ಕನ್ನಡದ ಹಿರಿಯ ನಟ ಸತ್ಯಜಿತ್ ಇನ್ನಿಲ್ಲ!
Team Udayavani, Oct 10, 2021, 8:35 AM IST
ಬೆಂಗಳೂರು: ಹಲವು ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಸತ್ಯಜಿತ್ ಅವರು ತಡರಾತ್ರಿ ಎರಡು ಗಂಟೆ ಸಮಯದಲ್ಲಿ ನಿಧನರಾಗಿದ್ದಾರೆ. ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸತ್ಯಜಿತ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದ ಸತ್ಯಜಿತ್ ಆ ಮೂಲಕ ಚಿತ್ರರಂಗದಲ್ಲಿ ಹೆಸರು ಮಾಡಿದ್ದರು. ಚಂದನವನದ ಹಲವಾರು ಸ್ಟಾರ್ ಕಲಾವಿದರ ಸಿನಿಮಾಗಳಲ್ಲಿ ನಟಿಸುವ ಅವಕಾಶ ಅವರಿಗೆ ಸಿಕ್ಕಿತ್ತು.
ಸತ್ಯಜಿತ್ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿ ಕಳೆದ ಸೋಮವಾರ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ. ಆಸ್ಪತ್ರೆಗೆ ಸತ್ಯಜಿತ್ ದಾಖಲಿಸಿದ ದಿನ ಮಾಧ್ಯಮದವರ ಜತೆ ಮಾತನಾಡಿದ್ದ ಪುತ್ರ ಆಕಾಶ್, ತಂದೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ದಿನದಿಂದ ದಿನಕ್ಕೆ ಆರೋಗ್ಯ ಹದಗೆಡುತ್ತಲೇ ಇದೆ. ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದರು.
ಇದನ್ನೂ ಓದಿ:ಅಭಿಮನ್ಯುವಿನಂತೆ ಹೋರಾಡಿದ ಅರುಣ್ ನೆನಪಲ್ಲಿ…
ಗ್ಯಾಂಗ್ರಿನ್ನಿಂದಾಗಿ ಅವರ ಒಂದು ಕಾಲು ಕತ್ತರಿಸಲಾಗಿತ್ತು. ಬಳಿಕ ಸಕ್ಕರೆ ಕಾಯಿಲೆ ಮತ್ತು ಇನ್ನಿತರೆ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. ಕಾಲಿನಲ್ಲಿ ಗ್ಯಾಂಗ್ರಿನ್ ಕಾಣಿಸಿಕೊಂಡ ಬಳಿಕ ಸಿನಿಮಾ ರಂಗದಿಂದ ಅವರಿಗೆ ಬೇಡಿಕೆ ಕಡಿಮೆ ಆಯಿತು. ಬಳಿಕ ಕುಟುಂಬದ ಹಣಕಾಸಿನ ಸ್ಥಿತಿಯು ಉತ್ತಮವಾಗಿರಲಿಲ್ಲ. ಅದಲ್ಲದೆ ಮಗಳ ಮೇಲೆಯೂ ಸತ್ಯಜಿತ್ ಅಸಮಾಧಾನವಾಗಿತ್ತು. ಕುಟುಂಬ ಮತ್ತು ಆರೋಗ್ಯ ಸಮಸ್ಯೆಗಳಿಂದ ಸತ್ಯಜಿತ್ ತುಂಬಾ ಕೊರಗಿ ಹೋಗಿದ್ದರು.
2018ರಲ್ಲಿ ತೆರೆಕಂಡ ಪ್ರಿಯಾಂಕಾ ಉಪೇಂದ್ರ ಅಭಿನಯದ ಸೆಕೆಂಡ್ ಹಾಫ್ ಚಿತ್ರದ ಸತ್ಯಜಿತ್ ಅಭಿನಯಿಸಿದ್ದರು. ಇದೇ ಸತ್ಯಜಿತ್ ಅಭಿನಯಿಸಿದ ಕೊನೆಯ ಚಿತ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.