ಜಾತಿ ಗಣತಿ: ಪ್ರಧಾನಿ ತೀರ್ಮಾನವೇ ಅಂತಿಮ

ವಿದೇಶಗಳ ಜನಗಣತಿ ವರದಿ ಪರಿಶೀಲಿಸಲು ರಾಷ್ಟ್ರ ಮಟ್ಟದ ಸಮಿತಿ ರಚನೆ | ದೇಶಾದ್ಯಂತ ಗಣತಿಗೆ ಒತ್ತಾಯ: ನಾರಾಯಣಸ್ವಾಮಿ

Team Udayavani, Oct 4, 2021, 6:10 PM IST

caste censes-    MP narayana swamy

ಮೈಸೂರು: ದೇಶಾದ್ಯಂತ ಜಾತಿ ಗಣತಿಗೆ ಒತ್ತಾಯ ಬಂದ ಹಿನ್ನೆಲೆ, ಗಣತಿ ವಿಧಾನಕ್ಕಾಗಿ ವಿದೇಶಗಳ ಜನಗಣತಿ ವರದಿ ಪರಿಶೀಲಿಸಲು ರಾಷ್ಟ್ರಮಟ್ಟದ ಸಮಿತಿ ರಚಿಸಿದ್ದು, ಪ್ರಧಾನಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

ಕೇಂದ್ರ ಸಚಿವರಾದ ಬಳಿಕ ಮೊದಲ ಮೈಸೂರಿಗೆ ಆಗಮಿಸಿದ ಸಚಿವರು, ಸುತ್ತೂರು ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದು, ಸುದ್ದಿಗಾರರೊಂದಿಗೆ ಮಾತನಾಡಿದರು.

ಪರಿಶೀಲನೆ: ಬಿಹಾರ, ಮಹಾರಾಷ್ಟ್ರ ಸೇರಿ ದೇಶದ ಹಲವು ರಾಜ್ಯಗಳಲ್ಲಿ ಜಾತಿಗಣತಿಗಾಗಿ ಒತ್ತಾಯ ಕೇಳಿಬಂದಿದೆ. ಈಗಾಗಲೇ ರಾಜ್ಯದಲ್ಲಿ ನಡೆದಿರುವ ಜಾತಿ ಗಣತಿ ವಿಧಾನದ ಬಗ್ಗೆಯೂ ಅಧ್ಯಯನಗಳಾಗುತ್ತಿವೆ. ವಿದೇಶಗಳಲ್ಲಿ ನಡೆದಿರುವ ಗಣತಿ ಪರಿಶೀಲಿಸಲಾಗುತ್ತಿದೆ ಎಂದರು.

ಇದನ್ನೂ ಓದಿ;-  ಮಹಾಲಕ್ಷ್ಮಿ ಲೇಔಟ್ : ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ

ರಾಜ್ಯದಲ್ಲಿ ಜಾತಿ ಗಣತಿ ಜಾರಿ ವಿಚಾರವಾಗಿ ಪ್ರತಿಕ್ರಿಯಿಸಿ, ಒಬ್ಬ ವ್ಯಕ್ತಿ ಹೇಳಿಕೆಯನ್ನೇ ಜನರ ಹೇಳಿಕೆ ಎಂದು ಹೇಳಲಾಗುವುದಿಲ್ಲ. ಸಿದ್ದರಾಮಯ್ಯ ಹೊರತುಪಡಿಸಿ ಬೇರೆ ಯಾರಾದರೂ ಜಾತಿಗಣತಿ ಬಗ್ಗೆ ಮಾತನಾಡಿ¨ªಾರಾ, ಸಾರ್ವಜನಿಕವಾಗಿ ಎÇÉಾದರೂ ಈ ಬಗ್ಗೆ ಚರ್ಚೆಯಾಗಿದೆಯಾ, ಒಬ್ಬ ವ್ಯಕ್ತಿ ಬೇಡಿಕೆಯನ್ನು ಬೇಡಿಕೆ ಎನ್ನಲಾಗುತ್ತದೆಯಾ ಎಂದು ಪ್ರಶ್ನಿಸಿದರು.

