ಅ. 25ರ ವರೆಗೆ ರಾತ್ರಿ ಕರ್ಫ್ಯೂ ವಿಸ್ತರಣೆ: ಜಿಲ್ಲಾಧಿಕಾರಿ
Team Udayavani, Oct 10, 2021, 6:23 AM IST
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. 1ಕ್ಕಿಂತ ಕಡಿಮೆಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಈ ಹಿಂದೆ ವಿಧಿಸಿದ್ದ ರಾತ್ರಿ 10ರಿಂದ ಬೆಳಗ್ಗೆ 5ರ ವರೆಗಿನ ರಾತ್ರಿ ಕರ್ಫ್ಯೂವನ್ನು ಅ. 25ರ ವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದೆ.
ದಕ್ಷಿಣ ಕನ್ನಡಲ್ಲಿ ಯಥಾಸ್ಥಿತಿ
ದಕ್ಷಿಣ ಕನ್ನಡದಲ್ಲೂ ರಾತ್ರಿ ಕರ್ಫ್ಯೂ ಜಾರಿಯಲ್ಲಿದ್ದು, ಮುಂದಿನ ಆದೇಶದ ತನಕ ಯಥಾಸ್ಥಿತಿಯಲ್ಲಿರುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ದ.ಕ. ಜಿಲ್ಲೆ: 27 ಮಂದಿಗೆ ಸೋಂಕು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ದಿನದ ಪ್ರಕರಣ ಮತ್ತಷ್ಟು ಇಳಿಮುಖಗೊಂಡಿದ್ದು, ಇತ್ತೀಚಿನ ದಿನಗಳಲ್ಲಿ ಕನಿಷ್ಠ ಪ್ರಕರಣ ಶನಿವಾರ ದಾಖಲಾಗಿದೆ.
ಜಿಲ್ಲೆಯಲ್ಲಿ 27 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಯಾವುದೇ ಸಾವಿನ ವರದಿಯಾಗಿಲ್ಲ. 73 ಮಂದಿ ಗುಣಮುಖರಾಗಿದ್ದಾರೆ. ಸದ್ಯ 529 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಗುರುವಾರ ಶೇ. 0.31ರಷ್ಟು ಪಾಸಿಟಿವಿಟಿ ದರ ದಾಖಲಾಗಿದೆ.
ಇದನ್ನೂ ಓದಿ:ಕೋವಿಡ್ : ರಾಜ್ಯದಲ್ಲಿಂದು 451 ಹೊಸ ಪ್ರಕರಣ | 1455 ಸೋಂಕಿತರು ಗುಣಮುಖ
ಉಡುಪಿ ಜಿಲ್ಲೆಯಲ್ಲಿ 21 ಮಂದಿಗೆ ಸೋಂಕು
ಜಿಲ್ಲೆಯಲ್ಲಿ ಶನಿವಾರ 21 ಮಂದಿಗೆ ಸೋಂಕು ದೃಢಪಟ್ಟಿದೆ. 13 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 84 ಸಕ್ರಿಯ ಪ್ರಕರಣ ಗಳಿವೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಇಲಾಖೆಯ ಪ್ರಕಟನೆ ತಿಳಿಸಿದೆ.
ಕಾಸರಗೋಡು: 185 ಮಂದಿಗೆ ಸೋಂಕು
ಜಿಲ್ಲೆಯಲ್ಲಿ ಶನಿವಾರ 185 ಮಂದಿಗೆ ಸೋಂಕು ದೃಢಪಟ್ಟಿದ್ದು 171 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 1,236 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ಸಾವು ಸಂಭವಿಸಿಲ್ಲ.
ಕೇರಳದಲ್ಲಿ 9,470 ಮಂದಿಗೆ ಸೋಂಕು
ರಾಜ್ಯದಲ್ಲಿ ಶನಿವಾರ 9,470 ಮಂದಿಗೆ ಸೋಂಕು ದೃಢಪಟ್ಟಿದ್ದು 12,881 ಮಂದಿ ಗುಣಮುಖರಾಗಿದ್ದಾರೆ. 101 ಮಂದಿ ಮೃತಪಟ್ಟಿದ್ದಾರೆ.
ಕೊಡಗು: 10 ಮಂದಿಗೆ ಕೊರೊನಾ
ಕೊಡಗು ಜಿಲ್ಲೆಯಲ್ಲಿ ಶನಿವಾರ 10 ಮಂದಿಗೆ ಕೋವಿಡ್ ದೃಢಪಟ್ಟಿದೆ. 8 ಮಂದಿ ಸೋಂಕಿನಿಂದ ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ ಪ್ರಸಕ್ತ 296 ಸಕ್ರಿಯ ಪ್ರಕರಣಗಳಿವೆ. ಸಾವಿನ ಪ್ರಕರಣ ದಾಖಲಾಗಿಲ್ಲ. ಪಾಸಿಟಿವಿಟಿ ಪ್ರಮಾಣ ಶೇ. 0.25ರಷ್ಟಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.