ಜನರ ವಿಶ್ವಾಸ ಗಳಿಸಿ ಕಾರ್ಯನಿರ್ವಹಿಸಿ: ಸಿಇಒ
Team Udayavani, Oct 3, 2021, 6:15 PM IST
ತುಮಕೂರು: ಗ್ರಾಮೀಣ ಮಟ್ಟದಲ್ಲಿ ಜನರ ವಿಶ್ವಾಸ ಗಳಿಸಿ ಕಾರ್ಯನಿರ್ವಹಿಸಿದಾಗ ಮಾತ್ರ ಸರ್ಕಾರದ ನಗದು ರಹಿತ ವ್ಯವಹಾರ ಯೋಜನೆ ಯಶಸ್ವಿಯಾಗುತ್ತದೆ ಎಂದು ಜಿಪಂ ಸಿಇಒ ಡಾ. ಕೆ. ವಿದ್ಯಾಕುಮಾರಿ ಬಿ.ಸಿ.ಸಖೀಯರಿಗೆ ಹೇಳಿದರು.
75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಜಿಪಂ ಸಭಾಂಗಣದಲ್ಲಿ ಎನ್‌ಆರ್‌ಎಲ್‌ಎಂ ಯೋಜನೆಯಡಿ “ಒಂದು ಗ್ರಾಪಂ-ಒಂದು ಬಿ.ಸಿ. ಸಖೀ’ ಎಂಬ ಪರಿಕಲ್ಪನೆಯಿಂದ ಆಯಾ ಗ್ರಾಪಂ ಮಟ್ಟದ ಸಂಜೀವಿನಿ ಸಂಘಗಳ ಸದಸ್ಯ ಮಹಿಳೆಯೊಬ್ಬರನ್ನು ಆಯ್ಕೆ ಮಾಡಿ, ತರಬೇತಿ ಹೊಂದಿದ ಬಿ.ಸಿ. ಸಖೀಯರಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ, ಸಮಾಜದ ಕಟ್ಟ ಕಡೆಯ ಮಹಿಳೆಯ ಮನೆ ಬಾಗಿಲಿಗೆ ಸರ್ಕಾರದ ವಿವಿಧ ಸೌಲಭ್ಯ ಹಾಗೂ ಬ್ಯಾಂಕಿನ ಹಲವಾರು ಸೌಲಭ್ಯ ಆನ್‌ಲೈನ್ ಮೂಲಕ ತಲುಪಿಸುವ ನಿಟ್ಟಿನಲ್ಲಿ ಬಿ.ಸಿ. ಸಖೀಯರನ್ನು ಆಯ್ಕೆ ಮಾಡಲಾಗಿದ್ದು, ತರಬೇತಿ ಪಡೆದ ಬಿ.ಸಿ. ಸಖೀಯರು ಪ್ರಾಮಾಣಿಕವಾಗಿ ಸೇವೆ ಒದಗಿಸಿದಲ್ಲಿ ತಾವೂ ಸಹ ಆರ್ಥಿಕವಾಗಿ ಸಬಲರಾಗಬಹುದು ಎಂದರು.
ಇದನ್ನೂ ಓದಿ:-ಶಾರುಖ್ ಖಾನ್ ಪುತ್ರನ ಮಾದಕ ನಂಟು
ಒಂದು ಗ್ರಾಮ ಪಂಚಾಯತಿ-ಒಂದು ಬಿ.ಸಿ. ಸಖೀ’ ಕಾರ್ಯಕ್ರಮ ಯಶಸ್ವಿಯಾದರೆ ಗ್ರಾಮೀಣ ಪ್ರದೇಶದವರು ನಗರ ಪ್ರದೇಶ ದವರಂತೆಯೇ ವ್ಯವಹರಿಸಬಹುದು. ಕೆಲವು ಗ್ರಾಮೀಣ ಮಹಿಳೆಯರಿಗೆ ಬ್ಯಾಂಕಿನ ವ್ಯವಹಾರದ ಜ್ಞಾನ ಇರುವುದಿಲ್ಲ. ಇಂತಹ ಮಹಿಳೆಯರು, ಬ್ಯಾಂಕಿಗೆ ಭೇಟಿ ನೀಡಲಾಗದ ಅಶಕ್ತ ವಯೋವೃದ್ಧರಿಗೆ ಈ ಸೇವೆಯನ್ನು ಒದಗಿಸಲು ಬಿ.ಸಿ. ಸಖೀಯರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಜಿಪಂ ಯೋಜನಾ ನಿರ್ದೇಶಕ ನರಸಿಂಹಮೂರ್ತಿ ಮಾತನಾಡಿ, ಆರ್. ಸೆಟಿ ಸಂಸ್ಥೆ ಮೂಲಕ ಬಿ.ಸಿ. ಸಖೀಯರಿಗೆ 5 ದಿನಗಳ ತರಬೇತಿ ನೀಡಲಾಗಿದ್ದು, ಬಿ.ಸಿ. ಸಖೀಯರು ಸ್ವ ಸಹಾಯ ಗುಂಪುಗಳಿಗೆ ಸರ್ಕಾರದಿಂದ ದೊರೆಯುವ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಸಹಕರಿಸಬೇಕು. ಕನಸು ಕಾಣುವುದು ಸುಲಭ. ಆದರೆ, ಕನಸು ನನಸಾಗಲು ಪರಿಶ್ರಮ ಇರಬೇಕು.
ಯಾರಿಗೂ ಸುಲಭವಾಗಿ ಯಶಸ್ಸು ಸಿಗುವುದಿಲ್ಲ. ಪರಿಶ್ರಮ ಪಟ್ಟರೆ ಮಾತ್ರ ಅದಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ ಎಂದರು. ಲೀಡ್ ಬ್ಯಾಂಕ್ ಮ್ಯಾನೇಜರ್, ಆರ್.ಸೆಟಿ ಸಂಸ್ಥೆ ನಿರ್ದೇಶಕ, ಅಶೋಕ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.