ಜಾತಿಗಣತಿಗಾಗಿ ಸಿದ್ದರಾಮಯ್ಯ ಸರ್ಕಾರ 180 ಕೋಟಿ ರೂ. ಹಣ ಖರ್ಚು ಮಾಡಿದೆ. ಜನರ ತೆರಿಗೆ ಹಣ ಖರ್ಚು ಮಾಡಿರುವವರು ಜವಾಬ್ದಾರಿ ಹೊತ್ತುಕೊಂಡು ಜಾತಿಗಣತಿ ವರದಿ ಮಂಡನೆ ಮಾಡಬೇಕಿತ್ತು ಎಂದು ಗುಡುಗಿದರು.

ಚರ್ಚಿಸಬೇಕಿತ್ತು: ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಯಲ್ಲಿರುವಾಗಲೇ ಸಂಬಂಧಪಟ್ಟ ಇಲಾಖೆ ಮಂತ್ರಿಗಳು ಹಾಗೂ ಅಧಿಕಾರಿಗಳ ಜತೆ ಚರ್ಚಿಸಿ ನ್ಯಾಯ ಸಮ್ಮತವಾಗಿ ವರದಿ ಮಂಡನೆಮಾಡಬೇಕಿತ್ತು. ಒಂದು ಸೂಕ್ಷ್ಮ ವಿಚಾರ  ಮುಂದಿಟ್ಟುಕೊಂಡು ರಾಜಕೀಯ ಮಾಡುವುದನ್ನುಸಿದ್ದರಾಮಯ್ಯ ಬಿಡಬೇಕೆಂದರು.

ರಾಜ್ಯದಲ್ಲಿ ದಲಿತ ಸಿಎಂ ಚರ್ಚೆ ವಿಚಾರವಾಗಿ ಮಾತನಾಡಿ, ಮೊದಲು ನಮ್ಮ ಸಮಾಜಕ್ಕೆ ಆ ಶಕ್ತಿ ಬರಬೇಕು. ಸ್ವಾಭಿಮಾನದ ಸ್ವಾವಲಂಬಿ ಆಗದೆ ಚರ್ಚೆ ಮಾಡುವ ಅಗತ್ಯವಿಲ್ಲ. ಸ್ವಾತಂತ್ರೊÂàತ್ಸವದ ಅಮೃತಮಹೋತ್ಸವ ಸಂದರ್ಭದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಬಗ್ಗೆ ಅವಲೋಕನ ಆಗಬೇಕಿತ್ತು. ಆದರೆ ಈವರೆಗೆ ಅವಲೋಕನ ಮಾಡಿದ್ದೀರಾ ಎಂದು ಪ್ರಶ್ನಿಸಿದರು.

ಶಾಸಕರಾದ ಪ್ರತಿಯೊಬ್ಬರಿಗೂ ಸಿಎಂ ಆಗುವ ಸಾಮರ್ಥ್ಯವಿದೆ. ದಲಿತ ಸಮುದಾಯಕ್ಕೆ ಶಕ್ತಿ ಬರಬೇಕು, ಆರ್ಥಿಕವಾಗಿ ಸದೃಢರಾಗಬೇಕು. ಸುಮಾರು 5 ದಶಕಗಳಿಗೂ ಹೆಚ್ಚು ಕಾಲ ಆಡಳಿತದಲ್ಲಿದ್ದ ಕಾಂಗ್ರೆಸ್‌ ಸರ್ಕಾರ ಏಕೆ ದಲಿತರನ್ನು ಮುಖ್ಯಮಂತ್ರಿ ಮಾಡಲಿಲ್ಲ?. ಮೋದಿ ಅವರು ಅಧಿಕಾರಕ್ಕೆ ಬಂದು 7 ವರ್ಷಗಳಾಗಿದ್ದು, ದಲಿತ ಸಮುದಾಯಕ್ಕೆ ಶಕ್ತಿ ತುಂಬುವ ಗುರಿ ಹೊಂದಿದ್ದಾರೆ ಎಂದರು.

