ದಸರಾ ಉತ್ಸವ: ಸೀಮಿತ ಜನರಿಗೆ ಅವಕಾಶ

ಜಂಬೂ ಸವಾರಿಗೆ 500 ಜನರಿಗೆ ಮಾತ್ರ ಪ್ರವೇಶ | ಗರಿಷ್ಠ 500 ಜನರಿಗೆ ಮೀರದಂತೆ ಸಾಂಸ್ಕೃತಿಕ ಕಾರ್ಯಕ್ರಮ

Team Udayavani, Oct 6, 2021, 4:49 PM IST

ದಸರಾ ಸವಾರಿ

Representative Image used

ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿಯೂ ಸರಳ ದಸರಾ ಆಚರಿಸಲಾಗುತ್ತಿದ್ದು, ಕೋವಿಡ್‌ ನಿಯಂತ್ರಣ ಹಾಗೂ ಸಂಭವನೀಯ 3ನೇ ಅಲೆ ಬರದಂತೆ ತಡೆಯುವ ಸಲುವಾಗಿ ರಾಜ್ಯ ಸರ್ಕಾರ ದಸರಾ ಉದ್ಘಾಟನಾ ಕಾರ್ಯಕ್ರಮ ಹಾಗೂ ಜಂಬೂ ಸವಾರಿಯಲ್ಲಿ ಸೀಮಿತ ಜನರಿಗೆ ಅವಕಾಶ ನೀಡಿ ಮಾರ್ಗಸೂಚಿ ಹೊರಡಿಸಲಾಗಿದೆ.

ಅ.7ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಹಾಗೂ ಅ.15ರಂದು ಅರಮನೆ ಆವರಣದಲ್ಲಿ ನಡೆಯುವ ಜಂಬೂ ಸವಾರಿಗೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸಿನಂತೆ ಪ್ರತ್ಯೇಕ ಷರತ್ತುಗಳನ್ನೊಳ ಗೊಂಡ ಮಾರ್ಗಸೂಚಿ ರೂಪಿಸಿ ಆದೇಶ ಜಾರಿಗೊಳಿಸ ಲಾಗಿದೆ. ಉದ್ಘಾಟನಾ

ಕಾರ್ಯಕ್ರಮಕ್ಕೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಕಡ್ಡಾಯವಾಗಿ 400 ಜನರಿಗೆ ಮಾತ್ರ ಅವಕಾಶ ಕಲ್ಪಿಸಿದ್ದು, ಮುಖ್ಯಮಂತ್ರಿ ಮತ್ತು ಇತರೆ ಗಣ್ಯವ್ಯಕ್ತಿಗಳು ಭಾಗವಹಿಸಲಿದ್ದಾರೆ. ಅರಮನೆ ಆವರಣದಲ್ಲಿ ಅ.7ರಿಂದ 13ರವರೆಗೆ ನಡೆಯ ಲಿರುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸ್ಥಳೀಯ ಪ್ರತಿದಿನ ಎರಡು ಗಂಟೆಗಳು ಗರಿಷ್ಠ 500ಜನರಿಗೆ ಮೀರದಂತೆ ಕಾರ್ಯಕ್ರಮಗಳನ್ನು ನಡೆಸಬೇಕಾಗಿದೆ.

