ಸಾಮಾಜಿಕ ಪಿಡುಗಿಗೆ ಜಾಗೃತಿ ಅವಶ್ಯ: ಸುವರ್ಣಾ
ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕ
Team Udayavani, Oct 7, 2021, 5:14 PM IST
ಆಳಂದ: ಸಮಾಜದಲ್ಲಿನ ಅಜ್ಞಾನ, ಮೂಢನಂಬಿಕೆ, ಅಸ್ಪೃಶ್ಯತೆ ಪಿಡುಗಳನ್ನು ಅಳಿಸಿ ಹಾಕಲು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದು ನಿಂಬರ್ಗಾ ಪೊಲೀಸ್ ಠಾಣೆ ಪಿಎಸ್‌ಐ ಸುವರ್ಣಾ ಮಲಶೆಟ್ಟಿ ಹೇಳಿದರು.
ತಾಲೂಕಿನ ಭೂಸನೂರ ಗ್ರಾಮದಲ್ಲಿ ಸ್ಫೂ ರ್ತಿ ಗ್ರಾಮೀಣಾಭಿವೃದ್ಧಿ ಮತ್ತು ಶಿಕ್ಷಣ ಸೇವಾ ಸಂಸ್ಥೆ, ತಾಲೂಕು ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಅಸ್ಪೃಶ್ಯತಾ ನಿರ್ಮೂಲನಾ ಕುರಿತ ವಿಚಾರಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.
ಶತಮಾನಗಳಿಂದ ಬೇರುಬಿಟ್ಟ ಜಾತಿ ವ್ಯವಸ್ಥೆಯನ್ನು ಸಂಪೂರ್ಣ ಮೆಟ್ಟಿ ನಿಲ್ಲಬೇಕು. ಸಂವಿಧಾನದ ಆಶಯಗಳನ್ನು ಅನುಸರಿಸಿ ಸಮಾನತೆ, ಭಾತೃತ್ವ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಸಾಹಿತಿ ಧರ್ಮಣ್ಣ ಧನ್ನಿ ಮಾತನಾಡಿ, ಅಸ್ಪೃಶ್ಯತೆ ಆಚರಣೆ ಕಾನೂನು ಬಾಹೀರ. ಆದರೂ ಇನ್ನೂ ಗ್ರಾಮೀಣ ಭಾಗದಲ್ಲಿ ಅಸ್ಪೃಶ್ಯತೆ ಆಚರಣೆ ಜೀವಂತವಾಗಿದೆ. ನಗರ ಪ್ರದೇಶಗಳಲ್ಲೂ ಇಂತಹ ಪದ್ಧತಿಗಳು ಕಾಣುತ್ತವೆ. ಆದ್ದರಿಂದ ಸಂವಿಧಾನದ ನಿಯಮಗಳು ಕಟ್ಟು ನಿಟ್ಟಾಗಿ ಜಾರಿಯಾಗಬೇಕು ಎಂದರು. ಗ್ರಾಪಂ ಅಧ್ಯಕ್ಷ ದಸ್ತಗಿರ ಎಂ. ಗೌರವ ಅಧ್ಯಕ್ಷತೆ ವಹಿಸಿದ್ದರು. ಮುಖಂಡ ಜಗದೀಶ ದೊಡ್ಡಮನಿ, ಉಪನ್ಯಾಸಕ ಡಾ| ಶಿವಪ್ಪ ಎಂ. ಭೂಸನೂರ ಮಾತನಾಡಿದರು.
ಗಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿಠಲ ಕಾಂಬಳೆ, ಸಂಸ್ಥೆ ಅಧ್ಯಕ್ಷ ಅಂದಪ್ಪ ಡೋಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆಯ ರಾಮಲು ಪವಾರ, ಮುತ್ತಣ್ಣ ಬೀಳಗಿ, ಗುಂಡಪ್ಪ ಹಿರವಾಲಿ ಮತ್ತಿತರರು ಭಾಗವಹಿಸಿದ್ದರು. ಗೋಪಾಲ ಶಹಾಬಾದ, ಭೀಮಾಶಂಕರ ಖಜೂರಿ ತಂಡದ ಸದಸ್ಯರು ಅಸ್ಪೃಶ್ಯತಾ ನಿರ್ಮೂಲನೆಯ ಜಾಗೃತಿ ಗೀತೆ ಹಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Lawyer Jagadish: ಮತ್ತೆ ಬಿಗ್ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್ ಜಗದೀಶ್ ಎಂಟ್ರಿ..!
Bengaluru: 54 ಎಂಜಿನಿಯರಿಂಗ್ ಸೀಟ್ ಬ್ಲಾಕ್: ಕೆಇಎ ಶಂಕೆ
Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.