ದಸರಾ: ಪರಿಷ್ಕೃತ ಮಾರ್ಗಸೂಚಿ ಪ್ರಕಟ
Team Udayavani, Oct 5, 2021, 7:00 AM IST
ಮಂಗಳೂರು: ದಸರಾ, ನವರಾತ್ರಿ ಆಚರಣೆ ಹಿನ್ನೆಲೆಯಲ್ಲಿ ಅ. ದಕ್ಷಿಣ ಕನ್ನಡ ಜಿಲ್ಲಾಡಳಿತವು 7ರಿಂದ 16ರ ವರೆಗೆ ಸೀಮಿತವಾಗಿ ಮಾರ್ಗಸೂಚಿಯನ್ನು ಪ್ರಕಟಿಸಿದ್ದು ಕೊರೊನಾ ಪಾಸಿಟಿವಿಟಿ ದರ ಏರಿಕೆಗೆ ಕಾರಣವಾಗದಂತೆ ಸರಳವಾಗಿ ಆಚರಿಸಬೇಕು ಎಂದು ತಿಳಿಸಿದೆ.
ಮಾರ್ಗಸೂಚಿಗಳನ್ನು ಒಳಗೊಂಡ ಆದೇಶವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತುನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಡಾ| ರಾಜೇಂದ್ರ ಸೋಮವಾರ ಹೊರಡಿಸಿದ್ದಾರೆ.
ಮುಖ್ಯಾಂಶಗಳು ಇಂತಿವೆ
-ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ, ಅರ್ಚಕರು, ಸಿಬಂದಿ ಸೇರಿದಂತೆ ಎಲ್ಲ ವರ್ಗದವರು ಕೋವಿಡ್ ಸಮುಚಿತ ವರ್ತನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
– ದೇವಾಲಯಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಕೊರೊನಾ 2 ಲಸಿಕೆಗಳನ್ನು ಪಡೆದಿರುವ ಬಗ್ಗೆ ಪ್ರಮಾಣಪತ್ರವನ್ನು ಮೊಬೈಲ್‌ನಲ್ಲಿ ಹೊಂದಿದ್ದಲ್ಲಿ ಅಥವಾ ಪ್ರಮಾಣ ಪತ್ರದ ಪ್ರತಿಯನ್ನು ಹಾಜರುಪಡಿಸಿದಲ್ಲಿ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಬೇಕು
– ಭಕ್ತರು ಲಸಿಕೆ ಪಡೆಯದಿದ್ದಲ್ಲಿ ಅಂಥವರಿಗೆ ಲಸಿಕೆ ನೀಡಲು ಅನುಕೂಲವಾಗುವಂತೆ ಸಂಬಂಧಪಟ್ಟ ತಾಲೂಕು ಆರೋಗ್ಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ದೇವಾಲಯದ ಆವರಣದಲ್ಲಿ ಲಸಿಕಾ ಕೇಂದ್ರ ತೆರೆಯಬೇಕು.
– ಸಾರ್ವಜನಿಕರು ದೇವಾಲಯ/ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಒಂದೆಡೆ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರದೆ ಸರದಿಯಲ್ಲಿ ತೆರಳುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು.
– ಸಾಮಾಜಿಕ ಅಂತರವಿಲ್ಲದೆ ನಡೆಸುವ ಎಲ್ಲ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಕಾರ್ಯಕ್ರಮ ಆಯೋಜಕರು/ದೇವಸ್ಥಾನದ ಆಡಳಿತಾಧಿಕಾರಿಗಳು ಸ್ಥಳೀಯ ಆಡಳಿತದಿಂದ ಅನುಮತಿ ಪಡೆದಿರಬೇಕು.
– ಸ್ಥಳದಲ್ಲಿ ಸ್ಯಾನಿಟೈಸರ್, ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಪಾಲನೆಗೆ ಕ್ರಮ ಕೈಗೊಳ್ಳಬೇಕು, ಮಾರ್ಗಸೂಚಿ ಉಲ್ಲಂಘನೆಯಾದಲ್ಲಿ ಕಾರ್ಯಕ್ರಮದ ಆಯೋಜಕರು, ದೇವಸ್ಥಾನ ಆಡಳಿತಾಧಿಕಾರಿಯವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು.
ಸಾಂಸ್ಕೃತಿಕ ಕಾರ್ಯಕ್ರಮ
– ಸಾಂಸ್ಕೃತಿಕ ಕಾರ್ಯಕ್ರಮಗಳು ಸಭಾಂಗಣದ ಸಾಮರ್ಥ್ಯದ ಶೇ. 50 ಜನರಿಗೆ ಮಿತಿಗೊಳಿಸಿ ನಡೆಸಬೇಕು, ಅದಷ್ಟು ಮಟ್ಟಿಗೆ ಸಾರ್ವಜನಿಕರು ಮನೆಯಿಂದಲೇ ಕಾರ್ಯಕ್ರಮ ವೀಕ್ಷಿಸಲು ಅನುಕೂಲವಾಗುವಂತೆ ವಿವಿಧ ಮಾಧ್ಯಮಗಳ ಮೂಲಕ ನೇರಪ್ರಸಾರಕ್ಕೆ ಕಾರ್ಯಕ್ರಮದ ಆಯೋಜಕರು ಅನುವು ಮಾಡಿಕೊಡಬೇಕು.
– ಹುಲಿ ವೇಷಧಾರಿಗಳು ದೇವಸ್ಥಾನದ ಆವರಣದೊಳಗೆ, ಸಾರ್ವಜನಿಕ ಪ್ರದೇಶಗಳಲ್ಲಿ ಪ್ರದರ್ಶನ ನೀಡುವಾಗ ಜನಸಂದಣಿಯಾಗದಂತೆ ನೋಡಿಕೊಳ್ಳುವುದು, ಮಾಸ್ಕ್ ಧರಿಸದೆ ಸೇರುವ ಸಾರ್ವಜನಿಕರ ವಿರುದ್ಧ ನಿಯಮಾನುಸಾರ ದಂಡ ವಿಧಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.
– ಸಂಬಂಧಪಟ್ಟ ಅಧಿಕಾರಿಗಳು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು.
ಇದನ್ನೂ ಓದಿ:ನೀಟ್ ರದ್ದತಿಗೆ ಸುಪ್ರೀಂ ಕೋರ್ಟ್ ನಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.