ದಲಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬಿಸಿಯೂಟ | ಮುಖ್ಯ ಶಿಕ್ಷಕ ಅಮಾನತು
Team Udayavani, Oct 1, 2021, 8:59 PM IST
ಲಖನೌ : ಮಧ್ಯಾಹ್ನದ ಬಿಸಿಯೂಟಕ್ಕೆ ದಲಿತ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೂರಿಸಿದ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ವನಪುರ್ವಾ ಗಡೇರಿ ಗ್ರಾಮ ಪಂಚಾಯಿತಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಶಾಲೆಯ ಮುಖ್ಯ ಶಿಕ್ಷಕ ಕುಸುಮ್ ಸೋನಿ, ಮಧ್ಯಾಹ್ನದ ಊಟದ ವೇಳೆ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳನ್ನು ಪ್ರತ್ಯೇಕ ಸರತಿ ಸಾಲಿನಲ್ಲಿ ಕೂರಿಸಿದ್ದರು. ವಿದ್ಯಾರ್ಥಿಗಳನ್ನು ಥಳಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಘಟನೆ ಕುರಿತು ಎಫ್‌ಐಆರ್ ದಾಖಲಿಸಲಾಗಿದ್ದು, ಕುಸಮ್ ಸೋನಿಯನ್ನು ಅಮಾನತು ಮಾಡಲಾಗಿದೆ.
“ಶಿಕ್ಷಕ ಕುಸುಮ್ ಸೋನಿ ವಿದ್ಯಾರ್ಥಿಗಳನ್ನು ಥಳಿಸಿದ್ದಾರೆ ಮತ್ತು ಊಟಕ್ಕೆ ಮೇಲ್ಜಾತಿ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸರತಿ ಸಾಲುಗಳನ್ನು ಮಾಡಿದ್ದರು”ಎಂದು ದಲಿತ ಸಮುದಾಯಕ್ಕೆ ಸೇರಿದ ಪೋಷಕರಲ್ಲಿ ಒಬ್ಬರಾದ ನಾರಾಯಣ್ ಅವರು ಆರೋಪಿಸಿದ್ದಾರೆ.
ತಮ್ಮ ಮೇಲಿನ ಆರೋಪವನ್ನು ತಳ್ಳಿ ಹಾಕಿರುವ ಸೋನಿ, “ನಾನು ಎಲ್ಲರನ್ನೂ ಸಮಾನವಾಗಿ ನೋಡುತ್ತೇನೆ. ಎಲ್ಲಾ ವಿದ್ಯಾರ್ಥಿಗಳನ್ನು ಒಟ್ಟಿಗೆ ಕೂರಿಸಲಾಗಿದೆ. ತಾನು ಹಳ್ಳಿಯ ಮುಖ್ಯಸ್ಥನ ಪ್ರತಿನಿಧಿ ಎಂದು ಹೇಳಿಕೊಂಡ ಪವನ್ ದುಬೆ ಎಂಬ ವ್ಯಕ್ತಿ ಇಲ್ಲಿಗೆ ಬಂದು, ಎಲ್ಲರನ್ನು ಹೊರಗೆ ತಳ್ಳಿ, ಗೇಟ್‌ಗಳನ್ನು ಲಾಕ್ ಮಾಡಿ, ಶಾಲೆಯ ಚಿತ್ರಗಳನ್ನು ಕ್ಲಿಕ್ ಮಾಡಿ, ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಂಬಂಧ ನಾನು ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಸೋನಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.