ಟೆಂಡರ್ ಇಲ್ಲದೆ ಮಳಿಗೆ ಹಂಚಿಕೆ: ತನಿಖೆಗೆ ಆದೇಶ
ಜಯನಗರ ವಾಣಿಜ್ಯ ಸಂಕೀರ್ಣದ ಮಳಿಗೆಗಳ ಹಂಚಿಕೆ ¬ ಲೋಕಾಯುಕ್ತ ತನಿಖೆಗೆ ಆದೇಶಿಸಿದ ಹೈಕೋರ್ಟ್
Team Udayavani, Oct 5, 2021, 12:00 PM IST
ಬೆಂಗಳೂರು: ಜಯನಗರ ವಾಣಿಜ್ಯ ಸಂಕೀರ್ಣದಲ್ಲಿರುವ ಕೆಲ ಮಳಿಗೆಗಳನ್ನು ಟೆಂಡರ್ ಪ್ರಕ್ರಿಯೆ ನಡೆಸದೆ ಹಂಚಿಕೆ ಮಾಡಿರುವ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಿ ಹೈಕೋರ್ಟ್ ಆದೇಶಿಸಿದೆ. ಈ ಕುರಿತು ಶ್ರೀನಗರದ ರಾಘವೇಂದ್ರ ಬ್ಲಾಕ್ ನಿವಾಸಿ ಎಂ. ಶರಣು 2019ರಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ. ಸತೀಶ್ ಚಂದ್ರ ಶರ್ಮಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ಈ ಆದೇಶ ಮಾಡಿದೆ.
ವಿಚಾರಣೆ ವೇಳೆ, ಪ್ರಕರಣದಲ್ಲಿ ಬಿಬಿಎಂಪಿಯ ನಿರ್ಲಕ್ಷ್ಯವನ್ನು ತರಾಟೆಗೆ ತೆಗೆದುಕೊಂಡ ಪೀಠ, ಮುಂದಿನ ವಿಚಾರಣೆ ವೇಳೆ ಆಯುಕ್ತರ ವಿರುದ್ಧ “ಆರೋಪ ನಿಗದಿಪಡಿಸಲಾಗುವುದು’ ( ಫ್ರೇಮಿಂಗ್ ಆಫ್ ಚಾರ್ಜ್) ಎಂದು ಹೇಳಿದರು. ಆಗ, ಬಿಬಿಎಂಪಿ ಪರ ವಕೀಲ ಕೆ.ಎನ್. ಪುಟ್ಟೇಗೌಡ, ಆಯುಕ್ತರು 2021ರ ಏ.1ರಂದು ಅಧಿಕಾರವಹಿಸಿ ಕೊಂಡಿದ್ದಾರೆ. ಮಳಿಗೆಗಳ ಹಂಚಿಕೆಗೂ ಅವರಿಗೂ ಸಂಬಂಧವಿಲ್ಲ.
ಇದನ್ನೂ ಓದಿ:- ಕೊಲೆ ಪ್ರಕರಣ: ಜಾಮೀನಿಗೆ ಅರ್ಜಿ ಸಲ್ಲಿಸಿದ ಸುಶೀಲ್ ಕುಮಾರ್
ಆಗಿದ್ದ ಚುನಾಯಿತ ಆಡಳಿತ ಮಂಡಳಿ ಅವಧಿಯೂ ಮುಗಿದಿದೆ. ಹಂಚಿಕೆ ಮಾಡಿದ್ದ ಅಧಿಕಾರಿಯೂ ನಿವೃತ್ತರಾಗಿದ್ದಾರೆ. ನಾನು ಸಲ್ಲಿಸಿರುವ ಲಿಖೀತ ಹೇಳಿಕೆಗಳನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದರು. ಆಗ, ಬಿಬಿಎಂಪಿ ಪರ ವಕೀಲರ ವಾದ ಮತ್ತು ಲಿಖೀತ ಹೇಳಿಕೆಗಳನ್ನು ಪರಿಶೀಲಿಸಿದ ನ್ಯಾಯ ಪೀಠ, ಟೆಂಡರ್ ಇಲ್ಲದೇ ಮಳಿಗೆಗಳನ್ನು ಹಂಚಿಕೆ ಮಾಡಲಾಗಿದೆ.
