Breaking News : ಸಿಗದ ಜಾಮೀನು : ಶಾರುಖ್ ಪುತ್ರನಿಗೆ ಜೈಲೇ ಗತಿ
Team Udayavani, Oct 7, 2021, 6:56 PM IST
ಮುಂಬೈ : ಡ್ರಗ್ಸ್ ಸೇವನೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಮುಂಬೈನ ಕಿಲ್ಲಾ ಕೋರ್ಟ್ ಆದೇಶ ನೀಡಿದೆ.
ಕಳೆದ ಶನಿವಾರ ರಾತ್ರಿ ಮುಂಬೈನ ಕಡಲ ತೀರ ಪ್ರದೇಶದ ಐಷಾರಾಮಿ ‘ಕ್ರೂಸ್’ ಹಡಗಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ಖಾನ್ ಹಾಗೂ ಇತರ ಏಳು ಜನರನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ (ಎನ್‌ಸಿಬಿ) ಅಧಿಕಾರಿಗಳು ಭಾನುವಾರ ಬಂಧಿಸಿ ಕೋರ್ಟ್‍ಗೆ ಹಾಜರು ಪಡಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ಅಕ್ಟೋಬರ್ 7 ರವರೆಗೆ ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಇಂದು ಆ ಅವಧಿ ಮುಗಿದ ಹಿನ್ನೆಲೆ ಕೋರ್ಟ್ ಗೆ ಹಾಜರು ಪಡಿಸಲಾಯಿತು.
#UPDATE | Mumbai court sends Aryan Khan, Arbaz Merchant and 6 others to judicial custody for 14 days in drugs seizure at cruise ship
Court says the case will now be heard by special NDPS court https://t.co/8rqko8epsc
— ANI (@ANI) October 7, 2021
ಆರ್ಯನ್ ಖಾನ್ ಸೇರಿದಂತೆ ಮೂವರನ್ನು ಮುಂಬೈನ ಕಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಅಧಿಕಾರಿಗಳು, ಮತ್ತಷ್ಟು ವಿಚಾರಣೆಗಾಗಿ ಅಕ್ಟೋಬರ್ 11 ರವರೆಗೆ ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿತು. ಆದರೆ, ಎನ್‍ಸಿಬಿಯ ಮನವಿಯನ್ನು ನಿರಾಕರಿಸಿದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದರು. ಇದೇ ವೇಳೆ ಆರ್ಯನ್ ಪರ ವಕೀಲರು ಸಲ್ಲಿಸಿದ ಜಾಮೀನು ಅರ್ಜಿ(ಮಧ್ಯಂತರ ಮತ್ತು ಪೂರ್ಣ ಪ್ರಮಾಣ)ಗಳನ್ನುನ್ನು ಸೆಷನ್ಸ್ ಕೋರ್ಟ್ ಗೆ ವರ್ಗಾವಣೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.