ಭವಾನಿಪುರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಮಮತಾ ಬ್ಯಾನರ್ಜಿ: ದೀದಿ ಸಿಎಂ ಪಟ್ಟಕ್ಕಿಲ್ಲ ಅಡ್ಡಿ
Team Udayavani, Oct 3, 2021, 2:14 PM IST
ಕೋಲ್ಕತ್ತಾ: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಭವಾನಿಪುರದಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡು ಬಂದಿದ್ದ ಮಮತಾ ಬ್ಯಾನರ್ಜಿ ಪ್ರತಿ ಸುತ್ತಿನಲ್ಲೂ ತಮ್ಮ ಪ್ರಾಬಲ್ಯ ಮೆರೆದರು. ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ತಿಬ್ರೆವಾಲಾ ಯಾವ ಹಂತದಲ್ಲೂ ದೀದಿ ಪಡೆದ ಮತಗಳ ಸಮೀಪವೂ ಬರಲಾಗಿಲ್ಲ. ಅಂತಿಮವಾಗಿ 21 ಹಂತಗಳ ಎಣಿಕೆಯ ಬಳಿಕ ಮಮತಾ ಬ್ಯಾನರ್ಜಿ 84709 ಮತ ಪಡೆದು, ಬಿಜೆಪಿ ಅಭ್ಯರ್ಥಿಯಿಂದ 58389 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಬಿಜೆಪಿಯ ಪ್ರಿಯಾಂಕಾ 26320 ಮತಗಳನ್ನಷ್ಟೇ ಪಡೆದರು.
ಕಳೆದ ಗುರುವಾರ ಮತದಾನ ನಡೆದಿದ್ದು, ಶೇ 57ರಷ್ಟು ಮಾತ್ರ ಮತದಾನ ನಡೆದಿದೆ. ರಾಷ್ಟ್ರದ ಗಮನ ಸೆಳೆದಿರುವ ಈ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯಿಂದ ವಕೀಲೆ, ಬಿಜೆಪಿ ಯೂತ್ ವಿಂಗ್ ಅಧ್ಯಕ್ಷೆಯಾಗಿದ್ದ ಪ್ರಿಯಾಂಕಾ ತಿಬ್ರೆವಾಲಾ ಸ್ಪರ್ಧೆ ಮಾಡಿದ್ದರು.
ಇದನ್ನೂ ಓದಿ:ಚೈ-ಸ್ಯಾಮ್ ವಿಚ್ಛೇದನಕ್ಕೆ ನಟ ಅಮೀರ್ ಖಾನ್ ಕಾರಣ : ಕಂಗನಾ ಗಂಭೀರ ಆರೋಪ
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಅವರು ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. ಆ ಹಿನ್ನೆಲೆಯಲ್ಲಿ ಮಮತಾ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಭವಾನಿಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿತ್ತು. 2011 ಮತ್ತು 2016ರ ವಿಧಾನಸಭೆ ಚುನಾವಣೆಗಳಲ್ಲಿ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಗೆಲುವು ಸಾಧಿಸಿದ್ದರು.
ಮಮತಾ ಬ್ಯಾನರ್ಜಿಯ ಕೋಲ್ಕತ್ತಾದ ನಿವಾಸದ ಹೊರಗಡೆ ಟಿಎಂಸಿ ಬೆಂಬಲಿಗರು ನೆರೆದಿದ್ದು, ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಇನ್ನು ಈಗಾಗಲೇ ಚುನಾವಣಾ ಆಯೋಗವು ಯಾವುದೇ ಸಂಭ್ರಮಾಚರಣೆ ಅಥವಾ ಮೆರವಣಿಗೆಗೆ ಅವಕಾಶವಿಲ್ಲ ಎಂದು ಹೇಳಿದೆ.
ಮಮತಾ ಬ್ಯಾನರ್ಜಿ ಜಯದ ಬಗ್ಗೆ ಸಹೋದರ ಕಾರ್ತಿಕ್ ಸಂತಸ ವ್ಯಕ್ತಪಡಿಸಿದ್ದಾರೆ. “ಇಲ್ಲಿ ಟಿಎಂಸಿ ಅಲ್ಲದೇ ಬೇರೆ ಯಾವ ಪಕ್ಷಕ್ಕೂ ಒಂದು ಸ್ಥಾನವಿಲ್ಲ. ತೃಣಮೂಲ ಕಾಂಗ್ರೆಸ್ ಪಕ್ಷ ಹಾಗೂ ದೀದಿ ಜನರಿಗಾಗಿ ಕಾರ್ಯ ನಿರ್ವಹಣೆ ಮಾಡುತ್ತಾರೆ. ದೆಹಲಿಯಲ್ಲಿ (ಕೇಂದ್ರ) 2024 ರಲ್ಲಿ ನಾವು ಸರ್ಕಾರವನ್ನು ರಚನೆ ಮಾಡುತ್ತೇವೆ,” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.