ಹಿರಿಯರನ್ನು ಗೌರವದಿಂದ ಕಾಣಿ: ಸತೀಶ್
ಹಿರಿಯರ ಮಾತು ಕೇಳಿದವರು ಜೀವನದಲ್ಲಿ ಉತ್ತಮ ಸಾಧನೆ ಮಾಡಬಲ್ಲರು.
Team Udayavani, Oct 2, 2021, 5:49 PM IST
ರಾಯಚೂರು: ಹಿರಿಯರ ಅನುಭವದ ನುಡಿಗಳೇ ಯುವಪೀಳಿಗೆಗೆ ಗುಣಪಾಠವಾಗಿದ್ದು, ಅವರ ಮಾರ್ಗದರ್ಶನದಲ್ಲಿ ಉತ್ತಮ ಸಮಾಜ ಕಟ್ಟಲು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಬಿ.ಸಿ.ಸತೀಶ್ ಹೇಳಿದರು.
ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹಿರಿಯರ ಮಾತು ಕೇಳಿದವರು ಜೀವನದಲ್ಲಿ ಉತ್ತಮ ಸಾಧನೆ ಮಾಡಬಲ್ಲರು. ಹಿರಿಯರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡ ಮೌಲ್ಯಗಳು, ಸಂಸ್ಕಾರದ ಬಗ್ಗೆ ಕೇಳಿ ತಿಳಿಯಬೇಕು. ಅವರ ಜೀವನದ ಶಿಸ್ತು ನೋಡಿ ಕಲಿಯಬೇಕು. ಅದುವೇ ನಮಗೆಲ್ಲ ದಾರಿದೀಪವಾಗಲಿದೆ ಎಂದರು. ಇಂದು ಸಾಕಷ್ಟು ಮನೆಯಲ್ಲಿ ಹಿರಿಯರನ್ನು ಅಗೌರವದಿಂದ ನಡೆಸಿಕೊಳ್ಳಲಾಗುತ್ತಿದೆ.
ಅದು ಸರಿಯಲ್ಲ. ಅವರು ಕಷ್ಟಪಟ್ಟು ಬೆಳೆಸಿ, ವಿದ್ಯಾವಂತರನ್ನಾಗಿ ಮಾಡಿರುತ್ತಾರೆ. ಅವರ ಮುಪ್ಪಿನ ಕಾಲದಲ್ಲಿ ಗೌರವದಿಂದ ನಡೆಸಿಕೊಳ್ಳುವುದು ಸಭ್ಯ ಸಮಾಜದ ಕರ್ತವ್ಯವಾಗಿದೆ. ಒಂದು ವೇಳೆ ಅವರನ್ನು ಗೌರವ ಪೂರ್ವಕವಾಗಿ ನಡೆಸಿಕೊಳ್ಳದಿದ್ದರೆ ಅಂಥವರ ವಿರುದ್ಧ ಕಾನೂನು ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ. ಹಿರಿಯರು ನೀವು ಬದುಕಿರುವವರೆಗೂ ನಿಮ್ಮ ಮಕ್ಕಳ ಹೆಸರಿಗೆ ಆಸ್ತಿ ವರ್ಗಾವಣೆ ಮಾಡಬೇಡಿ ಎಂದು ಸಲಹೆ ನೀಡಿದರು.
ಜಿಲ್ಲೆಯ ಹಿರಿಯ ನಾಗರಿಕರು ಕೋವಿಡ್-19ರ ಮೊದಲ ಮತ್ತು ಎರಡನೇ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಹಕರಿಸಬೇಕು. ರಾಯಚೂರು ನಗರ ಸ್ವಚ್ಛತೆಯಿಂದ ಇರಲು ಎಲ್ಲರ ಸಹಕಾರ ಅಗತ್ಯವಾಗಿದೆ. ಸಾರ್ವಜನಿಕರು ತಮ್ಮ ಮನೆಗಳ ಮುಂದೆ ಸಸಿಗಳನ್ನು ನೆಡುವ ಮೂಲಕ ಪರಿಸರ ಬೆಳೆಸಬೇಕು. ಪ್ಲಾಸ್ಟಿಕ್ ನಿಷೇಧವಿದ್ದು, ಪ್ಲಾಸ್ಟಿಕ್ ಗಳನ್ನು ಯಾರು ಬಳಸಬಾರದು ಎಂದರು.
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವಿಭಾಗದಲ್ಲಿ ಅಜೀಜಾ ಸುಲ್ತಾನ, ಶಿಕ್ಷಣ ವಿಭಾಗದಿಂದ ದಾನಮ್ಮ ಬಿ.ಸುಭಾಶ್ಚಂದ್ರ, ಕಂದಾಯ ಇಲಾಖೆಯ ವಿಭಾಗದಲ್ಲಿ ಜಿ.ಡೇವಿಡ್, ಪೊಲೀಸ್ ಇಲಾಖೆಯಿಂದ ನಿವೃತ್ತ ಸರ್ಕಲ್ ಇನ್‌ಸ್ಪೆಕ್ಟರ್ ರಾಮಣ್ಣ, ಉನ್ಯಾಸಕರ ವಿಭಾಗದಿಂದ ಮಹಾದೇವಪ್ಪ ಏಗನೂರು, ಜಿಲ್ಲಾ ಹಿರಿಯ ನಾಗರಿಕರ ಮತ್ತು ಸಬಲೀಕರಣ ಇಲಾಖೆಯ ಪ್ರಭಾರಿಯಾಗಿ ಸೇವೆ ಸಲ್ಲಿಸಿದ ಶೇಖ್ ಅಸ್ರರ್ ಹುಸೇನ್ ಅವರನ್ನು ಗೌರವಿಸಲಾಯಿತು. ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿ ಕಾರಿ ಶರಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವೀರನಗೌಡ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.