ನಗರದಲ್ಲಿ ಅ.7ರಿಂದ ಸಂಜೆ 7ರಿಂದ 9ಗಂಟೆವರೆಗೆ ಹತ್ತು ದಿನಗಳ ಕಾಲ ಆಯ್ದ ಸ್ಥಳಗಳಿಗೆ ಬೆಳಕಿನ ವ್ಯವಸ್ಥೆ ಕಲ್ಪಿಸಲು ಮಾತ್ರ ಅನುಮತಿ ನೀಡಲಾಗಿದೆ. ಪೊಲೀಸ್‌ ಸಿಬ್ಬಂದಿ ಆಯಕಟ್ಟಿನ ಸ್ಥಳಗಳಲ್ಲಿ ಜನದಟ್ಟಣೆಯಾಗುವುದನ್ನು ತಡೆಯುವುದು ಮತ್ತು ಎಲ್ಲರೂ ಕಡ್ಡಾಯವಾಗಿ ಮುಖಗವಸನ್ನು ಧರಿಸುವುದನ್ನು ಪರಿಶೀಲಿಸುವುದು.  ಅ.15ರಂದು ಜಂಬೂಸವಾರಿಗೆಕೋವಿಡ್‌-19 ಮುಂಜಾಗ್ರತಾ ಕ್ರಮಗಳೊಂದಿಗೆ ಕಡ್ಡಾಯವಾಗಿ 500 ಜನರಿಗೆ ಮಾತ್ರ ಪ್ರವೇಶ ಕಲ್ಪಿಸುವಂತೆ ಆದೇಶ ನೀಡಲಾಗಿದೆ.

ಇದನ್ನೂ ಓದಿ;- ಅಕ್ಟೋಬರ್ 14 ರಂದು ಗೋವಾಕ್ಕೆ ಅಮಿತ್  ಶಾ

ಷರತ್ತುಗಳು: ಅರಮನೆಯ ಆವರಣದಲ್ಲಿ ನಡೆಸಲಾಗುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಮತ್ತು ಸ್ಯಾನಿಟೈಸರ್‌ಗಳನ್ನು ಕಡ್ಡಾಯವಾಗಿ ಬಳಸುವ ಷರತ್ತು ವಿಧಿಸಲಾಗಿದೆ. ಕೋವಿಡ್‌-19 ಸೋಂಕು ಹರಡುವುದನ್ನು ತಡೆ ಗಟ್ಟಲು ಈ ವರ್ಷದ ದಸರಾ ಹಬ್ಬ ಆಚರಣೆಯನ್ನು ಮೈಸೂರಿನಲ್ಲಿ ದೃಶ್ಯ ಸಂವಹನ(ವರ್ಚಯಲ್‌) ಮೂಲಕ ಸಾರ್ವಜನಿಕರು ವೀಕ್ಷಿಸಲು ಅವಕಾಶ ಕಲ್ಪಿಸುವುದು ಮತ್ತು ಈ ಸಮಾರಂಭಗಳಿಗೆ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

ಮೇಯರ್‌ಗೆ ಕುದುರೆ ಸವಾರಿ ಭಾಗ್ಯ ಇಲ್ಲ: ದಸರಾ ಮಹೋತ್ಸವದಲ್ಲಿ ಮೇಯರ್‌ ಹಾಗೂ ಜಿಪಂ ಅಧ್ಯಕ್ಷರು ಕುದುರೆ ಸವಾರಿ ಮಾಡುವುದು ಸಂಪ್ರದಾಯ. ಆದರೆ ಈ ಬಾರಿಯೂ ದಸರಾ ಮಹೋತ್ಸವದ ಜಂಬೂ ಸವಾರಿ ಅರಮನೆ ಆವರಣಕ್ಕೆ ಸೀಮಿತವಾಗಿರುವುದರಿಂದ ಮೇಯರ್‌ ಕುದುರೆ ಸವಾರಿ ಮಾಡುವ ಅವಕಾಶ ಕೈತಪ್ಪಿದೆ.

