ಇತ್ತೀಚಿನ ಟ್ರೆಂಡ್‌: ರೈತ- ಗ್ರಾಹಕರ ನಡುವಿನ “ನೇರ ವಹಿವಾಟು’

ಜಿಲ್ಲೆಯಲ್ಲಿ ರೈತ ಉತ್ಪಾದಕ ಸಂಸ್ಥೆ ರಚನೆ

Team Udayavani, Oct 4, 2021, 5:47 AM IST

ಇತ್ತೀಚಿನ ಟ್ರೆಂಡ್‌: ರೈತ- ಗ್ರಾಹಕರ ನಡುವಿನ “ನೇರ ವಹಿವಾಟು’

ಸಾಂದರ್ಭಿಕ ಚಿತ್ರ.

ಉಡುಪಿ: ದಲ್ಲಾಳಿಗಳ ಹಾವಳಿ ತಪ್ಪಿಸಲು, ವಿವಿಧ ಇಲಾಖೆಗಳಿಂದ ರೈತರಿಗೆ ಸಿಗಬೇಕಾದ ಸೌಲಭ್ಯಗಳನ್ನು ಅಡೆತಡೆ ಇಲ್ಲದೆ, ನೇರವಾಗಿ ಮತ್ತು ಸಕಾಲದಲ್ಲಿ ತಲುಪಿಸುವ ಉದ್ದೇಶದಿಂದ ಉಡುಪಿ ಜಿಲ್ಲೆಯಲ್ಲಿ ರೈತರನ್ನೇ ಒಳಗೊಂಡ 4 ಎಫ್ಒಪಿ (ರೈತ ಉತ್ಪಾದಕ ಸಂಸ್ಥೆ) ರಚನಾ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಕೇಂದ್ರ ಸರಕಾರ 2016ರ ಬಜೆಟ್‌ನಲ್ಲಿ 6,865 ಕೋಟಿ ರೂ. ವೆಚ್ಚದಲ್ಲಿ 10 ಸಾವಿರ ಹೊಸ ಎಫ್ಒಪಿ ಸ್ಥಾಪನೆ ಯೋಜನೆ ಪ್ರಕಟಿಸಿದೆ. ಬೆಳೆ ಬೆಳೆಯುವ ರೈತ- ಕೊಳ್ಳುವ ಗ್ರಾಹಕರ “ನೇರ ವಹಿವಾಟು’ ಇತ್ತೀಚಿನ ಟ್ರೆಂಡ್‌ ಆಗಿದೆ. ಆ ಮೂಲಕ ಮಾರುಕಟ್ಟೆ ಬೆಲೆಗಿಂತ ಶೇ.15ರಿಂದ 30ರಷ್ಟು ಅಧಿಕ ಆದಾಯ ಪಡೆಯುವ ಅವಕಾಶ ರೈತರಿಗಿದ್ದರೆ, ಅಂಗಡಿ, ಮಾರುಕಟ್ಟೆ ದರಕ್ಕಿಂತ ಅಗ್ಗದಲ್ಲಿ ಕೃಷಿ ಉತ್ಪನ್ನ ಖರೀದಿಸುವ ಅವಕಾಶ ಗ್ರಾಹಕರದ್ದು.

ಜಿಲ್ಲೆಯಲ್ಲಿ ಸಣ್ಣ, ಅತಿಸಣ್ಣ ಹಿಡುವಳಿದಾರರು ಬಹುಸಂಖ್ಯೆಯಲ್ಲಿ ಇದ್ದು, ರೈತರಿಗೆ ಸುಧಾರಿತ ತಂತ್ರಜ್ಞಾನ ಲಭ್ಯತೆ, ಸಾಲ, ಹೆಚ್ಚಿನ ಮಾರುಕಟ್ಟೆ ಸಂಪರ್ಕ ಕಲ್ಪಿಸಿ, ಉತ್ಪಾದಕತೆ ಹೆಚ್ಚಿಸುವ ನಿಟ್ಟಿನಲ್ಲಿ ರೈತ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗು ತ್ತಿದೆ. ಉಡುಪಿ ಜಿಲ್ಲೆಯಲ್ಲಿ ತೆಂಗು, ಗೇರು,
ಮಲ್ಲಿಗೆ ಬೆಳೆಗೆ ಸಂಬಂಧಿಸಿದಂತೆ ಹೊಸ ದಾಗಿ 4 ಎಫ್ಪಿಒ ರಚನೆ ಆಗಲಿದೆ.

