ಕೇಂದ್ರ ಸಚಿವ ಅಜಯ್ ಮಿಶ್ರಾ ವಜಾಕ್ಕೆ ಆಗ್ರಹ
Team Udayavani, Oct 5, 2021, 6:45 PM IST
ಚಿತ್ರದುರ್ಗ: ಉತ್ತರಪ್ರದೇಶದಲ್ಲಿ ಹೋರಾಟನಿರತ ರೈತರ ಮೇಲೆ ವಾಹನ ಹಾಯಿಸಿಎಂಟು ಜನರನ್ನು ಹತ್ಯೆ ಮಾಡಿರುವ ಘಟನೆ ಖಂಡಿಸಿ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ಸೋಮವಾರನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾ ಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಧಿಕಾರಿ ಕಚೇರಿ ಎದುರು ಕುಳಿತುಪ್ರತಿಭಟಿಸಿದ ರೈತರು, ಘಟನೆಗೆ ಕಾರಣರಾದಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್‌ಮಿಶ್ರಾ ಅವರನ್ನು ಕೂಡಲೇ ಸಂಪುಟದಿಂದವಜಾ ಮಾಡಬೇಕು. ಸುಪ್ರೀಂ ಕೋರ್ಟ್‌ಉಸ್ತುವಾರಿಯಲ್ಲಿ ತನಿಖೆ ನಡೆಸಲು ಎಸ್‌ಐಟಿನೇಮಕ ಮಾಡಬೇಕು ಎಂದು ಆಗ್ರಹಿಸಿದರು.ಉತ್ತರಪ್ರದೇಶದ ಲಿಖೀಂಪುರ್ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆಅಜಯ್ ಮಿಶ್ರಾ ಅವರ ಬೆಂಗಾವಲು ಪಡೆಯವಾಹನ ಹರಿದಿದೆ.
ಇದು ಆಕಸ್ಮಿಕವಾಗಿ ನಡೆದಘಟನೆಯಂತೆ ಕಾಣುತ್ತಿಲ್ಲ. ಹೋರಾಟ ನಿರತರೈತರನ್ನು ಬೆದರಿಸುವ ಹಾಗೂ ಪ್ರಚೋದನೆನೀಡುವ ಉದ್ದೇಶ ನಡೆಸಿದ ದಾಳಿಯಾಗಿದೆ.ಉತ್ತರಪ್ರದೇಶ ರಾಜ್ಯ ಸರ್ಕಾರ ಹಾಗೂ ಕೇಂದ್ರಸರ್ಕಾರ ಕ್ರೂರವಾಗಿ ನಡೆದುಕೊಳ್ಳುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ :ಸಚಿವ ಹಾಲಪ್ಪ ಆಚಾರ್
ಸ್ವರಾಜ್ ಇಂಡಿಯಾ ಪಕ್ಷದ ಜಿಲ್ಲಾ ಘಟಕದಅಧ್ಯಕ್ಷ ಜೆ.ಯಾದವ ರೆಡ್ಡಿ ಮಾತನಾಡಿ,ಹರಿಯಾಣ ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್ ಅವರು ರೈತರ ಮೇಲೆ ದಾಳಿ ನಡೆಸಲು ಪ್ರಚೋದನೆ ನೀಡಿದ ಬೆನ್ನಲ್ಲೇ ಈ ಕ್ರೂರ ಘಟನೆನಡೆದಿದೆ. ಸಾಂವಿಧಾನಿಕ ಹುದ್ದೆಯಲ್ಲಿದ್ದು ಅಸಾಂವಿಧಾನಿಕವಾಗಿ ನಡೆದುಕೊಳ್ಳುತ್ತಿದ್ದಾರೆ.ಇದನ್ನು ರಾಷ್ಟ್ರಪತಿಯವರು ಗಂಭೀರವಾಗಿಪರಿಗಣಿಸಬೇಕು.
ಗೂಂಡಾ ಸಂಸ್ಕೃತಿಪ್ರದರ್ಶಿಸುತ್ತಿರುವ ಸರ್ಕಾರವನ್ನು ಕೂಡಲೇವಜಾ ಮಾಡಬೇಕು ಎಂದು ಒತ್ತಾಯಿಸಿದರು.ರಾಜ್ಯ ರೈತ ಸಂಘದ ರಾಜ್ಯ ಪ್ರಧಾನಕಾರ್ಯದರ್ಶಿ ನುಲೇನೂರು ಎಂ. ಶಂಕ್ರಪ್ಪ,ಜಿಲ್ಲಾ ಘಟಕದಅಧ್ಯಕ್ಷ ಸುರೇಶಬಾಬು, ಎಸ್‌ಯುಸಿಐಮುಖಂಡ ರವಿಕುಮಾರ್, ಸಿಪಿಐ ಮುಖಂಡಸುರೇಶಬಾಬು, ಟಿ.ಷμವುಲ್ಲ, ಧನಂಜಯಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.