ಕಾರಿನಿಂದ ಇಳಿದು ಶಾಲಾ ಮಕ್ಕಳಿಗೆ ಶುಭಕೋರಿದ ರಾಷ್ಟ್ರಪತಿ
Team Udayavani, Oct 8, 2021, 6:26 PM IST
ಮಂಗಳೂರು : ಘನತೆವೆತ್ತ ರಾಷ್ಟ್ರಪತಿಗಳಾದ ರಾಮನಾಥ ಕೋವಿಂದ್ ಅವರು ತಮ್ಮ ಪತ್ನಿ ಹಾಗೂ ಪುತ್ರಿಯೊಂದಿಗೆ ಅ.8ರ ಶುಕ್ರವಾರ ಸಂಜೆ ಪ್ರವಾಸವನ್ನು ಮುಗಿಸಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ತೆರಳಿದರು.
ವಿಮಾನ ನಿಲ್ದಾಣಕ್ಕೆ ತೆರಳುವ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದ ಕುರುಬಗೇರಿಯಲ್ಲಿ ಕಾರಿನಿಂದ ಇಳಿದ ರಾಷ್ಟ್ರಪತಿಗಳು ಶಾಲೆ ಕಾಪೌಂಡ್ ನ ಬಳಿ ಇದ್ದ ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.
ಇದನ್ನೂ ಓದಿ:ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಎಡಿಜಿಪಿ ಜಿತೇಂದ್ರ, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್, ರಾಷ್ಟ್ರಪತಿ ಭವನದ ಅಧಿಕಾರಿಗಳು ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ತೆರಳುವ ಮುನ್ನ ಸಚಿವರು ರಾಷ್ಟ್ರಪತಿಯವರಿಗೆ ಪುಸ್ತಕವೊಂದನ್ನು ಕಾಣಿಕೆಯಾಗಿ ನೀಡಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.