ಬೆಳೆ ಆಯ್ಕೆ
ಉಡುಪಿ ತಾಲೂಕಿನ ಎಫ್ಪಿಒಗೆ ತೆಂಗು ಮತ್ತು ತೋಟಗಾರಿಕೆ ಬೆಳೆ, ಕಾಪು ತಾಲೂಕಿನ ಎಫ್ಒಪಿಒಗೆ ಮಲ್ಲಿಗೆ, ಕುಂದಾಪುರ ಎಫ್ಒಪಿಒಗೆ ಗೇರು, ಕಾರ್ಕಳ ಎಫ್ಪಿಒಗೆ ತೆಂಗು ಮತ್ತು ತೋಟಗಾರಿಕೆ ಬೆಳೆ ಆಯ್ಕೆ ಮಾಡ ಲಾಗಿದೆ. ಕಾರ್ಕಳದ ನಿಟ್ಟೆ, ಉಡುಪಿಯ ಹಿರಿಯಡ್ಕ, ಕುಂದಾಪುರದ ವಂಡ್ಸೆ, ಕಾಪುವಿನ ಶಂಕರಪುರದಲ್ಲಿ ಈ ರೈತ ಉತ್ಪಾದಕ ಸಂಸ್ಥೆಗಳ ಕೇಂದ್ರ ಕಚೇರಿ ಕಾರ್ಯನಿರ್ವಹಿಸಲಿದೆ.

ಇದನ್ನೂ ಓದಿ:ಹಳಿಯಾಳದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿರುವ ಟ್ರಕ್ ಗಳ ನಿಲುಗಡೆ

ಸಂಸ್ಥೆಯ ಸ್ವರೂಪ ಹೇಗೆ?
ಮೊದಲಿಗೆ ಜಿಲ್ಲೆಯಲ್ಲಿ ಯಾವ ಬೆಳೆ ಯನ್ನು ಎಲ್ಲಿ ಹೆಚ್ಚಾಗಿ ಬೆಳೆಯಲಾಗು ತ್ತದೆ ಎಂಬುದನ್ನು ಗಮನಿಸಲಾಗುತ್ತದೆ. ಆಯಾ ಭಾಗದಲ್ಲಿ ಕೃಷಿ ಉತ್ಪನ್ನಗಳ ಕ್ಲಸ್ಟರ್‌ಗಳಲ್ಲಿ ಎಫ್ಒಪಿಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ. ರೈತ ಉತ್ಪಾದಕ ಸಂಸ್ಥೆ ಅಸ್ತಿತ್ವಕ್ಕೆ ತರಲು ಕನಿಷ್ಠ 300 ಹಾಗೂ ಗರಿಷ್ಠ 1,000 ರೈತರ ಅಗತ್ಯವಿದೆ. ಅವರಿಂದ ತಲಾ 1,000 ರೂ.ನಂತೆ ಒಟ್ಟು 10ಲ.ರೂ. ಶೇರು ಹಣ ಸಂಗ್ರಹವಾಗುತ್ತದೆ. ಇದಲ್ಲದೇ ಕೇಂದ್ರ ಸರಕಾರ ಅಧೀನದ ಸಣ್ಣ ರೈತರ ಒಕ್ಕೂಟ 10 ಲ.ರೂ. ನೆರವು ನೀಡುತ್ತಿದ್ದು, 20 ಲ.ರೂ. ಬಂಡವಾಳದೊಂದಿಗೆ ರೈತರ ಕಂಪೆನಿ ಕಾರ್ಯ ನಿರ್ವಹಿಸುತ್ತದೆ. ಸಂಘದ ದೈನಂದಿನ ಕಾರ್ಯ ನಿರ್ವಹಣೆಗೆ ಸಿಇಒ ಹಾಗೂ ಸಿಬಂದಿ ನೇಮಕಾತಿ ಮಾಡಿಕೊಳ್ಳಬೇಕು. ಪೂರ್ಣ ಪ್ರಮಾಣದಲ್ಲಿ ಸಂಸ್ಥೆ ಅಸ್ತಿತ್ವಕ್ಕೆ ಬಂದ ಅನಂತರ ಸದಸ್ಯರ ಉತ್ಪನ್ನಗಳನ್ನು ಮಾರುಕಟ್ಟೆಯ ಗರಿಷ್ಠ ಮೌಲ್ಯಕ್ಕೆ ಖರೀದಿ ಮಾಡಲಾಗುತ್ತದೆ
30 ಲ.ರೂ. ನೆರವು ವ್ಯವಹಾರ ಸಂಸ್ಥೆಗಳ ಜತೆ ತೊಡಗಿಸಿಕೊಂಡು 5 ವರ್ಷಂಪ್ರತಿ ಎಫ್ಪಿಒಗೆ ವೃತ್ತಿಪರ ಬೆಂಬಲ ನೀಡಲು ಅನುಷ್ಠಾನ ಏಜೆನ್ಸಿ ಗಳನ್ನು ಗುರುತಿಸಲಾಗುತ್ತದೆ. ಉಡುಪಿ ಜಿಲ್ಲೆಯಲ್ಲಿ ನಿಟ್ಟೆ ಇನ್ಕ್ಯುಬೇಷನ್ ಸೆಂಟರ್‌ ನೋಡಲ್‌ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಕೇಂದ್ರ ಸರಕಾರ ಪ್ರತೀ ಸಂಸ್ಥೆಗೆ 3 ವರ್ಷದವರೆಗೆ ಸುಮಾರು 30 ಲ.ರೂ. ನೆರವು ನೀಡುತ್ತದೆ.

