ಅಸಮಾಧಾನ ಶಮನ; ನಾಮಪತ್ರ ಹಿಂತೆಗೆಸಲು ಕಸರತ್ತು
ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಸಂಪನ್ನ|ಅ.11ರಂದು ನಾಮಪತ್ರ ಪರಿಶೀಲನೆ| 13 ನಾಮಪತ್ರ ವಾಪಸ್‌ಗೆ ಕೊನೆ ದಿನ
Team Udayavani, Oct 10, 2021, 1:41 PM IST
ಹಾವೇರಿ: ದಿ.ಸಿ.ಎಂ.ಉದಾಸಿ ಅವರ ನಿಧನದಿಂದ ತೆರವಾಗಿರುವ ಹಾನಗಲ್ಲ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಕೊನೆಗೊಂಡಿದ್ದು, ಈಗ ಪ್ರಚಾರ ಕಾರ್ಯ ಜೋರಾಗಿ ನಡೆದಿದೆ. ನಾಮಪತ್ರ ಸಲ್ಲಿಕೆಗೂ ಮುನ್ನ ಟಿಕೆಟ್‌ಗಾಗಿ ಕಾಂಗ್ರೆಸ್, ಬಿಜೆಪಿಯಲ್ಲಿದ್ದ ಅಸಮಾಧಾನ ಶಮನಗೊಂಡಿದ್ದು, ಮಗ್ಗಲು ಮುಳ್ಳಾಗಿರುವ ಪಕ್ಷೇತರ ಅಭ್ಯರ್ಥಿಗಳ ನಾಮಪತ್ರ ಹಿಂತೆಗೆಸಲು ಕಸರತ್ತು ಶುರುವಾಗಿದೆ.
ಅ.11ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅ.13 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದರಿಂದ ಅಂತಿಮವಾಗಿ ಎಷ್ಟು ಅಭ್ಯರ್ಥಿಗಳು ಕಣದಲ್ಲಿ ಉಳಿಯಲಿದ್ದಾರೆಂಬುದು ಕೂತೂಹಲ ಮೂಡಿಸಿದೆ.
ತಹಶೀಲ್ದಾರ್‌ಗೆ ಸೂಕ್ತ ಸ್ಥಾನಮಾನ ಭರವಸೆ: ಕಾಂಗ್ರೆಸ್ ಟಿಕೆಟ್‌ಗಾಗಿ ಮಾಜಿ ಸಚಿವ ಮನೋಹರ ತಹಶೀಲ್ದಾರ್ ಪಟ್ಟು ಹಿಡಿದಿದ್ದರು. ಸ್ಥಳೀಯರಿಗೇ ಟಿಕೆಟ್ ನೀಡಬೇಕೆಂದು ಒತ್ತಡ ಹಾಕಿದ್ದರು. ಕೊನೆಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಹಶೀಲ್ದಾರ್ ಮನವೊಲಿಸಿ ಶ್ರೀನಿವಾಸ ಮಾನೆ ಅವರಿಗೆ ಟಿಕೆಟ್ ಕೊಟ್ಟಿದ್ದಾರೆ. ನಾಮಪತ್ರ ಸಲ್ಲಿಕೆ ದಿನವೇ ನನಗೆ ಏನು ಸ್ಥಾನಮಾನ ಕೊಡ್ತಾರೆ ಎಂಬುದನ್ನು ಘೋಷಣೆ ಮಾಡಬೇಕೆಂದು ತಹಶೀಲ್ದಾರ್ ಮನವಿ ಮಾಡಿದ್ದರು. ಹೀಗಾಗಿ ಹಾನಗಲ್ಲ ಕುಮಾರೇಶ್ವರ ಮಠದಲ್ಲಿ ಕೆಲಕಾಲ ತಹಶೀಲ್ದಾರ್ ಅವರೊಂದಿಗೆ ಚರ್ಚಿಸಿ ಸೂಕ್ತ ಸ್ಥಾನಮಾನ ಭರವಸೆ ನೀಡುವ ಮೂಲಕ ಅಸಮಾಧಾನ ಶಮನಗೊಳಿಸಿದ್ದಾರೆ.
ಬಿಜೆಪಿಯಲ್ಲಿನ ಅಸಮಾಧಾನವೂ ಶಮನ: ಬಿಜೆಪಿಯಿಂದ ಶಿವರಾಜ ಸಜ್ಜನರ ಅವರನ್ನು ಅಚ್ಚರಿ ಎಂಬಂತೆ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದರಿಂದ ಕ್ಷೇತ್ರದಲ್ಲಿ ಭುಗಿಲೆದ್ದಿದ್ದ ಆಕ್ರೋಶ ಸಂಸದ ಶಿವಕುಮಾರ ಉದಾಸಿ ಅವರ ಮನವೊಲಿಕೆಯಿಂದ ಒಂದೇ ದಿನದಲ್ಲಿ ತಣ್ಣಗಾಗಿದೆ. ಶಿವರಾಜ ಸಜ್ಜನರ ಹೆಸರು ಅಂತಿಮ ಗೊಳ್ಳುತ್ತಿದ್ದಂತೆಯೇ ಕ್ಷೇತ್ರದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಲ್ಲದೇ, ಸಾಮೂಹಿಕ ರಾಜೀನಾಮೆಗೆ ಹಲವರು ಮುಂದಾಗಿದ್ದರು. ತಕ್ಷಣ ಸಂಸದ ಶಿವಕುಮಾರ ಉದಾಸಿ ಅಸಮಾಧಾನಗೊಂಡಿದ್ದ ಮುಖಂಡರು, ಕಾರ್ಯಕರ್ತರನ್ನು ಭೇಟಿಯಾಗಿ ಸಮಾಧಾನ ಪಡಿಸುವಲ್ಲಿ ಯಶಸ್ವಿಯಾದರು. ಇದರ ಪರಿಣಾಮ ನಾಮಪತ್ರ ಸಲ್ಲಿಸುವ ರ್ಯಾಲಿಗೆ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ದಂಡೇ ಹರಿದು ಬಂದು ಶಕ್ತಿ ಪ್ರದರ್ಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.