ಮೈಸೂರು ದಸರಾಗೆ ದಿನಗಣನೆ: ಸಂಚಾರ ನಿಯಮ ಬದಲಾವಣೆ
ಸಂಚಾರ ದಟ್ಟಣೆ ತಪ್ಪಿಸಲು ಏಕಮುಖ ಸಂಚಾರ ವ್ಯವಸ್ಥೆ ರಸ್ತೆ ಬದಿ ವಾಹನ ನಿಲುಗಡೆಗೆ ಪೊಲೀಸರಿಂದ ನಿರ್ಬಂಧ
Team Udayavani, Oct 4, 2021, 2:01 PM IST
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ದಸರಾ ವೇಳೆ ನಗರದಲ್ಲಿ ಸಂಚಾರ ಸುವ್ಯವಸ್ಥೆಗಾಗಿ ಸಂಚಾರ ನಿಯಮಗಳಲ್ಲಿ ಬದಲಾವಣೆ ಮಾಡಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ನಿಷೇಧ: ಈ ಬಾರಿಯ ನಾಡಹಬ್ಬ ಮೈಸೂರು ದಸರಾದಲ್ಲಿ ದೀಪಾಲಂಕರವೇ ಪ್ರಮುಖ ಆಕರ್ಷಣೆ ಆಗಿರುವುದರಿಂದ ಸಾರ್ವಜನಿಕರು ರಸ್ತೆ ಬದಿ ಹೆಚ್ಚಾಗಿ ಸೇರುವುದರಿಂದ ಉಂಟಾಗುವ ಸಂಚಾರ ದಟ್ಟಣೆ ತಪ್ಪಿಸಲು ಏಕಮುಖ ಸಂಚಾರ ವ್ಯವಸ್ಥೆ ಜತೆಗೆ ರಸ್ತೆ ಬದಿಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ಇದನ್ನೂ ಓದಿ:- ನಟಿ Aisha sharma ಹಾಟ್ ಫೋಟೋಸ್
ನಿಯಮ ಬದಲಾವಣೆ: ನಗರ ಹೃದಯ ಭಾಗದ ಹಲವು ಪ್ರದೇಶಗಳಲ್ಲಿ ವಾಹನಗಳ ನಿಲುಗಡೆಗೆ ನಿಷೇಧ ಹೇರಲಾಗಿರುವ ಜತೆಗೆ ಅಂಬಾ ವಿಲಾಸ ಅರಮನೆ ಸುತ್ತ ಯಾವುದೇ ವಾಹನಗಳ ನಿಲುಗಡೆಗೆ ಅವಕಾಶವಿಲ್ಲ.
ಸಯ್ನಾಜಿರಾವ್ ರಸ್ತೆ, ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ, ಪುರಂದರ ರಸ್ತೆ ಬಿ.ರಾಚಯ್ಯ ವೃತ್ತ-ಬಿ.ಎನ್.ರಸ್ತೆ ಜಂಕ್ಷನ್, ಶಿವರಾತ್ರಿ ರಾಜೇಂದ್ರ ವೃತ್ತ-ಜಯ ಚಾಮರಾಜೇಂದ್ರ ವೃತ್ತ, ಆಲ್ಬರ್ಟ್ ವಿಕ್ಟರ್ ರಸ್ತೆಯ ಜಯಚಾಮರಾಜೇಂದ್ರ ವೃತ್ತ-ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ, ಅಶೋಕ ರಸ್ತೆಯ ನೆಹರು ವೃತ್ತ- ಮಹಾವೀರ ವೃತ್ತ, ಅಶೋಕ ರಸ್ತೆಯ ಮಹಾವೀರ ವೃತ್ತ- ಜಯಚಾಮರಾಜ ವೃತ್ತ, ಬಲರಾಮ ದ್ವಾರದ ಮುಂಭಾಗ, ಡಾ. ರಾಜ್‌ಕುಮಾರ್ ವೃತ್ತ-ಬಿ.ಎನ್.ನರಸಿಂಹಮೂರ್ತಿ ವೃತ್ತ, ವಸ್ತು ಪ್ರರ್ದಶನದ ಮುಂಭಾಗದ ಟ್ಯಾಂಕ್ ಬಂಡ್ ರಸ್ತೆಯ ಬಿಎನ್ ರಸ್ತೆ ಜಂಕ್ಷ-ಮೃಗಾಲಯದ ರಸ್ತೆ, ಇಟ್ಟಿಗೆಗೂಡಿನ ಹೊಸ ಬೀದಿ 5ನೇ ತಿರುವು ರಸ್ತೆ ಮೃಗಾಲಯದ ವೃತ್ತ-ವಸ್ತು ಪ್ರರ್ದಶನದ ಪೂರ್ವ ದ್ವಾರ, ಮಾನಸರ ರಸ್ತೆ ವಾಣಿವಿಲಾಸ ರಸ್ತೆ ಜಂಕ್ಷನ್ -ಲೋಕರಂಜನ್ ರಸ್ತೆ, ಮಲೆ ಮಹದೇಶ್ವರ ರಸ್ತೆಯ ಬಿ.ಎನ್.ರಸ್ತೆ ಜಂಕ್ಷನ್-(ಛತ್ರಿಮರ) ಚನ್ನಯ್ಯ ವೃತ್ತ, ಸರ್ಕಾರಿ ಭವನದ ರಸ್ತೆಯ ಸರ್ಕಾರಿ ಭವನದ ದ್ವಾರದ ರಾಜೇಂದ್ರ ಒಡೆಯರ್ ವೃತ್ತದವರೆಗೆ, ಸಂಪೂರ್ಣ ವಾಹನ ನಿಲುಗಡೆ ನಿಷೇಧಿಸಿ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ. ಅ.7 ರಿಂದ 15 ರವರೆಗೆ ಪ್ರತಿದಿನ ಸಾಯಂಕಾಲ 4 ರಿಂದ ರಾತ್ರಿ 12 ಗಂಟೆವರೆಗೆ ಈ ನಿಯಮ ಜಾರಿಯಲ್ಲಿರಲಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.