8 ಕೋಟಿ ರೂ.ನಷ್ಟದಲ್ಲಿ ಪಿಕಾರ್ಡ್‌ ಬ್ಯಾಂಕ್‌


Team Udayavani, Oct 2, 2021, 5:42 PM IST

ಪಿಕಾರ್ಡ್‌ ಬ್ಯಾಂಕ್‌

ಚನ್ನಪಟ್ಟಣ: ಸಹಕಾರ ಸಂಘದ ನಿಯಮದ ಪ್ರಕಾರ ಬ್ಯಾಂಕ್‌ನ ಸದಸ್ಯರ ಷೇರು ಹಣ 500 ರೂ.ಯಿಂದ 2 ಸಾವಿರಕ್ಕೆ ಹೆಚ್ಚಳವಾಗಿದೆ. ಮುಂದಿನ ಆಡಳಿತ ಮಂಡಳಿ ಚುನಾವಣೆಗೆ ಮುನ್ನ ಬ್ಯಾಂಕ್‌ನ ಷೇರುದಾರರು ತಮ್ಮ ಬಾಕಿ ಷೇರು ಹಣ 1500 ರೂ. ಪಾವತಿಸಿ ಮುಂದಿನ ಚುನಾವಣೆಯಲ್ಲಿ ಮತದಾನದ ಹಕ್ಕು ಪಡೆದುಕೊಳ್ಳಬೇಕು ಎಂದು ಪಿ.ಎಲ್‌.ಡಿ ಬ್ಯಾಂಕ್‌ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು ತಿಳಿಸಿದರು.

ಇದನ್ನೂ ಓದಿ:- ಪೊಲೀಸ್‌ ವೇಷದಲ್ಲಿ ಹಣ ವಸೂಲಿ; ಇಬ್ಬರ ಬಂಧನ

 ಬ್ಯಾಂಕ್‌ 8 ಕೋಟಿ ರೂ.ನಷ್ಟದಲ್ಲಿದೆ: ಬ್ಯಾಂಕ್‌ 8 ಕೋಟಿ ರೂ.ನಷ್ಟದಲ್ಲಿದೆ. ಬ್ಯಾಂಕ್‌ನಲ್ಲಿ ರೈತರು ಪಡೆದಿರುವ ಸಾಲ ಸಕಾಲಕ್ಕೆ ಮರುಪಾವತಿ ಮಾಡುತ್ತಿಲ್ಲ. ಸಾಲಗಾರರು, ಸರ್ಕಾರಗಳು ಸಾಲಮನ್ನಾ ಮಾಡುತ್ತವೆ ಎಂಬ ನಂಬಿಕೆಯಲ್ಲೆ ಸಾಲ ಕಟ್ಟಲು ಮೀನಮೇಷ ಎಣಿಸುತ್ತಿದ್ದಾರೆ. ಬ್ಯಾಂಕ್‌ನಿಂದ ಸಾಲ ಪಡೆದವರು ಸಕಾಲದಲ್ಲಿ ಸಾಲ ಮರುಪಾವತಿಸಿ ಇತರರಿಗೆ ಸಾಲ ಸೌಲಭ್ಯ ದೊರಕಿಸಿ ಕೊಡಬೇಕು. ಬ್ಯಾಂಕ್‌ ಪ್ರಗತಿಗೆ ಕೈಜೋಡಿಸಿ ಎಂದು ಮನವಿ ಮಾಡಿದರು.

ಸಾಲ ವಸೂಲಾತಿಯಲ್ಲಿ ಹಿನ್ನಡೆ: ಬ್ಯಾಂಕ್‌ನಲ್ಲಿ ಕಳೆದ ಅವಧಿಯಲ್ಲಿ ಶೇ.70ರಷ್ಟು ಸಾಲ ಮರುಪಾವತಿಯಾಗಿದೆ. ನಮ್ಮ ಗುರಿ ಶೇ.100 ನೂರರಷ್ಟು ಸಾಲ ವಸೂಲಾತಿ ಇತ್ತು. ಆದರೆ, ಈ ವರ್ಷದ ಆರಂಭದಲ್ಲಿ ಕೊರೊನಾ ಕಾರಣ ಸಾಲ ವಸೂಲಾತಿಯಲ್ಲಿ ಹಿನ್ನಡೆ ಆಗಿದೆ ಎಂದು ನಾಗರಾಜು ತಿಳಿಸಿದರು. ಹೈನುಗಾರಿಕೆ ಮತ್ತು ಟ್ರಾಕ್ಟರ್‌ ಮೇಲಿನ ಸಾಲಗಳು ಮಾತ್ರ ಮರುಪಾವತಿಯಾಗುತ್ತಿವೆ. ಕೋಳಿ ಸಾಕಾಣಿಕೆಗೆ ನೀಡಿರುವ ಸಾಲ ಮತ್ತು ಭೂಮಿ ಅಭಿವೃದ್ಧಿಗೆ ನೀಡಿರುವ ಸಾಲ ವಸೂಲಾಗಿಲ್ಲ. ಆದರೂ ಬ್ಯಾಂಕ್‌ನಿಂದ ರೈತರಿಗೆ ಸಾಲ ಸೌಲಭ್ಯ ನಿಲ್ಲಿಸಿಲ್ಲ ಎಂದರು.

