ಕಾಗದದಲ್ಲೇ ಉಳಿದ ಪ್ಲ್ಯಾಸ್ಟಿಕ್‌ ಬಳಕೆ ನಿಷೇಧ

ಪ್ಲ್ಯಾಸ್ಟಿಕ್‌ ಬಳಕೆ ಮೇಲೆ ಸಂಪೂರ್ಣ ನಿಷೇಧ ಹೇರಬೇಕಿರುವ ಜಿಲ್ಲಾಡಳಿತ

Team Udayavani, Oct 2, 2021, 3:22 PM IST

ಕಾಗದದಲ್ಲೇ ಉಳಿದ ಪ್ಲ್ಯಾಸ್ಟಿಕ್‌ ಬಳಕೆ ನಿಷೇಧ

ಕಲಬುರಗಿ: 50 ಮೈಕ್ರಾನ್‌ಗಿಂತ ಕಡಿಮೆ ದಪ್ಪವಿರುವ ಮಹಾನಗರದಲ್ಲಿ ಪ್ಲ್ಯಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧವು ಹೆಸರಿಗೆ ಮಾತ್ರ ಎನ್ನುವಂತಾಗಿದೆ. ಏಕೆಂದರೆ ಪ್ಲ್ಯಾಸ್ಟಿಕ್‌ ಬಳಕೆ ವ್ಯಾಪಕವಾಗಿ ನಡೆಯುತ್ತಿರುವುದೇ ಇದಕ್ಕೆ ಸಾಕ್ಷಿಯಾಗಿದೆ.

ಅಕ್ಟೋಬರ್‌ ತಿಂಗಳು ಬಂತೆಂದರೆ ಸ್ವತ್ಛತಾ ಅಭಿಯಾನ ಹಾಗೂ ಪ್ಲಾಸ್ಟಿಕ್‌ ಬಳಕೆ ನಿಷೇಧ ಕುರಿತು ದಾಳಿ ನಡೆಯುತ್ತಲೇ ಇರುತ್ತವೆ. ಅಕ್ಟೋಬರ್‌ 1ರಿಂದ 31ರವರೆಗೆ ದೇಶದಾದ್ಯಂತ ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹಿಸುವ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ಲಾಷ್ಟಿಕ್‌ ಬಳಕೆ ಹಾಗೂ ಉತ್ಪಾದನಾ ಘಟಕದ ಮೇಲೆ ದಾಳಿ ಹಾಗೂ ಬಳಕೆ ಮಾಡದಿರುವ ಕುರಿತು ನೀಡಲಾದ ಎಚ್ಚರಿಕೆಯು ಅಕ್ಟೋಬರ್‌ ತಿಂಗಳಿನಲ್ಲಿ ಎರಡು ದಿನಗಳ ಕಾಲ ಕೇಳಿ ಬರುತ್ತದೆ. ಆದರೆ ನಂತರ ಅದರ ಮಾತೇ ಕೇಳಿಬರುವುದಿಲ್ಲ.