1,000 ಮಹಿಳಾ ಸದಸ್ಯರು
ಕಾಪು ತಾಲೂಕಿನ ಶಂಕರಪುರದಲ್ಲಿ ಉಡುಪಿ ಮಲ್ಲಿಗೆ ಬೆಳೆಗಾರರ ಸಂಘ ರಚಿಸಲಾಗಿದ್ದು, ಇಲ್ಲಿರುವ 1,000 ಸದಸ್ಯರು ಮಹಿಳೆಯರು. ರಾಜ್ಯದಲ್ಲೇ ಮೊದಲ ಬಾರಿಗೆ ಆಡಳಿತ ನಿರ್ವಹಣೆಗೂ ಮಹಿಳೆಯರದ್ದೇ ಸಾರಥ್ಯ. ಇಲ್ಲಿ ನಿರ್ದೇಶಕರು, ಸಿಇಒ, ಸಿಬಂದಿ ಎಲ್ಲರೂ ಮಹಿಳೆಯರು.

ಮೌಲ್ಯವರ್ಧನೆಗೆ ಎಫ್ಒಪಿ ಸ್ಥಾಪನೆ
ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗಾಗಿ ಎಫ್ಒಪಿಗಳನ್ನು ಸ್ಥಾಪಿಸಲಾಗುತ್ತಿದೆ. ಜಿಲ್ಲೆಯಲ್ಲಿ ತೆಂಗು, ಮಲ್ಲಿಗೆ, ಕಾಳುಮೆಣಸು ಉತ್ಪನ್ನಗಳಿಗೆ ಮಾರ್ಕೆಟಿಂಗ್‌, ಬ್ರ್ಯಾಂಡಿಂಗ್ ಮತ್ತು ರಫ್ತು ಉತ್ತೇಜಿಸಲು ರೈತರಿಗೆ ಸಂಸ್ಥೆ ನೆರವಾಗಲಿದೆ. ನಿಟ್ಟೆ ಇನ್ಕ್ಯುಬೇಷನ್ ಸೆಂಟರ್‌ ನೋಡಲ್‌ ಸಂಸ್ಥೆಯಾಗಿದ್ದು, ಎಫ್ಒಪಿಗಳನ್ನು ಮುನ್ನಡೆಸಲು 3 ವರ್ಷ ಅಗತ್ಯ ತರಬೇತಿ, ಮಾರ್ಗದರ್ಶನ ನೀಡಲಿದೆ.
-ಡಾ| ಕೆಂಪೇಗೌಡ, ಜಂಟಿ ನಿರ್ದೇಶಕ, ಕೃಷಿ ಇಲಾಖೆ, ಉಡುಪಿ

ಟಾಪ್ ನ್ಯೂಸ್

ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

India-Afghanistan: ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

sand

Kaup: ಕೈಪುಂಜಾಲು; ಅಕ್ರಮ ಮರಳು ಸಂಗ್ರಹ; ಪ್ರಕರಣ ದಾಖಲು

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

India-Afghanistan: ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.