ಸಚಿವ ಸಂಪುಟ ಸಭೆಯಲ್ಲಿ ಉತ್ತರ ಕನ್ನಡಕ್ಕೆ ಹಲವು ಯೋಜನೆ : ಸಚಿವ ಶಿವರಾಮ ಹೆಬ್ಬಾರ್ ಸಂತಸ
Team Udayavani, Oct 5, 2021, 4:32 PM IST
ಶಿರಸಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಹಲವು ರೀತಿಯ ನೆರವಿನ ಯೋಜನೆ ನೀಡಿದ್ದಕ್ಕೆ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಸಂತಸ ವ್ಯಕ್ತಪಡಿಸಿದ್ದಾರೆ.
ಕುಮಟಾ, ಕಾರವಾರ ಹಾಗೂ ಭಟ್ಕಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕರಾವಳಿ ಪ್ರದೇಶದಲ್ಲಿ ಪ್ರವಾಹ ಮತ್ತು ಭಾರಿ ಅಲೆಗಳಿಂದ ಉಪ್ಪುನೀರು ಹಿಮ್ಮುಖವಾಗಿ ನುಗ್ಗುವುದನ್ನು ತಡೆಗಟ್ಟುವ ಖಾರ್ಲ್ಯಾಂಡ್ ಯೋಜನೆಗೆ 300 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕಾಮಗಾರಿಗಳ ಕ್ರೀಯಾ ಯೋಜನೆಗೆ ಅನುಷ್ಠಾನಗೊಳಿಸುವುದಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದ್ದಾರೆ.
ಶಿರಸಿ ತಾಲ್ಲೂಕಿನ ಖಾನಾಪುರ – ತಾಳಗುಪ್ಪ ರಾಜ್ಯ ಹೆದ್ದಾರಿ – 93 ರ ಶಿರಸಿ ನಗರ ಪರಿಮಿತಿಯಲ್ಲಿ ಹಾದುಹೋಗುವ ರಸ್ತೆಯನ್ನು ದ್ವಿಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ರೂಪಾಯಿ 15 ಕೋಟಿಗಳ ಮೊತ್ತದಲ್ಲಿ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ಉತ್ತರಕನ್ನಡ ಜಿಲ್ಲೆಗೆ ಆಗಮಿಸಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳನ್ನು ನೈಜ ಚಿತ್ರಣವನ್ನು ವೀಕ್ಷಿಸಿ ವಿಸ್ತೃತ ಅಧ್ಯಯನ ನಡೆಸಿ ಕರಾವಳಿ ಭಾಗದ ರೈತರಿಗೆ ಅತ್ಯಂತ ಅವಶ್ಯಕವಾಗಿದ ಈ ಮಹತ್ವದ ಯೋಜನೆಯನ್ನು ಅನುಮೋದಿಸಿರುವುದಕ್ಕೆ ಬಸವರಾಜ ಬೊಮ್ಮಾಯಿ ಅವರಿಗೆ, ಸಣ್ಣ ನೀರಾವರಿ ಇಲಾಖೆಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಲೋಕೋಪಯೋಗಿ ಇಲಾಖೆಯ ಸಚಿವ ಸಿ.ಸಿ. ಪಾಟೀಲ್ ಅವರಿಗೆ ಜಿಲ್ಲೆಯ ಸಂಸದರು, ಎಲ್ಲಾ ಶಾಸಕರ ಹಾಗೂ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.