![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 10, 2021, 10:30 PM IST
ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮಾದರಿ ಕೋವಿಡ್‌ಫೀಲ್ಡ್ ಆಸ್ಪತ್ರೆ ತೆರೆಯಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಭಾನುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯ ಆವರಣದಲ್ಲಿ ನಿರ್ಮಿಸಿರುವ ಕೋವಿಡ್‌ಫೀಲ್ಡ್ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲಾ ಜಿಲ್ಲೆಯಲ್ಲೂ ಇದೇ ಮಾದರಿಯ ಆಸ್ಪತ್ರೆ ಆರಂಭಿಸಲಾಗುವುದು.ಆಸ್ಪತ್ರೆ ನಿರ್ಮಾಣಕ್ಕೆ ಸಮಸ್ಯೆಯಿದೆ.ಹೀಗಾಗಿ ವೈದ್ಯರು, ನರ್ಸ್, ಸಿಬ್ಬಂದಿ ನಿಯೋಜನೆ ಮಾಡಿ ಬಳಕ ಮಾದರಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಲಿದೆ ಎಂದು ತಿಳಿಸಿದರು.
ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯಡಿ ನೆರವು ನೀಡುವ ಮೂಲಕ ಕಾರ್ಪೊರೇಟ್ ಸಂಸ್ಥೆಗಳು ತಾವು ಬೆಳೆಯಲು ಅನುವು ಮಾಡಿಕೊಟ್ಟ ಸಮಾಜಕ್ಕೆ ಕೊಡುಗೆ ನೀಡಿ,ಉಪಕಾರ ಸ್ಮರಣೆ ಮಾಡುತ್ತಿವೆ. ಸರ್ಕಾರದ ಪ್ರಯತ್ನಗಳಲ್ಲಿ ಕೈಜೋಡಿಸುವ ಈ ಸಂಸ್ಥೆಗಳ ಉಪಕಾರಸ್ಮರಣೆಯನ್ನು ಸರ್ಕಾರ ಕೂಡ ಮಾಡಲಿದೆ ಎಂದು ಹೇಳಿದರು.
ಹುಟ್ಟಿದ ಕೂಡಲೇ ಯಾರೂ ದೊಡ್ಡವರಾಗುವುದಿಲ್ಲ.ನಮ್ಮ ಪೋಷಕರು, ಗುರುಗಳು, ನಮ್ಮ ಸಮಾಜ ಒಂದಲ್ಲ ಒಂದು ರೀತಿಯಲ್ಲಿ ನಮ್ಮ ಬೆಳವಣಿಗೆಗೆ ಕೊಡುಗೆ ನೀಡುತ್ತಾರೆ.ನಾವು ಬೆಳೆಯುವುದರೊಂದಿಗೆ ನಮ್ಮ ಸುತ್ತಮುತ್ತಲಿನವರನ್ನೂ ಬೆಳೆಸಬೇಕು.ಸಮಾಜಕ್ಕೆ ನಾವು ಪಡೆದುಕೊಂಡಿರುವುದರಲ್ಲಿ ಕಿಂಚಿತ್ತಾದರೂ ಹಿಂತಿರುಗಿಸಬೇಕು.ಬದುಕು ಸಾರ್ಥವಾಗಲಿದೆ ಎಂದು ತಿಳಿಸಿದರು.
ಉಚಿತವಾಗಿ ಕೋವಿಡ್ ಲಸಿಕೆ ಒದಗಿಸುವ ಮೂಲಕ ಲಸಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಪ್ರಧಾನಿ ನರೇಂದ್ರ ಮೋದಿ, ಮತ್ತು ಕೇಂದ್ರ ಆರೋಗ್ಯ ಸಚಿವರಿಗೆ ಅಭಿನಂದನೆ ಸಲ್ಲಿಸಿದರು.
ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 406 ಹೊಸ ಪ್ರಕರಣ ಪತ್ತೆ | 637 ಸೋಂಕಿತರು ಗುಣಮುಖ
ಕರ್ನಾಟಕದಲ್ಲಿ ನಂಬರ್ ಒನ್
ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಲಸಿಕಾ ಮೇಳದಲ್ಲಿ ದೇಶದಲ್ಲಿ ಒಟ್ಟು 2.5 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.ಕರ್ನಾಟಕದಲ್ಲಿ ಶೇ.83ರಷ್ಟು ಮೊದಲ ಡೋಸ್ ಲಸಿಕೆ ನೀಡಲಾಗಿದ್ದು ಲಸಿಕೆ ನೀಡಿಕೆ ವಿಚಾರದಲ್ಲಿ ಕರ್ನಾಟಕ ದಾಖಲೆ ನಿರ್ಮಿಸಿದೆ. ಪ್ರತಿ ಹಳ್ಳಿ ಹಳ್ಳಿಗೂ ಲಸಿಕೆ ತಲುಪಿಸಿದೆ.ಆ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮತ್ತು ಜನತೆಗೆ ಅಭಿನಂದನೆ ಸಲ್ಲಿಸುವುದಾಗಿ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಎಲ್. ಮಾಂಡವೀಯ ಹೇಳಿದರು.
ಕೋವಿಡ್ 19 ಸಾಂಕ್ರಾಮಿಕ ನಿಯಂತ್ರಣದಲ್ಲಿದ್ದರೂ ಇನ್ನೂ ಅಂತ್ಯವಾಗಿಲ್ಲ. ಆದ್ದರಿಂದ ಸರ್ಕಾರಗಳು ಜಾಗರೂಕರಾಗಿರುವುದು ಅತಿ ಮುಖ್ಯ. ಈ ನಿಟ್ಟಿನಲ್ಲಿ ಅಗತ್ಯವಿದ್ದೆಡೆ ಸುಲಭವಾಗಿ ಸ್ಥಳಾಂತರಿಸಬಹುದಾದ ಕೋವಿಡ್‌ಫೀಲ್ಡ್ ಆಸ್ಪತ್ರೆಗಳನ್ನು ಕರ್ನಾಟಕದಲ್ಲಿ ಸ್ಥಾಪಿಸುತ್ತಿರುವುದು ಒಂದು ದೂರದೃಷ್ಟಿಯ ನಡೆ ಎಂದರು.
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾತನಾಡಿದರು. ಸಂಸದ ಪಿ.ಸಿ. ಮೋಹನ್, ಶಾಸಕ ಉದಯ್ ಗರುಡಾಚಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.