![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 8, 2021, 7:52 PM IST
ಬಂಟ್ವಾಳ: ಬಂಟ್ವಾಳ ಸರ್ವೇ ಇಲಾಖೆಯ ಸರ್ವೇಯರ್ ಮಹಿಳೆಯರೊಬ್ಬರಿಂದ ಜಾಗದ ಗಡಿಗುರುತಿಗಾಗಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ದ.ಕ.ಜಿಲ್ಲಾ ಎಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಿ.ಸಿ.ರೋಡಿನಲ್ಲಿರುವ ಮಿನಿ ವಿಧಾನಸೌಧದ ಸರ್ವೇ ಇಲಾಖೆ ಕಚೇರಿಯಲ್ಲಿ ಮಹಿಳೆಯಿಂದ 6 ಸಾವಿರ ರೂ. ಲಂಚ ಪಡೆಯುತ್ತಿದ್ದ ಸಂದರ್ಭ ಎಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿ ಸರ್ವೇಯರ್ ಸುರೇಶ್‌ನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ:ಮೋದಿಯಿಂದ ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ: ಪ್ರತಾಪ್ ಸಿಂಹ
ಕಳ್ಳಿಗೆ ನಿವಾಸಿ ಪ್ರೀಮಾ ಸರಿತಾ ಪಿಂಟೋ ಅವರು ತಮ್ಮ ಜಾಗದ ಗಡಿಗುರುತಿಗೆ ಸರ್ವೇ ಮಾಡುವಂತೆ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಆಗ ಸರ್ವೇಯರ್ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಮಹಿಳೆ ಎಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಪಶ್ಚಿಮ ವಲಯ ಎಸಿಬಿ ಎಸ್‌ಪಿ ಸೈಮನ್ ಅವರ ಮಾರ್ಗದರ್ಶನ ಡಿವೈಎಸ್‌ಪಿ ಕೆ.ಸಿ.ಪ್ರಕಾಶ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್‌ಗಳಾದ ಗುರುರಾಜ್ ಹಾಗೂ ಶ್ಯಾಮ್‌ಸುಂದರ್ ಎಸಿಬಿ ಸಿಬಂದಿ ಜತೆ ದಾಳಿ ನಡೆಸಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.