ಪದವಿ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷವೂ ಟ್ಯಾಬ್ಲೆಟ್-ಪಿಸಿ?
ಈಗ ದಾಖಲಾಗಿರುವವರಿಗೂ ವಿತರಿಸಲು ಪ್ರಸ್ತಾವನೆ
Team Udayavani, Oct 2, 2021, 6:10 AM IST
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಪದವಿ ಕೋರ್ಸ್ ಗಳಿಗೆ ಸರಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಜತೆಗೆ ಟ್ಯಾಬ್ಲೆಟ್-ಪಿಸಿಯೂ ಸಿಗಲಿದೆ.
ರಾಜ್ಯ ಸರಕಾರ ಸರ ಕಾರಿ ಪದವಿ ಕಾಲೇಜಿನ ಅರ್ಹ ವಿದ್ಯಾರ್ಥಿಗಳಿಗೆ 2020-21ನೇ ಸಾಲಿನಲ್ಲಿ ಟ್ಯಾಬ್ಲೆಟ್- ಪಿಸಿ ವಿತರಿಸಿತ್ತು. ಅದ ಕ್ಕಿಂತ ಮೊದಲು ಲ್ಯಾಪ್‌ಟಾಪ್ ನೀಡಲಾಗಿತ್ತು. 2021-22ನೇ ಸಾಲಿನ ವಿದ್ಯಾರ್ಥಿಗಳಿಗೂ ಟ್ಯಾಬ್ಲೆಟ್-ಪಿಸಿ ಒದಗಿಸು ವಂತೆ ಕಾಲೇಜು ಶಿಕ್ಷಣ ಇಲಾಖೆಯಿಂದ ಸರಕಾರಕ್ಕೆ ಪ್ರಸ್ತಾ ವನೆ ಸಲ್ಲಿಸಲಾಗಿದೆ. ಸರಕಾರದಿಂದ ಈವರೆಗೂ ಯಾವುದೇ ನಿರ್ಧಾರ ಆಗಿಲ್ಲ. ಒಂದೊಮ್ಮೆ ಟ್ಯಾಬ್ಲೆಟ್-ಪಿಸಿ ನೀಡಲು ಮುಂದಾದರೂ ಸಚಿವ ಸಂಪುಟದಲ್ಲಿ ಒಪ್ಪಿಗೆಯ ಜತೆಗೆ ಆರ್ಥಿಕ ಇಲಾಖೆಯ ಒಪ್ಪಿಗೆಯನ್ನು ಪಡೆಯಬೇಕಾಗುತ್ತದೆ.
ಹೆಚ್ಚುವರಿ ಅನುದಾನ ಅಗತ್ಯ
ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾದ ಎಲ್ಲ ರೀತಿಯ ಇ-ಕಂಟೆಂಟ್ ಹೊಂದಿರುವ ಟ್ಯಾಬ್ಲೆಟ್-ಪಿಸಿಗಳನ್ನೇ ನೀಡ ಬೇಕಿರುವುದರಿಂದ ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿ ಅನುದಾನದ ಅಗತ್ಯವಿದೆ. ಕಳೆದ ವರ್ಷ 1.15 ಲಕ್ಷ ವಿದ್ಯಾರ್ಥಿಗಳಿಗೆ 190 ಕೋ.ರೂ. ವೆಚ್ಚದಲ್ಲಿ ಟ್ಯಾಬ್ಲೆಟ್-ಪಿಸಿ ನೀಡಲಾಗಿದೆ. ಈ ವರ್ಷ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ಈಗಾಗಲೇ 30 ಸಾವಿರಕ್ಕೂ ಅಧಿಕ ಮಂದಿ ದಾಖಲಾಗಿದ್ದಾರೆ. ದಾಖಲಾತಿ ಪ್ರಕ್ರಿಯೆ ನಡೆಯುತ್ತಿರುವುದರಿಂದ 50ರಿಂದ 60 ಸಾವಿರ ಮಂದಿ ಹೆಚ್ಚುವರಿಯಾಗಿ ದಾಖಲಾಗುವ ಸಾಧ್ಯತೆಯಿದೆ.
ಇದನ್ನೂ ಓದಿ:ಕೋಲ್ಕತಾ ನೈಟ್‌ರೈಡರ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆ 5 ವಿಕೆಟ್‌ಗಳ ಜಯ
ಈ ವಿದ್ಯಾರ್ಥಿಗಳೂ ಸೇರಿ ಸುಮಾರು 1.50 ಲಕ್ಷದಿಂದ 1.60 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್-ಪಿಸಿ ನೀಡಬೇಕಾಗಬಹುದು. ಅಲ್ಲದೆ ಇ-ಕಂಟೆಂಟ್ ಕೂಡ ತುಂಬಬೇಕಿರುವುದರಿಂದ ಸುಮಾರು 250 ಕೋಟಿ ರೂ.ಗೂ ಅಧಿಕ ಖರ್ಚು ಬರುವ ಸಾಧ್ಯತೆಯಿದೆ. ಸರಕಾರ ಇದಕ್ಕೆ ಹೆಚ್ಚುವರಿ ಅನುದಾನ ಮೀಸಲಿಡಬಹುದು ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
2021-22ನೇ ಸಾಲಿನಲ್ಲಿ ಸರಕಾರಿ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ದಾಖಲಾಗುವ ಅರ್ಹ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್-ಪಿಸಿ ವಿತರಿಸುವ ಸಂಬಂಧ ಸರಕಾರಕ್ಕೆ ಪ್ರಸ್ತಾವನೆಯನ್ನು ಈಗಾಗಲೇ ಸಲ್ಲಿಸಿ
ದ್ದೇವೆ. ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಸರಕಾರ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದೆ.
– ಪಿ. ಪ್ರದೀಪ್, ಆಯುಕ್ತ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.