ವಿಜಯಪುರ ಜಿಲ್ಲೆಯಲ್ಲಿ 24 ಗಂಟೆಯೊಳಗೆ ಮೂರು ಬಾರಿ ಲಘು ಭೂಕಂಪ
Team Udayavani, Oct 2, 2021, 9:43 PM IST
ವಿಜಯಪುರ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನ ಸಂಭಿಸಿರುವುದು ದಾಖಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಆಲಮಟ್ಟಿ ಹಾಗೂ ಕಲಬುರಗಿಯಲ್ಲಿರುವ ರಿಕ್ಟರ್ ಮಾಪಕದಲ್ಲಿ ದಾಖಲಾಗಿರುವಂತೆ ಜಿಲ್ಲೆಯಲ್ಲಿ ಮೂರು ಬಾರಿ ಭೂಕಂಪ ಸಂಭವಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಅಧಿಕೃತ ಮಾಹಿತಿ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಸದರಿ ಸಂಭವಿಸಿದ ಭೂಕಂಪನ ಅಪಾಯಕಾರಿ ಅಲ್ಲದ ಕಾರಣ ಜಿಲ್ಲೆಯ ಜನರು ಭಯಪಡುವ ಅಗತ್ಯವಿಲ್ಲ ಎಂದೂ ಜಿಲ್ಲಾಡಳಿತ ಸಾರ್ವಜನಿಕರಿಗೆ ಧೈರ್ಯ ಹೇಳಿದೆ.
ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ 2.9 ಕಿ.ಮೀ. ಅಂತರದಲ್ಲಿ ಈಶಾನ್ಯ ಭಾಗದಲ್ಲಿ ಅ.2ರಂದು ಬೆಳಗ್ಗೆ. 8-31 ಗಂಟೆಗೆ ಲಘು ಭೂಕಂಪನ ಸಂಭವಿಸಿದೆ. 10 ಕಿ.ಮೀ. ಆಳದಲ್ಲಿ ಸಂಭವಿಸಿದ ಭೂಕಂಪನ 2 ಪ್ರಮಾಣದಷ್ಟಿತ್ತು. ಇದಲ್ಲದೇ ಅ.1 ರಂದು ಬಸವನಬಾಗೇಬಾಡಿಯ ಮಸೂತಿ ಬಳಿ 15 ಕಿ.ಮೀ ಆಳದಲ್ಲಿ 2.5 ಅಂತರಲ್ಲಿ ಮಧ್ಯಾಹ್ನ 1.47 ಕ್ಕೆ 2.5 ಪ್ರಮಾಣದ ಭೂಕಂಪ ಸಂಭವಿರುವುದು ದಾಖಲಾಗಿದೆ. ಅ.1 ರಂದೇ ಮಧ್ಯಾಹ್ನ 4.10 ಕ್ಕೆ ವಿಜಯಪುರ ನಗರದ ನೈರುತ್ಯ ಭಾಗದಲ್ಲಿ10 ಕಿ.ಮೀ. ಅಂತರದಲ್ಲಿ 10 ಕಿ.ಮೀ. ಆಳದಲ್ಲಿ 2.2 ಪ್ರಮಾಣದಷ್ಟು ಭೂಕಂಪ ಸಂಭವಿಸಿರುವುದು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.