ಪ್ರತಿ ಬಾರಿಯ ದಸರಾ ಜಂಬೂ ಸವಾರಿಯಂದು ಅಂಬಾರಿ ಆನೆಯ ಜೊತೆಗೆ ಮೇಯರ್‌ ಮತ್ತು ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಕುದುರೆ ಸವಾರಿ ಮಾಡುತ್ತಿದ್ದರು. ಆದರೆ, ಜಿಪಂ ಸದಸ್ಯರ ಅವಧಿ ಮುಗಿದು ಆಡಳಿತಾಧಿಕಾರಿ ನೇಮಕವಾಗಿದ್ದಾರೆ. ಮೇಯರ್‌ ಈವರೆಗೆ ಕುದುರೆ ಸವಾರಿ ಅಭ್ಯಾಸ ಮಾಡಿಲ್ಲ. ಕೊರೊನಾದಿಂದಾಗಿ ಕಳೆದ ಬಾರಿಯೂ ಕುದುರೆ ಸವಾರಿ ಮಾಡಿರಲಿಲ್ಲ. ಹೀಗಾಗಿ, ಈ ಬಾರಿಯೂ ಕುದುರೆ ಸವಾರಿ ಇಲ್ಲದಂತಾಗಿದೆ.

ಆರ್‌ಟಿಪಿಸಿಆರ್‌ ಟೆಸ್ಟ್‌ ಕಡ್ಡಾಯ:- ದಸರಾ ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಕರ್ತವ್ಯನಿರತ ಅಧಿಕಾರಿಗಳು, ಸಿಬ್ಬಂದಿಗಳು, ಕಲಾವಿದರು, ರಕ್ಷಣಾ ಸಿಬ್ಬಂದಿ ಮತ್ತು ಮಾಧ್ಯಮದವರು ಒಳಗೊಂಡಂತೆ ಅ.4ರ ನಂತರ ಕೋವಿಡ್‌-19 ಆರ್‌ಟಿಪಿಸಿಆರ್‌ ತಪಾಸಣೆ ನಡೆಸಿ ಸೋಂಕು ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ ಮತ್ತು ಕನಿಷ್ಠ 1 ಡೋಸ್‌ ಕೋವಿಡ್‌-19 ಲಸಿಕೆ ಪಡೆದಿರುವುದನ್ನು ಕಡ್ಡಾಯಗೊಳಿಸಲಾಗಿದೆ.

ಕಲಾವಿದರು ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ವೃಂದದವರು ಕಡ್ಡಾಯವಾಗಿ ಮೈಸೂರು ಮತ್ತು ರಾಜ್ಯದ ಇತರೆ ಜಿಲ್ಲೆಗಳಿಂದ ಬಂದವರಿಗೆ ಮಾತ್ರ ಆದ್ಯತೆ ನೀಡಲಾಗುತ್ತದೆ.

ದಸರಾಗೆ ರಾಜವಂಶಸ್ಥರನ್ನು  ಆಹ್ವಾನಿಸಿದ ಸಚಿವ;-

ಮೈಸೂರು: ಈ ಬಾರಿಯ ಸರಳ ಸಾಂಪ್ರದಾಯಿಕ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ರಾಜವಂಶಸ್ಥರಿಗೆ ಅಮಂತ್ರಣ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌, ದಸರಾ ಕಾರ್ಯಕ್ರಮಗಳಿಗೆ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿದರು.

ಮಂಗಳವಾರ ಅಂಬಾವಿಲಾಸ ಅರಮನೆಯಲ್ಲಿ ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್‌ಅವರಿಗೆ ಫ‌ಲಪುಷ್ಪ ತಾಂಬೂಲ ನೀಡಿ ಆಹ್ವಾನ ನೀಡಿದರು. ಸಚಿವರ ಆಹ್ವಾನ ಸ್ವೀಕರಿಸಿದ ಪ್ರಮೋದಾದೇವಿ ಅವರು ದಸರಾ ಆಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ನಂತರ ಸುದ್ದಿಗಾರರೊಮದಿಗೆ ಮಾತನಾಡಿದ ಸಚಿವರು, ಪ್ರತಿ ವರ್ಷದಂತೆ ದಸರಾ ಮಹೋತ್ಸವಕ್ಕೆ ರಾಜವಂಶಸ್ಥರನ್ನು ಆಹ್ವಾನಿಸಿದ್ದೇವೆ. ದಸರಾಗೆ ಪೂರ್ಣ ಸಹಕಾರ ನೀಡುವಂತೆ ಕೋರಲಾಯಿತು. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.