ಭಾರತವು ವಿಶ್ವಕ್ಕೇ ಮಾದರಿ: ಪ್ರಧಾನಿ ಮೋದಿ
Team Udayavani, Oct 8, 2021, 7:10 AM IST
ಡೆಹ್ರಾಡೂನ್: “ಸಮುದ್ರವೇ ಇರಲಿ, ಕಾಡೇ ಇರಲಿ… ನಾವು ಎಲ್ಲ ಸ್ಥಳಗಳಿಗೂ ಲಸಿಕೆ ಪೂರೈಕೆ ಮಾಡಿದ್ದೇವೆ. ಆ ಮೂಲಕ ಪೂರ್ತಿ ವಿಶ್ವಕ್ಕೇ ಮಾದರಿಯಾಗಿ ನಿಂತಿದ್ದೇವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಉತ್ತರಾಖಂಡದ ರಿಶಿಕೇಶ ಐಐಟಿಯಲ್ಲಿ 35 ಆಮ್ಲಜನಕ ಘಟಕಗಳ ಉದ್ಘಾಟನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಈ ಮೇಲಿನ ಮಾತುಗಳನ್ನಾಡಿದ್ದಾರೆ. ಈಗ ನಮ್ಮ ದೇಶದ ಪ್ರತೀ ಜಿಲ್ಲೆಯೂ ಒಂದೊಂದು ಆಮ್ಲಜನಕ ಘಟಕ ಹೊಂದಿದೆ. 1,224 ಆಮ್ಲಜನಕ ಘಟಕವನ್ನು ಪಿಎಂ ಕೇರ್ ಹಣದಿಂದಲೇ ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.
ಡಬಲ್ ಎಂಜಿನ್ ಅಭಿವೃದ್ಧಿ: ಮುಂದಿನ ವರ್ಷ ಉತ್ತರಾಖಂಡ ವಿಧಾನಸಭೆ ಚುನಾವಣೆ ನಡೆಯಲಿದ್ದು, ಆ ಕುರಿತು ಪ್ರಸ್ತಾವಿಸಿದ ಮೋದಿ, “ಇಲ್ಲಿನ ಜನರು ನಮ್ಮ ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡಬೇಕು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯಿದ್ದರೆ, ಡಬಲ್ ಎಂಜಿನ್ ಸರಕಾರ ಮಾಡಿಕೊಂಡು ಉತ್ತಮ ಅಭಿವೃದ್ಧಿ ಕಾರ್ಯ ಮಾಡಬಹುದು’ ಎಂದು ಹೇಳಿದ್ದಾರೆ. ಆರೇಳು ವರ್ಷಗಳ ಹಿಂದೆ ಎಲ್ಲೋ ಕೆಲವು ರಾಜ್ಯಗಳಲ್ಲಿ ಮಾತ್ರ ಐಐಟಿ ಇತ್ತು. ಆದರೆ ಇದೀಗ ಅದನ್ನು ಪ್ರತೀ ರಾಜ್ಯದಲ್ಲಿ ಸ್ಥಾಪಿಸುವ ಕೆಲಸ ನಡೆಯುತ್ತಿದೆ. ಹಾಗೆಯೇ ಪ್ರತೀ ಜಿಲ್ಲೆಯಲ್ಲೂ ಕನಿಷ್ಠ ಒಂದು ವೈದ್ಯಕೀಯ ಕಾಲೇಜು ಸ್ಥಾಪಿಸುವ ಗುರಿಯನ್ನು ಸರಕಾರ ಹೊಂದಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.