ವಿದ್ಯಾರ್ಥಿ ವೇತನ: ಈ ಮುನ್ನ ಶಾಸಕ ಎನ್‌. ಮಹೇಶ್‌ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಶೇ.60, ರಾಜ್ಯ ಸರ್ಕಾರ 40ರ ಅನುಪಾತದಲ್ಲಿ ವಿದ್ಯಾರ್ಥಿ ವೇತನ ನೀಡುತ್ತಿವೆ.ಕೇಂದ್ರದ ಪಾಲನ್ನು ಬಿಡುಗಡೆ ಮಾಡಬೇಕೆಂದು ಸಚಿವರ ಗಮನಕ್ಕೆ ತಂದರು. ಸಚಿವ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ಡಿಜಿಟಲ್‌ ಆಡಳಿತದಿಂದ ಪಾರದರ್ಶಕವಾಗಿ ವಿದ್ಯಾರ್ಥಿ ವೇತನ ತಲುಪುತ್ತಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ವಿದ್ಯಾರ್ಥಿ ವೇತನ ಹೆಚ್ಚಿಸಿದೆ.

ವಿದ್ಯಾರ್ಥಿ ವೇತನದ ಹಣವನ್ನು ಯಾವುದಕ್ಕೂ ಬಳಸುವಂತಿಲ್ಲ. ಜಮ್ಮುಕಾಶ್ಮೀರದಲ್ಲಿ ಶೇ.2 ಎಸ್ಸಿ ಜನರಿದ್ದಾರೆ. ಅವರಿಗೆ ಒಂದು ವರ್ಷದ ಸ್ಕಾಲರ್‌ಶಿಪ್‌ 4 ವರ್ಷ ನೀಡಬಹುದು. ಕೆಲವು ರಾಜ್ಯಗಳಲ್ಲಿ ಪೂರ್ಣ ಹಣ ವೆಚ್ಚ ಮಾಡಿಲ್ಲ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಶಾಸಕ ಎನ್‌.ಮಹೇಶ್‌, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ, ಮೈಲ್ಯಾಕ್‌ ಅಧ್ಯಕ್ಷ ಎನ್‌.ವಿ.ಫ‌ಣೀಶ್‌, ಕರ್ನಾಟಕಮೃಗಾಲಯಗಳ ಪ್ರಾಧಿಕಾರದ ಅಧ್ಯಕ್ಷ ಎಲ್‌.ಆರ್‌. ಮಹದೇವಸ್ವಾಮಿ, ಬಿಜೆಪಿ ಮುಖಂಡರಾದ ರಮೇಶ್‌, ನಂಜುಂಡಸ್ವಾಮಿ ಮತ್ತಿತರರಿದ್ದರು.

“ನೂತನ ಶಿಕ್ಷಣ ನೀತಿ ದಲಿತರ ವಿರೋಧಿ ಆಗಿದೆ ಎಂದು ಕಾಂಗ್ರೆಸ್‌ ಸಹಿತವಾಗಿ ವಿರೋಧ ಪಕ್ಷಗಳು ಸುಳ್ಳು ಹಬ್ಬಿಸುತ್ತಿವೆ. ಎನ್‌ಇಪಿ ಪಠ್ಯಗಳಲ್ಲಿ ದಲಿತ ಮತ್ತು ಹಿಂದುಳಿದವರ ವಿರೋಧಿ ಅಂಶಗಳಿಲ್ಲ. ಅಂತಹ ಅಂಶಗಳಿವೆ ಎನ್ನುವವರು ನನ್ನೊಂದಿಗೆ ನೇರ ಸಂವಾದಕ್ಕೆ ಬರಬಹುದು.”

 ಎ.ನಾರಾಯಣಸ್ವಾಮಿ, ಕೇಂದ್ರ ಸಚಿವ

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.