ಲಖೀಂಪುರ ಹಿಂಸಾಚಾರ: ಪ್ರತಿಭಟನೆ ತೀವ್ರ ಸ್ವರೂಪಕ್ಕೆ; ಅಖಿಲೇಶ್ ವಶಕ್ಕೆ
Team Udayavani, Oct 4, 2021, 11:55 AM IST
ಲಕ್ನೋ: ರೈತರ ಪ್ರತಿಭಟನೆ ವೇಳೆ ವ್ಯಾಪಕ ಹಿಂಸಾಚಾರಕ್ಕೆ ಗುರಿಯಾಗಿರುವ ಉತ್ತರಪ್ರದೇಶದ ಲಖೀಂಪುರ ಖೇರಿ ಘಟನೆ ಖಂಡಿಸಿ ದೇಶಾದ್ಯಂತ ರೈತ ಸಂಘಟನೆಗಳು ಸೇರಿದಂತೆ ಪ್ರಮುಖ ವಿಪಕ್ಷಗಳು ಸೋಮವಾರ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪಕ್ಕೆ ತಿರುಗಿದೆ. ಸಮಾಜವಾದಿ ಪಕ್ಷದ ಅಧ್ಯಕ್ಷ , ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ರಾಮ್ ಗೋಪಾಲ್ ಯಾದವ್ , ಪ್ರಗತಿಶೀಲ್ ಸಮಾಜವಾದಿ ಪಕ್ಷದ ಸ್ಥಾಪಕ ಶಿವಪಾಲ್ ಯಾದವ್ ಸೇರಿದಂತೆ ಹಲವು ಪ್ರಮುಖ ನಾಯಕರನ್ನು ಲಕ್ನೋ ದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆ ವೇಳೆ ಸೆಕ್ಷನ್ 144 ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ಅಖಿಲೇಶ್ ಯಾದವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಮಾಜವಾದಿ ಪಕ್ಷ ಮತ್ತು ಇತರ ಪ್ರಮುಖ ವಿಪಕ್ಷಗಳ ನಾಯಕರನ್ನೂ ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಲಖೀಂಪುರ ಖೇರಿಯಲ್ಲಿ ರವಿವಾರ ಪ್ರತಿಭಟನ ಕಾರ ರೈತರು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿಕ ನಿಷ್ಠ 8 ಮಂದಿ ಸಾವಿಗೀಡಾಗಿದ್ದು, ಹಲವರು ಗಾಯ ಗೊಂಡಿದ್ದರು. ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉತ್ತರ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ದೇಶಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸುವಂತೆ ರೈತರಿಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಸುಪ್ರೀಂ
ನ್ಯಾಯಮೂರ್ತಿ ನೇತೃತ್ವದಲ್ಲಿ ಘಟನೆ ಬಗ್ಗೆ ತನಿ ಖೆಗೂ ಆ ಗ್ರಹಿಸಿದೆ. ಇದೇ ವೇಳೆ, ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು ಲಖೀಂಪುರಕ್ಕೆ ಆಗಮಿಸಿ ಉನ್ನತ ಅಧಿಕಾರಿಗಳನ್ನು ಭೇಟಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.