಲ್ಲ. ನಂತರ ಆತನ ದೇಹದ ಚಲನೆಗಳ ಮೇಲೆ ಅನುಮಾನಗೊಂಡು ಬಟ್ಟೆ ಕಳಚಿದಾಗ, ಸುಮಾರು 2.09 ಕೆ.ಜಿಯ ಚಿನ್ನದ ಪೇಸ್ಟ್‌ ಅನ್ನು ಒಂದು ಬಟ್ಟೆಯಲ್ಲಿ ಸುತ್ತಿಟ್ಟು, ಅದನ್ನು ತನ್ನ ಒಳ ಉಡುಪಿನ ಸುತ್ತ ಜೇಬು ಮಾಡಿಸಿಕೊಂಡು ಅದರಲ್ಲಿ ಇರಿಸಿಕೊಂಡಿದ್ದ ಎಂದು ಕಸ್ಟಮ್ಸ್‌ ಅಧಿಕಾರಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Shivanna cinema in Vallarasu director’s film

N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.