ಬಲ್ಲಾಳರಾಯನ ದುರ್ಗದಲ್ಲಿ ಪ್ರವಾಸಿಗರ ಬೇಜವಾಬ್ದಾರಿ, ಪ್ರವಾಸಿಗರ ವಿರುದ್ಧ ಪ್ರವಾಸಿಗರೇ ಕಿಡಿ


Team Udayavani, Oct 8, 2021, 10:07 AM IST

ಬಲ್ಲಾಳರಾಯನ ದುರ್ಗದಲ್ಲಿ ಪ್ರವಾಸಿಗರ ಬೇಜವಾಬ್ದಾರಿ

ಚಿಕ್ಕಮಗಳೂರು.ಅ.07: ಜೀವವೈದ್ಯಮಯ ತಾಣ. ಪ್ರಾಕೃತಿಕ ಸೊಬಗು. ಸುಂದರ ಪ್ರವಾಸಿ ತಾಣವಾಗಿರೋ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನ ದುರ್ಗದಲ್ಲಿ ಪ್ರವಾಸಿಗರು ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಹಾಗೂ ಮದ್ಯದ ಬಾಟಲಿಗಳನ್ನ ಬಿಸಾಡಿರುವುದರಿಂದ ಸ್ಥಳಿಯರು ಪ್ರವಾಸಿಗರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಜಿಲ್ಲೆಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದೇವರಮನೆ ಗುಡ್ಡ, ದತ್ತಪೀಠ ಇವುಗಳಷ್ಟೆ ಸುಂದರವಾಗಿರೋ ತಾಣ ಬಲ್ಲಾಳರಾಯನ ದುರ್ಗ. ಹಿಂದೆ ಇಲ್ಲಿ ರಾಜರ ಆಳ್ವಿಕೆಯ ಕುರುಹುಗಳು ಇವೆ.

ಇದನ್ನೂ ಓದಿ:- ವಾಡಿ ಎಸಿಸಿ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು

ಈ ಬಲ್ಲಾಳರಾಯನ ದುರ್ಗದ ಪಕ್ಕದ ಪಕ್ಕದಲ್ಲೇ ರಾಣಿಝರಿ ಕೂಡ ಇದೆ. ಎತ್ತರದ ಪ್ರದೇಶದಿಂದ ಧುಮ್ಮಿಕ್ಕೋ ಈ ಜಲಪಾತದ ಸೌಂದರ್ಯ ನೋಡುಗರ ಕಣ್ಣಿಗೆ ಕಟ್ಟುವಂತಿದೆ. ಹಿಂದೆ ಇಲ್ಲಿ ಆಳ್ವಿಕೆ ಮಾಡುತ್ತಿದ್ದ ರಾಜನ ಪತ್ನಿ ಝರಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಇಲ್ಲಿನ ಝರಿಗೆ ರಾಣಿಝರಿ ಎಂದು ಹೆಸರು ಬಂದತು ಅನ್ನೋದು ಸ್ಥಳಿಯರ ಮಾತು. ಆದರೆ, ಮುಗಿಲೆತ್ತರದ ಬೆಟ್ಟ-ಗುಡ್ಡಗಳಿಂದ ಕೂಡಿರೋ ಇಲ್ಲಿನ ಸುಂದರ ವಾತಾವರಣದಲ್ಲಿ ರಾತ್ರಿ ವೇಳೆ ಪಾರ್ಟಿ ಕೂಡ ಮಾಡುತ್ತಿರುವುದು ಇಲ್ಲಿನ ಸೌಂದರ್ಯಕ್ಕೆ ಮುಳ್ಳಾಗಿದೆ.