ಎಂಟು ಟನ್‌ ತ್ಯಾಜ್ಯ ಪ್ಲಾಸ್ಟಿಕ್‌ ಉತ್ಪಾದನೆ: ಕಲಬುರಗಿ ಮಹಾನಗರದಲ್ಲಿ ದಿನಾಲು ಎಂಟು ಟನ್‌ ಪ್ಲಾಸ್ಟಿಕ್‌ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಇದರಲ್ಲಿ ಅರ್ಧದಷ್ಟು ತ್ಯಾಜ್ಯ ಮರು ಬಳಕೆ ಮಾಡಬಹುದು. ಇಷ್ಟೊಂದು ಪ್ಲಾಸ್ಟಿಕ್‌ ತ್ಯಾಜ್ಯ ನಿರ್ಮಾಣವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಪ್ಲ್ಯಾಸ್ಟಿಕ್‌ ಬಳಕೆ ಮೇಲೆ ಸಂಪೂರ್ಣ ನಿಷೇಧ ಹೇರಬೇಕಿರುವ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ತನ್ನ ಜವಾಬ್ದಾರಿಯನ್ನು ಸಂಪೂರ್ಣ ಮರೆತಿದೆ. ತ್ಯಾಜ್ಯದಿಂದ ರೋಗಗಳ ಉಲ್ಬಣ ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ವ್ಯಾಪಕ ಪ್ಲ್ಯಾಸ್ಟಿಕ್‌ ಬಳಕೆಯಿಂದ ಜನರ ಆರೋಗ್ಯ ಮೇಲೆ ಕೆಟ್ಟ ಪರಿಣಾಮ ತಡೆಯುವ ನಿಟ್ಟಿನಲಿ ಮಾಸಾಚರಣೆ ಹಾಗೂ ಗಾಂಧಿ ಜಯಂತಿಯ ಸ್ವಚ್ಛತಾ ಆಂದೋಲನ ಬಂದಾಗ ಪ್ಲ್ಯಾಸ್ಟಿಕ್‌ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಲಾಗುತ್ತದೆ. ತದನಂತರ ಸಂಪೂರ್ಣ ಮರೆಯಲಾಗುತ್ತಿದೆ. ಹೀಗಾಗಿ ಪ್ಲಾಷ್ಟಿಕ್‌ ನಿಷೇಧ ಕಾಗದದಲ್ಲಿ ಮಾತ್ರ ಎನ್ನುವಂತಾಗಿದೆ.
ಈ ಹಿಂದೆ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಪ್ಲ್ಯಾಸ್ಟಿಕ್‌ ತಯಾರಿಕಾ ನಕಲಿ ಘಟಕಗಳಿದ್ದವು ಎನ್ನಲಾಗುತ್ತಿತ್ತು.

ಆದರೆ ಅವುಗಳಲ್ಲಿ ಕೆಲವು ಬಂದಾಗಿವೆ. ಆದರೀಗ ಹೈದ್ರಾಬಾದ್‌ನಿಂದ ಪ್ಲಾಸ್ಟಿಕ್‌ ಆಗಮಿಸುತ್ತಿದ್ದು, ಇದನ್ನು ತಡೆಯುವುದರ ಜತೆಗೆ ಸಣ್ಣ-ಸಣ್ಣ ವ್ಯಾಪಾರಸ್ಥರು ಹಾಗೂ ಹೋಟೆಲ್‌ಗ‌ಳಲ್ಲಿ ಬಳಕೆ ಮಾಡುತ್ತಿರುವುದನ್ನು ತಡೆಗಟ್ಟಬೇಕಿದೆ. ಪ್ಲಾಸ್ಟಿಕ್‌ ಬಳಕೆಯಿಂದ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿರುವ ಕುರಿತು ಕೇಂದ್ರ ಸರ್ಕಾರ ಮಾಡಿರುವ ಪಟ್ಟಿಯಲ್ಲಿ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ದಾವಣಗೆರೆ ಜತೆಗೆ ಕಲಬುರಗಿ ಜಿಲ್ಲೆಯೂ ಸೇರಿದೆ. ಹೀಗಾಗಿ ಚಿಂತನೆ ಮಾಡಿ ದೃಢ ಹೆಜ್ಜೆ ಇಡುವುದು ಅಗತ್ಯವಿದೆ. ಪ್ಲಾಸ್ಟಿಕ್‌ನಲ್ಲಿ ಕ್ಯಾನ್ಸರ್‌ ಅಂಶ ಸೇರಿದ್ದರಿಂದ ಅದನ್ನು ಉಪಯೋಗಿಸುವವರು ರೋಗಕ್ಕೆ ತುತ್ತಾಗಬಹುದಾಗಿದೆ ಎನ್ನುವ ಎಚ್ಚರಿಕೆ ನೀಡಿದ್ದರೂ ಯಾರೂ ಜಾಗೃತವಾಗುತ್ತಿಲ್ಲ.

