ಶಿಕ್ಷಕರ ಸಂಖ್ಯೆ ಹೆಚ್ಚಳವಾದರೆ ಖಾಸಗಿಗೂ ಪೈಪೋಟಿ

ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

Team Udayavani, Oct 3, 2021, 6:30 AM IST

ಶಿಕ್ಷಕರ ಸಂಖ್ಯೆ ಹೆಚ್ಚಳವಾದರೆ ಖಾಸಗಿಗೂ ಪೈಪೋಟಿ

ಉಪ್ಪುಂದ: ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ದಾನಿಗಳ ಸಹಕಾರದಿಂದ ಖಾಸಗಿ ಶಾಲೆಯನ್ನು ಮೀರಿಸುವ ರೀತಿಯಲ್ಲಿ ವರ್ಷದಿಂದ ವರ್ಷಕ್ಕೆ ದಾಖಲಾತಿಯಲ್ಲಿ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ.

92 ವಿದ್ಯಾರ್ಥಿಗಳ ಸೇರ್ಪಡೆ
ನಾವುಂದ ಗ್ರಾ.ಪಂ.ವ್ಯಾಪ್ತಿಯ ರಾ.ಹೆದ್ದಾರಿ 66ರಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಗೆ 88 ವರ್ಷ. ಕಳೆದ ಸಾಲಿನಲ್ಲಿ 219 ವಿದ್ಯಾರ್ಥಿಗಳು ಇದ್ದರೆ ಪ್ರಸ್ತುತ ವರ್ಷದಲ್ಲಿ 131 ಹುಡುಗರು ಹಾಗೂ 141 ಹುಡುಗಿಯರನ್ನೊಳಗೊಂಡಂತೆ 272 ವಿದ್ಯಾರ್ಥಿಗಳಿದ್ದಾರೆ. 1ನೇ ತರಗತಿಗೆ 48 ಮಕ್ಕಳು ಸೇರ್ಪಡಿದ್ದಾರೆ. ಎ, ಬಿ ವಿಭಾಗಗಳಲ್ಲಿ ತರಗತಿ ನಡೆಯುತ್ತದೆ.

ಶಿಕ್ಷಕರ ಕೊರತೆ
ಶಾಲೆಯಲ್ಲಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ವಿಭಾಗಗಳಿವೆ. 1ನೇ ತರಗತಿಯಲ್ಲಿ ಎ, ಬಿ ವಿಭಾಗಗಳಿವೆ, 2ನೇ ತರಗತಿ ಯಲ್ಲಿ 44, 3ನೇ ತರಗತಿಯಲ್ಲಿ 48 ಮಕ್ಕಳಿದ್ದು ಎ, ಬಿ ವಿಭಾಗ ಹೊಂದಿದೆ. 4ಮತ್ತು 5ರಲ್ಲಿ 29ಹಾಗೂ 19 ಮಕ್ಕಳಿದ್ದಾರೆ. 6 ಮತ್ತು 7ರಲ್ಲಿ 48 ಮತ್ತು 38 ವಿದ್ಯಾರ್ಥಿಗಳಿದ್ದು ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಎ, ಬಿ ವಿಭಾಗಗಳಿವೆ. ಒಟ್ಟು 272 ವಿದ್ಯಾರ್ಥಿಗಳಿಗೆ 6 ಶಿಕ್ಷಕರಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರು ಸೇರಿದಂತೆ 4 ಶಿಕ್ಷಕರ ಕೊರತೆ ಉಂಟಾಗಿದೆ.

ಎಲ್‌ಕೆಜಿ ಮತ್ತು ಯುಕೆಜಿಯಲ್ಲಿ 30 ಮಕ್ಕಳಿದ್ದಾರೆ. ಹೆತ್ತವರ ಹಾಗೂ ಎಸ್‌ಡಿಎಂಸಿ ಅವರ ಸಹಕಾರ ದಿಂದ ಇಬ್ಬರು ಗೌರವ ಶಿಕ್ಷಕ ರನ್ನು ನೇಮಿಸಲಾಗಿದೆ. ವಿಜ್ಞಾನ, ಗಣಿತ, ಸಮಾಜ ವಿಷಯಕ್ಕೆ ಸಂಬಂಧಿಸಿ ವಿಷಯವಾರು ಶಿಕ್ಷಕರ ಅಗತ್ಯವಿದೆ.

ಇದನ್ನೂ ಓದಿ:ಚೈ-ಸ್ಯಾಮ್ ದಾಂಪತ್ಯ ಮುರಿದು ಬೀಳಲು ಕಾರಣವಾಯ್ತೇ ‘ದಿ ಫ್ಯಾಮಿಲಿ ಮ್ಯಾನ್ 2’ ?

ಕೊಠಡಿ ಕೊರತೆ
ಶಾಲೆಯಲ್ಲಿ ಅನ್ನದಾಸೋಹ ಕೊಠಡಿ ಸೇರಿದಂತೆ12 ತರಗತಿ ಕೋಣೆಗಳಿದ್ದು ಇದರಲ್ಲಿ 5ತರಗತಿ ಕೋಣೆಗಳ ಮಹಡಿ ದುಸ್ಥಿತಿಯಿಂದ ಕೂಡಿದೆ. ತುರ್ತು 5 ಕೊಠಡಿಗಳ ಅಗತ್ಯವಿದೆ.