ಠೇವಣಿ ಮಾಡಿ ಸಹಕರಿಸಿ: ಬ್ಯಾಂಕ್‌ನಲ್ಲಿ ಸದಸ್ಯರಾಗಿರುವ ರೈತರು ಬೇರೆ ಬ್ಯಾಂಕ್‌ಗಳಲ್ಲಿ ಹಣ ಠೇವಣಿ ಮಾಡುತ್ತಿದ್ದಾರೆ. ಅವರಿಗೆ ಅಲ್ಲಿ ಶೇ.6ರಷ್ಟು ಬಡ್ಡಿ ನೀಡಲಾಗುತ್ತಿದೆ. ನಮ್ಮ ಬ್ಯಾಂಕ್‌ನಲ್ಲೇ ಸದಸ್ಯರ ಹಣ ಠೇವಣಿ ಮಾಡಲು ಜಾರಿಗೆ ತರಲಾಗಿದ್ದು, ನಮ್ಮಲ್ಲಿ ಶೇ.8ರಷ್ಟು ಬಡ್ಡಿ ನೀಡುವ ಜೊತೆಗೆ ಹಿರಿಯ ನಾಗರಿಕರಿಗೆ ಶೇ.9ರಷ್ಟು ಬಡ್ಡಿ ನೀಡುತ್ತೇವೆ. ಅಲ್ಲದೆ ಸದಸ್ಯರು ಹೇಳುವ ಬ್ಯಾಂಕ್‌ನ ಖಾತೆಗೆ ನೇರವಾಗಿ ಬಡ್ಡಿ ಜಮಾ ಮಾಡುವ ಸೌಲಭ್ಯ ಸಹ ಹೊಂದಿದ್ದೇವೆ. ಈ ನಿಟ್ಟಿನಲ್ಲಿ ಬ್ಯಾಂಕ್‌ನಲ್ಲಿ ಹಣ ಠೇವಣಿ ಮಾಡಿ ಸಹಕರಿಸಬೇಕು ಎಂದು ಅಧ್ಯಕ್ಷ ನಾಗರಾಜು ಮನವಿ ಮಾಡಿದರು.

ಸಭೆಯಲ್ಲಿ ಬ್ಯಾಂಕ್‌ನ ನ್ಯೂನ್ಯತೆಗಳು ಮತ್ತು ಕೆಲ ಮಾರ್ಪಾಡುಗಳ ಬಗ್ಗೆ ಚರ್ಚೆ ನಡೆಯಿತು. ಬ್ಯಾಂಕ್‌ನ ಸದಸ್ಯರು ಕೆಲವು ಲೋಪಗಳ ಬಗ್ಗೆ ಬ್ಯಾಂಕ್‌ನ ಸಾಲಕ್ಕೆ ಇರುವ ನಿಯಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ನಿಯಮ ಸಡಿಲಿಸುವಂತೆ ಸಲಹೆ ನೀಡಿದರು.

ವೇದಿಕೆಯಲ್ಲಿ ಉಪಾಧ್ಯಕ್ಷರಾದ ವಿಜಯಲಕ್ಷ್ಮಿ, ಹೇಮಚಂದ್ರು, ನಿರ್ದೇಶಕ ಭೈರನರ ಸಿಂಹಯ್ಯ, ಡಿ.ಗಂಗರಾಜು, ಶಿವಣ್ಣಗೌಡ, ಕೃಷ್ಣ, ಕೃಷ್ಣೇಗೌಡ, ತೂಬಿನಕೆರೆ ಟಿ.ಎಸ್‌.ರಾಜು, ಜೆ.ಹೇಮಂತ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.