ಮಹಿಳೆಯರಿಗೆ ಮೀಸಲಾತಿ ನೀಡಲು ಒತಾಯ
Team Udayavani, Oct 3, 2021, 5:11 PM IST
ಹೊಳೆನರಸೀಪುರ: ಸ್ವತಂತ್ರ ಬಂದು 75 ವರ್ಷಗಳಾಗಿದ್ದು ಮಹಿಳೆಯರಿಗೆ ಶೇ. 33 ಉದ್ಯೋಗ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಮೀಸಲಾತಿ ದೊರಕುವಂತೆ ಮಾಡುವಲ್ಲಿ ಕೇಂದ್ರ ಸರ್ಕಾರ ಅನುಷ್ಠಾನಗೊಳಿಸುವಂತೆ ಮಾಜಿ ಸಚಿವ ಹಾಗು ಶಾಸಕ ಎಚ್.ಡಿ.ರೇವಣ್ಣ ನುಡಿದರು.
ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಏರ್ಪಡಿಸಿದ್ದ ಮಹಾತ್ಮ ಗಾಂಧೀಜಿ 152 ನೇ ಹಾಗೂ ಮಾಜಿ ಪ್ರಧಾನಿ ಲಾಲ್‌ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಮಹಾತ್ಮಗಾಂಧೀಜಿ ಅವರು ಅಹಿಂಸಾ ತತ್ವದಡಿಯಲ್ಲಿ ಯಾವುದೆ ರಕ್ತ ಪಾತವಿಲ್ಲದೆ ಸ್ವತಂತ್ರಯ ತಂದು ಕೊಟ್ಟಿದ್ದಾರೆ. ತಂದು ಕೊಟ್ಟಿರುವ ಮಹಾತ್ಮರ ಆತ್ಮಕ್ಕೆ ಶಾಂತಿ ದೊರಕಬೇಕಾದರೆ ಬಡವರಿಗೆ ಶಿಕ್ಷಣ ದೊರಕಬೇಕು ಎಂದರು.
ಇದನ್ನೂ ಓದಿ:- ಸಿದ್ದರಾಮಯ್ಯನವರಿಗೆ ಜೆಡಿಎಸ್ ಮನೆಯೊಳಗೆ ಇಣುಕಿ ನೋಡುವ ಚಾಳಿ ಯಾಕೆ: ಸಿ.ಟಿ.ರವಿ
ಒಂದು ವಾರದಿಂದ ಸಮಾಜದಲ್ಲಿ ಬಹಳಷ್ಟು ಮಂದಿ ನೇಣಿಗೆ ಶರಣಗಾಗುತ್ತಿದ್ದಾರೆ. ಇದಕ್ಕೆ ಕಾರಣ ಜನರಲ್ಲಿನ ಆತ್ಮವಿಶ್ವಾಸ ಕುಗ್ಗುತ್ತಿರುವುದಕ್ಕೆ ಕಾರಣವಾಗಿದೆ. ಜಯಂತಿ ಸಂದರ್ಭದಲ್ಲಿ ಯೋಜನೆಯೊಂದನ್ನು ಜಾರಿಗೆ ತರಬೇಕಿದೆ ಎಂದರು. ವೇದಿಕೆ ಕಾರ್ಯಕ್ರಮ ಆರಂಭಕ್ಕೆ ಮೊದಲು ರೇವಣ್ಣ ಅನೌಪಚಾರಿಕವಾಗಿ ಮಾತನಾಡಿ, ಪಟ್ಟಣದ ಸರಹದ್ದಿನಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಅವಶ್ಯಕ ವಾಗಿದ್ದು, ಅದಕ್ಕೆ ಪೊಲೀಸ್ ಇಲಾಖೆ ತುರ್ತಾಗಿ ಕ್ರಮಕೈಗೊಂಡು ಮುಖ್ಯ ರಸ್ತೆ ಸೇರಿದಂತೆ ಎಲ್ಲಡೆ ಸಿಸಿ ಕ್ಯಾಮರಾ ಅಳವಡಿಕೆಗೆ ಮುಂದಾಗುವಂತೆ ಸಭೆಯಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಸಿಸಿ ಕ್ಯಾಮರಾ ಆಳವಡಿಕೆಗೆ ಪೋಲೀಸ್ ಅಧಿಕಾರಿಗಳು ಮತ್ತು ತಹಶೀಲ್ದಾರ್ ಒಂದಡೆ ಕುಳಿತು ತುರ್ತಾಗಿ ಯೋಜನೆ ರೂಪಿಸಿ ಅನುಷ್ಠಾನಗೊಳಿಸಲು ಸೂಚಿಸಿದರು. ಪಟ್ಟಣದ ವಿವಿಧೆಡೆ ಅಳವಡಿಕೆಗೆ ತೀರ್ಮಾನಿಸಲಾಯಿತು.
ತಾಲೂಕಿನ ಕಾಮ ಸಮುದ್ರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಅಫಘಾತಗಳ ಸಂಭವಿ ಸುತ್ತಿದೆ. ಆದ್ದರಿಂದ ಪೊಲೀಸ್ ಇಲಾಖೆ ಕಾಮ ಸಮುದ್ರ ಅಕ್ಕಪಕ್ಕ ಸುಮಾರು 500 ಮೀ. ರಸ್ತೆಯಲ್ಲಿ ಡೆಂಜರ್ ಝೋನ್ ಎಂದು ತಿರ್ಮಾನಿಸಿ ಆ ರಸ್ತೆಗಳಲ್ಲಿ ನಾಲ್ಕಾರು ಸ್ಥಳಗಳಲ್ಲಿ ಅಫಘಾತದ ವಲಯ ಎಂದು ನಾಮಫಲಕ ಆಳವಡಿಸಲು ಸೂಚಿಸಿದರು.
ಜಯಂತಿ ಪ್ರಯುಕ್ತ ತಾಲೂಕಿನ ಇಬ್ಬರು ಹಿರಿಯ ನಾಗರಿಕರಿಗೆ ಶಾಲು ಹೊದಿಸಿ ಗೌರವಿಸಲಾಯಿತು. ತಹಶೀಲ್ದಾರ್ ಕೆ.ಕೆ.ಕೃಷ್ಣ ಮೂರ್ತಿ, ಇಒ ಕೆ.ಯೋಗೇಶ್, ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.