ಪಾಲಿಕೆ ಅಧಿಕಾರಿಗಳು ಪ್ಲಾಸ್ಟಿಕ್‌ ಉತ್ಪಾದನಾ ಘಟಕ ಹಾಗೂ ಪ್ಲಾಸ್ಟಿಕ್‌ ದಾಸ್ತಾನು ಮೇಲೆ ದಾಳಿ ನಡೆಸಿದರೆ ಜನಪ್ರತಿನಿಧಿಗಳು ಅಡ್ಡ ಬಂದು, ಅವರು ನಮ್ಮವರೇ ಇದ್ದಾರೆ ನೋಡ್ರೀ ಎನ್ನುತ್ತಿರುವುದೇ ಪ್ಲಾಸ್ಟಿಕ್‌ ಬಳಕೆ ನಿಷೇಧಕ್ಕೆ ಹಿನ್ನೆಡೆಯಾಗುತ್ತಿರುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ.

ಪ್ಲಾಸ್ಟಿಕ್‌ ಬಳಕೆ ನಿಷೇಧಿಸುವ ನಿಟ್ಟಿನಲ್ಲಿ ಕಾರ್ಯಾಚರಣೆಗಾಗಿ ಪಾಲಿಕೆಯಿಂದ ಮೂರು ತಂಡಗಳನ್ನು ಈಗಷ್ಟೇ ರಚಿಸಲಾಗಿದೆ. ಇನ್ಮುಂದೆ ದಾಳಿ ನಡೆಯಲಿದೆ. ಪ್ಲಾಸ್ಟಿಕ್‌ ತಯಾರಿಸುವ ಘಟಕಗಳಿದ್ದರೆ ಎಫ್ಐಆರ್‌ ದಾಖಲಿಸುವಂತೆ ಸೂಚಿಸಲಾಗಿದೆ. ಹೈದ್ರಾಬಾದ್‌ದಿಂದ ಬರಲಾಗುತ್ತಿದೆ ಎನ್ನಲಾಗುತ್ತಿರುವ ಪ್ಲಾಸ್ಟಿಕ್‌ನ್ನು ಗಡಿಯಲ್ಲೇ ತಡೆಯುವಂತೆ ಪೊಲೀಸರಿಗೆ ತಿಳಿಸಲಾಗಿದೆ. ಒಟ್ಟಾರೆ ಪ್ಲಾಸ್ಟಿಕ್‌ ಬಳತೆ ತಡೆಗಟ್ಟಲು ಸಣ್ಣ-ಸಣ್ಣ ವ್ಯಾಪಾರಸ್ಥರು, ಹೋಟೆಲ್‌ ಮಾಲೀಕರು ಹಾಗೂ ಸಾರ್ವಜನಿಕರು ಕೈ ಜೋಡಿಸಬೇಕು.
ಸ್ನೇಹಲ್‌ ಲೋಕಂಡೆ, ಪಾಲಿಕೆ ಆಯುಕ್ತ

ಟಾಪ್ ನ್ಯೂಸ್

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

15-uv-fusion

Pendulum Wall Clock: ನಮ್ಮ ಮನೆಯಲ್ಲಿ ಒಂದು ಅದ್ಭುತ ಇದೆ ಗೊತ್ತಾ?

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

14-uv-fusion

UV Fusion: ಕೈ ಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

13-uv-fusion

UV Fusion: ಸಾಂಪ್ರದಾಯಿಕ ಕರಕುಶಲ ಕಲೆಗಳನ್ನು ಬೆಳೆಸೋಣ

Cooker Story: ಹತ್ತು ಸಲ ಕೂಗಿದ್ರೂ  ಅವರಿಗೆ ಗೊತ್ತಾಗಲಿಲ್ಲ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.