ಗಡಿಕೇಶ್ವರ ಗ್ರಾಮದಲ್ಲಿ 6 ವರ್ಷಗಳಿಂದ ಕಂಪಿಸುತ್ತಿದೆ ಭೂಮಿ: ಗ್ರಾಮಸ್ಥರಲ್ಲಿ ಹೆಚ್ಚಾದ ಆತಂಕ
Team Udayavani, Oct 9, 2021, 3:34 PM IST
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಕಳೆದ 6 ವರ್ಷಗಳಿಂದ ಭೂಮಿಯಿಂದ ಭಾರಿ ಶಬ್ದ ಉಂಟಾಗುತ್ತಿದೆ. ಭೂಮಿ ಕಂಪಿಸುತ್ತಿರುವುದರಿಂದ ಗ್ರಾಮಸ್ಥರು ಭಯಗೊಂಡ ಮನೆಯಿಂದ ಹೊರ ಓಡಿ ಬಂದಿದ್ದಾರೆ.
ಹಲಚೆರಾ ತೆಗಲತಿಪ್ಪಿ,ಕುಡಹಳ್ಳಿ,ಕೊರವಿ,ಹೊಸಹಳ್ಳಿ ಗ್ರಾಮದಲ್ಲಿ ಶನಿವಾರ ಮುಂಜಾನೆ 7.34ಕ್ಕೆ ಮತ್ತು 7.37ಕ್ಕೆ ಮಧ್ಯಾಹ್ನ 1.56ಕ್ಕೆ ಭೂಮಿ ನಡುಗಿದೆ. ಹೊರಗಡೆ ಮಳೆ ಗುಡುಗು ಸಿಡಿಲು ಮಿಂಚಿನ ಭಯ ಮನೆಯಲ್ಲಿ ಇದ್ದರೆ ಮನೆ ಬೀಳುವ ಭಯ ಗ್ರಾಮಸ್ಥರಲ್ಲಿ ಆತಂಕವನ್ನು ಮಾಡಿದೆ. ಕಳೆದ 6 ವರ್ಷಗಳಿಂದ ಭೂಮಿ ಕಂಪಿಸುತ್ತದೆ. ಆದರೆ ಇದರ ಬಗ್ಗೆ ವರದಿ ನೀಡುತ್ತಿಲ್ಲ. ನಮಗೆ ಜೀವ ರಕ್ಷಣೆ ಇಲ್ಲದಂತಾಗಿದೆ ಎಂದು ಗ್ರಾಮಸ್ಥರು ಹೇಳುತ್ತಾರೆ.
ಸರ್ಕಾರದ ಅಧಿಕಾರಿಗಳ,ಜನಪ್ರತಿನಿಧಿಗಳ ನಿರ್ಲಕ್ಷ್ಯ ಖಂಡಿಸಿ ಅ.11ರಂದು ರಸ್ತೆ ತಡೆ ನಡೆಸಿ ಸರಕಾರಕ್ಕೆ ಮನವಿಯನ್ನು ಸಲ್ಲಿಸಲು ನಿರ್ಧರಿಸಿದ್ದಾರೆ.
-ಶಾಮರಾವ್ ಚಿಂಚೋಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.