ಪ್ರವಾಸಿಗರು ಹಾಗೂ ಸ್ಥಳಿಯರು ರಾತ್ರಿ ಈ ಸುಂದರ ಜಾಗದಲ್ಲಿ ಮದ್ಯ ಸೇವಿಸಿ ಬಾಟಲಿಗಳನ್ನ ಅಲ್ಲೇ ಬಿಟ್ಟು, ಹೊಡೆದು ಹಾಕಿ ಹೋಗುತ್ತಿದ್ದಾರೆ. ಇದರಿಂದ ಇಲ್ಲಿನ ಸೌಂದರ್ಯ ಹಾಳಾಗುತ್ತಿದೆ. ಮುಂದಕ್ಕೆ ಇನ್ನೂ ಹಾಳಾಗುತ್ತೆ ಅನ್ನೋ ಆತಂಕ ಸ್ಥಳಿಯರದ್ದು. ಸುತ್ತಲು ಬೆಟ್ಟ-ಗುಡ್ಡಗಳು. ತಣ್ಣನೆಯ ಗಾಳಿ. ಟ್ರಕ್ಕಿಂಗ್ ಮಾಡುವ ಪ್ರವಾಸಿಗರಿಗೆ ಇದು ಹೇಳಿ ಮಾಡಿಸಿದ ಟ್ರಕ್ಕಿಂಗ್ ಸ್ಪಾಟ್. ಈ ಸುಂದರ ತಾಣ ಇರುವುದು ಎಷ್ಟೋ ಜನಕ್ಕೆ ಗೊತ್ತೇ ಇಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಭಾಗಕ್ಕೂ ನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.

ಆದರೆ, ಬರುವಂತಹಾ ಪ್ರವಾಸಿಗರು ಇಲ್ಲಿ ಎಲ್ಲೆಂದರಲ್ಲಿ ನೀರಿನ ಬಾಟಲಿ, ಮದ್ಯದ ಬಾಟಲಿಗಳು ಸೇರಿದಂತೆ ತಿಂಡಿ-ತಿನಿಸುಗಳನ್ನ ತಿಂದು ಎಲ್ಲೆಂದರಲ್ಲಿ ಬಿಸಾಡುತ್ತಿದ್ದಾರೆ. ಇದು ಸ್ಥಳಿಯರ ಆಕ್ರೋಶಕ್ಕೆ ಕಾರಣವಾಗಿದೆ. ಇಂದು ಕೂಡ ನೂರಾರು ಪ್ರವಾಸಿಗರು ಭೇಟಿ ನೀಡಿದ್ದರು. ಹೀಗೆ ಬಂದವರು ಪ್ರವಾಸಿಗರು ಬಂದು ನಿಂತು ನೋಡುವ ಸ್ಥಳದಲ್ಲೇ ಪ್ಲಾಸ್ಟಿಕ್‍ಗಳನ್ನ ಎಸೆದು ಹೋಗಿದ್ದಾರೆ. ಪ್ರಕೃತಿ ಸೌಂದರ್ಯವನ್ನ ಸವಿಯಲು ಬಂದ ಪ್ರವಾಸಿಗರು ಪ್ರವಾಸಿಗರೇ ವಿರುದ್ಧವೇ ಕಿಡಿ ಕಾರಿದ್ದಾರೆ.

ಇದು ನಮ್ಮದು. ನಾವು ಉಳಿಸಿ-ಬೆಳೆಸಬೇಕು ಅನ್ನೋ ಮನೋಭಾವ ಪ್ರವಾಸಿಗರಲ್ಲಿ ಬರಬೇಕು. ಈ ಬಗ್ಗೆ ಗ್ರಾಮ ಪಂಚಾಯಿತಿ ಹಾಗೂ ಅಧಿಕಾರಿಗಳು ಗಮನ ಹರಿಸಬೇಕು. ಇಲ್ಲವಾದರೆ ಕ್ರಮೇಣ ಸೃಷ್ಠಿಸಲಸಾಧ್ಯವಾದಂತಹಾ ಇಂತಹಾ ಸುಂದರ ತಾಣವನ್ನ ಕಳೆದುಕೊಳ್ಳುವುದು ನಿಶ್ಚಿತ. ಹಾಗಾಗಿ, ಪ್ರವಾಸಿಗರು ಕೂಡ ಸ್ವಯಂ ಈ ಸೌಂದರ್ಯವನ್ನ ಉಳಿಸಬೇಕು. ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕೆಂದು ಪ್ರವಾಸಿಗರು ಆಡಳಿತ ವ್ಯವಸ್ಥೆ ವಿರುದ್ಧ ಕಿಡಿಕಾರಿದ್ದಾರೆ.

ಟಾಪ್ ನ್ಯೂಸ್

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.