ಸ್ಥಳೀಯ ಸಂಘ ಸಂಸ್ಥೆಗಳಿಂದ ಕೈ ತೊಳೆಯುವ ಘಟಕ ಅಳವಡಿಸಲಾಗಿದೆ. ದಾನಿಗಳ ಸಹಕಾರದೊಂದಿಗೆ 1.5 ಲಕ್ಷ ರೂ. ವೆಚ್ಚದಲ್ಲಿ ಮಕ್ಕಳ ಪಾರ್ಕ್‌ ನಿರ್ಮಿಸುವ ಯೋಜನೆ ಹೊಂದ ಲಾ ಗಿದೆ. ಹಳೆ ವಿದ್ಯಾರ್ಥಿ ಸಂಘದಿಂದ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಬಸ್‌ ದೂರದ ಗ್ರಾಮೀಣ ಪ್ರದೇಶಗಳಾದ ರಾಗಿಹಕ್ಲು, ಹೇರೂರು, ಕುದ್ರಕೋಡು, ಉಳ್ಳೂರು, ಬಡಾಕರೆ ಸೇರಿದಂತೆ ನಿತ್ಯ 100 ಕಿ.ಮೀ. ವಿದ್ಯಾರ್ಥಿಗಳಿಗಾಗಿ ಸಂಚರಿಸುತ್ತದೆ. ಜನಪ್ರತಿನಿಧಿಗಳ ಹಾಗೂ ಇಲಾಖೆಗಳಿಂದ ಇನ್ನಷ್ಟು ಮೂಲ ಸೌಕರ್ಯಗಳ ಸಮಸ್ಯೆಗಳಿಗೆ ಸ್ಪಂದಿಸಿದರೆ ಖಾಸಗಿ ಶಾಲೆಗಳ ಸಂಖ್ಯೆಯನ್ನು ಮೀರಿಸುವ ವಿಶ್ವಾಸ ಶಿಕ್ಷಕರ ಹಾಗೂ ಎಸ್‌ಡಿಎಂಸಿ ಅವರದ್ದು.

ಮೂಲಸೌಕರ್ಯಗಳ ಸಮಸ್ಯೆ
ನಲಿ-ಕಲಿ ತರಗತಿಗಳಿಗೆ ಕುರ್ಚಿ, ಟೇಬಲ್‌ಗ‌ಳ ಕೊರತೆ ಉಂಟಾಗಿದೆ. ಡೆಸ್ಕ್ ಗಳ ದುರಸ್ತಿ ಮಾಡಲು ಬಾಕಿ ಇದೆ. ಈಗ ಇರುವ 4 ಶೌಚಾಲಯವು ಶಿಥಿಲಗೊಂಡಿದ್ದು ಹೆಚ್ಚುವರಿ ಶೌಚಾಲಯದ ಅಗತ್ಯವಿದೆ. ಗ್ರಾ.ಪಂ. ನರೇಗ ಯೋಜನೆ ಹಾಗೂ ಶಿಕ್ಷಣ ಇಲಾಖೆಯ ಸಹಕಾರದಲ್ಲಿ 5 ಲಕ್ಷ ರೂ.ದಲ್ಲಿ ಶೌಚಾಲಯ ನಿರ್ಮಾಣವಾಗಲಿದೆ ಎನ್ನಲಾಗಿದೆ. ಗ್ರಂಥಾಲಯಕ್ಕೆ ಕಟ್ಟಡದ ಅಗತ್ಯ ಇದೆ. ಪ್ರಯೋಗಾಲಯ, ಕಂಪ್ಯೂಟರ್‌, ಪ್ರೊಜೆಕ್ಟರ್‌, ಕ್ರೀಡಾ ಸಾಮಗ್ರಿಗಳ ಆವಶ್ಯಕತೆ ಇದೆ.

ಭೌತಿಕ ಸೌಲಭ್ಯ ನೀಡಿ
ಎಸ್‌ಡಿಎಂಸಿ ಅವರ ಸಂಪೂರ್ಣ ಸಹಕಾರ ಹಾಗೂ ಹಳೆ ವಿದ್ಯಾರ್ಥಿಗಳ ಮತ್ತು ದಾನಿಗಳ ಬೆಂಬಲದಿಂದ ಸರಕಾರಿ ಶಾಲೆಯು ಖಾಸಗಿ ಶಾಲೆಗಿಂತ ಹೆಚ್ಚು ವ್ಯವಸ್ಥಿತವಾಗಿ ನಡೆಯುತ್ತಿದೆ.ಸರಕಾರ ಭೌತಿಕ ಸೌಲಭ್ಯಗಳನ್ನು ನೀಡಿದರೆ ಖಾಸಗಿ ಶಾಲೆಗೆ ಪೈಪೋಟಿ ನೀಡಬಹುದು.
-ಶೇಖರ, ಮುಖ್ಯಶಿಕ್ಷಕ

-ಕೃಷ್ಣ ಬಿಜೂರು

ಟಾಪ್ ನ್ಯೂಸ್

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.