ಆದ್ದರಿಂದ 2017ರ ಡಿ.6ರ ನ್ಯಾಯಾಲ ಯದಆದೇಶ ಆಧರಿಸಿ ತನಿಖೆ ನಡೆಸಿ 3 ತಿಂಗಳಲ್ಲಿ ವರದಿ ಸಲ್ಲಿಸಲು ಲೋಕಾಯುಕ್ತಕ್ಕೆ ನಿರ್ದೇಶನ ನೀಡಿತು.ಅಲ್ಲದೆ, ಲೋಕಾಯುಕ್ತ ತನಿಖೆಗೆ ಪೂರ್ಣ ಸಹಕಾರ ನೀಡಬೇಕು ಮತ್ತು ತನಿ ಖೆಗೆ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಲೋಕಾ ಯುಕ್ತಕ್ಕೆ ಒದಗಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ನ್ಯಾಯಪೀಠ ಸೂಚನೆ ನೀಡಿ ವಿಚಾರಣೆ ಯನ್ನು ಮುಂದಿನ ವರ್ಷ ಜನವರಿ ತಿಂಗಳಿಗೆ ಮುಂದೂ ಡಿತು.
ಜಯನಗರ ವಾಣಿಜ್ಯ ಸಂಕೀರ್ಣದ ಮಳಿಗೆಗಳ ಹಂಚಿಕೆಗೆ ಸಂಬಂಧಿಸಿದಂತೆ 2017ರಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯಲ್ಲಿ ಬಿಬಿಎಂಪಿಯ ಅಂದಿನ ಜಂಟಿ ಆಯುಕ್ತ ಟಿ.ಎಚ್. ವಿಶ್ವನಾಥ್ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದರು.ಸಂಕೀರ್ಣದಲ್ಲಿರುವ 40, 41, 49, 50, 60ರಿಂದ 66 ಸಂಖ್ಯೆ ಮಳಿಗೆಗಳನ್ನು ಟೆಂಡರ್ ಪ್ರಕ್ರಿಯೆ ಮೂಲಕವೇ ಹಂಚಿಕೆ ಮಾಡಲಾಗುವುದು ಎಂದು ಪ್ರಮಾಣ ಪತ್ರದಲ್ಲಿ ಭರವಸೆ ನೀಡಲಾಗಿತ್ತು.
ಅದನ್ನು ದಾಖಲಿಸಿಕೊಂಡು ಅರ್ಜಿಯನ್ನು ನ್ಯಾಯಾಲಯವು 2017ರ ಡಿ.6ರಂದು ಅರ್ಜಿ ಇತ್ಯರ್ಥಪಡಿಸಿತ್ತು. ನಂತರಟೆಂಡರ್ ಪ್ರಕ್ರಿಯೆ ನಡೆಸದೇ ಮಳಿಗೆಗಳನ್ನು ಹಂಚಿಕೆ ಮಾಡಲಾಗಿತ್ತು. 2017ರಲ್ಲಿ ಅರ್ಜಿ ಇತ್ಯರ್ಥವಾಗುವಮೊದಲೇ 2017ರ ಅ.16ರಂದು ಟೆಂಡರ್ ನಡೆಸದೆ ಮಳಿಗೆಗಳನ್ನು ಹಂಚಿಕೆ ಮಾಡಲು ಪಾಲಿಕೆ ನಿರ್ಣಯ ಕೈಗೊಂಡಿತ್ತು.
ಈ ವಿಚಾರ ಗಮನಿಸದೆ ಜಂಟಿ ಆಯುಕ್ತರು ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಬಿಬಿಎಂಪಿ ಸಮಜಾಯಿಸಿ ನೀಡಿತ್ತು. ಕೋರ್ಟ್ ಮುಂದೆ ಪ್ರಮಾಣ ಪತ್ರ ಸಲ್ಲಿಸಿದ ನಂತರವೂ ಟೆಂಡರ್ ಕರೆಯದೆ ಮಳಿಗೆಗಳನ್ನು ಹಂಚಿಕೆ ಮಾಡಿರುವುದು ಸರಿಯಲ್ಲ. ನ್ಯಾಯಾಂಗ ನಿಂದನೆಯಡಿ ಕ್ರಮ ಜರುಗಿಸಲು ಇದೊಂದು ಅರ್ಹ ಪ್ರಕರಣ ಎಂದು ಹೇಳಿದ್ದ ನ್ಯಾಯಪೀಠ, ಬಿಬಿಎಂಪಿ ಆಯುಕ್ತರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗಾಂಜಾ ಸೇವನೆ; ಯುವಕನ ಬಂಧನ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಗಾಂಜಾ ಸೇವನೆ; ಯುವಕನ ಬಂಧನ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.