ಉತ್ತರಪ್ರದೇಶ ಘಟನೆ ಖಂಡಿಸಿ ದಕ್ಷಿಣಕನ್ನಡ ಯುವ ಕಾಂಗ್ರೆಸ್ನಿಂದ ಪ್ರತಿಭಟನೆ
Team Udayavani, Oct 4, 2021, 9:08 PM IST
ಮಂಗಳೂರು : ಉತ್ತರಪ್ರದೇಶ ಲಖೀಂಪುರ ಜಿಲ್ಲೆಯಲ್ಲಿ ಪ್ರತಿಭಟನನಿರತ ರೈತರ ಮೇಲೆ ಕೇಂದ್ರ ಸಚಿವರ ಬೆಂಗಾವಲು ವಾಹನ ಹರಿಸಿ ರೈತರ ಹತ್ಯೆ ಮಾಡಿರುವುದು ಖಂಡನೀಯ ಎಂದು ಆರೋಪಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮಂಗಳೂರು ಪಾಲಿಕೆ ಮುಂಭಾಗದಲ್ಲಿ ಸೋಮವಾರ ಸಂಜೆ ಮೊಂಬತ್ತಿ ಉರಿಸಿ ಪ್ರತಿಭಟನೆ ನಡೆಸಲಾಯಿತು.