ದ.ಕ., ಉಡುಪಿಯ 46 ಗ್ರಾ.ಪಂ.ಗಳಿಗೆ ಅಮೃತ ವಸತಿ ಭಾಗ್ಯ

ಸ್ವಂತ ಸೂರು, ನಿವೇಶನ ಕನಸು ನನಸಾಗುವ ನಿರೀಕ್ಷೆ

Team Udayavani, Oct 11, 2021, 6:10 AM IST

ದ.ಕ., ಉಡುಪಿಯ 46 ಗ್ರಾ.ಪಂ.ಗಳಿಗೆ ಅಮೃತ ವಸತಿ ಭಾಗ್ಯ

ಸಾಂದರ್ಭಿಕ ಚಿತ್ರ.

ಮಂಗಳೂರು: ಪ್ರತಿಯೊಬ್ಬ ಅರ್ಹರಿಗೂ ನಿವೇಶನ, ವಸತಿ ನೀಡುವ ಗುರಿಯ “ಅಮೃತ ಗ್ರಾಮೀಣ ವಸತಿ ಯೋಜನೆ’ಗೆ ದ. ಕನ್ನಡ ಮತ್ತು ಉಡುಪಿ ಜಿಲ್ಲೆಯ 46 ಗ್ರಾಮ ಪಂಚಾಯತ್‌ಗಳು ಆಯ್ಕೆಯಾಗಿದ್ದು, ಸಾವಿರಾರು ಮಂದಿಯ ಸ್ವಂತ ಸೂರಿನ ಕನಸು ನನಸಾಗಲಿದೆ.

ಈವರೆಗೆ ಸರಕಾರಗಳು ವಸತಿ ರಹಿತರು ಮತ್ತು ನಿವೇಶನ ರಹಿತರಿಗಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರೂ ಗ್ರಾಮ ಪಂಚಾಯತ್‌ ವ್ಯಾಪ್ತಿ ಯೊಂದರ ಅರ್ಹ ರೆಲ್ಲರಿಗೂ ವಸತಿ, ನಿವೇಶನ ಒದಗಿಸುವ ಯೋಜನೆ ಇದೇ ಮೊದಲು. ಅಮೃತ ಗ್ರಾಮೀಣ ವಸತಿ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯ 27, ಉಡುಪಿಯ 19 ಗ್ರಾಮ ಪಂಚಾಯತ್‌ಗಳು ಆಯ್ಕೆ ಆಗಿವೆ.

6 ಸಾವಿರಕ್ಕೂ ಅಧಿಕ ಮಂದಿಗೆ ಸೂರು
ದಕ್ಷಿಣ ಕನ್ನಡದಲ್ಲಿ ಆಯ್ಕೆಯಾಗಿ ರುವ ಗ್ರಾ. ಪಂಚಾಯತ್‌ಗಳಲ್ಲಿ 2,390 ಮಂದಿ ವಸತಿ ರಹಿತರಿದ್ದಾರೆ. 1,908 ಮಂದಿ ವಸತಿ, ನಿವೇಶನ ಎರಡೂ ಇಲ್ಲದವರು. ಉಡುಪಿ ಜಿಲ್ಲೆಯ 19 ಗ್ರಾಮ ಪಂಚಾಯತ್‌ಗಳಲ್ಲಿ 2 ಸಾವಿರಕ್ಕೂ ಅಧಿಕ ಮಂದಿಗೆ ವಸತಿ/ನಿವೇಶನ ದೊರೆಯುವ ಸಾಧ್ಯತೆ ಇದೆ.

ಯಾವ ಗ್ರಾ.ಪಂ.ಗಳು?
ದ.ಕ.ದ ಬಂಟ್ವಾಳ ತಾಲೂಕಿನ ಅಮಾrಡಿ, ಕುಕ್ಕಿಪಾಡಿ, ಪಂಜಿಕಲ್ಲು, ಸರಪಾಡಿ, ಇಡ್ಕಿದು, ಇರಾ, ಬೆಳ್ತಂಗಡಿ ತಾಲೂಕಿನ ಅಳದಂಗಡಿ, ಮಡಂತ್ಯಾರು, ಕೊಕ್ಕಡ, ಉಜಿರೆ, ಹೊಸಂಗಡಿ, ಪಡಂಗಡಿ, ಕಡಬ ತಾಲೂಕಿನ ಅಲಂಕಾರು, ಎಡಮಂಗಲ, ಮಂಗಳೂರು ತಾಲೂಕಿನ
ಮುನ್ನೂರು, ಐಕಳ, ಮುಚ್ಚಾರು, ಎಕ್ಕಾರು, ಮೂಡುಬಿದಿರೆ ತಾಲೂಕಿನ ಬೆಳುವಾಯಿ, ತೆಂಕಮಿಜಾರು, ಪುತ್ತೂರಿನ ನಿಡ್ಪಳ್ಳಿ ,ಬಲ್ನಾಡು , ಪಾಣಾಜೆ, ಸುಳ್ಯದ ಬಾಳಿಲ, ಮರ್ಕಂಜ, ಮಂಡೆಕೋಲು ಗ್ರಾ.ಪಂ.ಗಳು ಆಯ್ಕೆಯಾಗಿವೆ. ಉಡುಪಿ ಜಿಲ್ಲೆಯ 19 ಗ್ರಾ.ಪಂ.ಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದಲ್ಲಿ ಒಟ್ಟು 750 ಗ್ರಾ.ಪಂ.ಗಳನ್ನು ಯೋಜನೆಗೆ ಆಯ್ಕೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ:ವೀಕ್‌ಎಂಡ್‌ ಹುಮಸ್ಸಿನಲ್ಲಿದ್ದ ಜನರಿಗೆ ಕಿರಿಕಿರಿ ಉಂಟು ಮಾಡಿದ ಮಳೆ

ಖಾಸಗಿ ಜಮೀನು ಖರೀದಿ ಆಯ್ಕೆಯಾಗಿರುವ ಗ್ರಾ.ಪಂ.ಗಳಲ್ಲಿ ಸರಕಾರಿ ಜಮೀನು ಲಭ್ಯವಿಲ್ಲದಿದ್ದರೆ ಖಾಸಗಿ ಜಮೀನನ್ನು ಸರಕಾರದ ಮಾರ್ಗಸೂಚಿಗಳನ್ವಯ ಖರೀದಿಸಿ ಒದಗಿಸಬೇಕು. 2018ರ ಸಮೀಕ್ಷೆಯಲ್ಲಿನ ವಸತಿ ರಹಿತರ ಪಟ್ಟಿಯನ್ನು ಪರಿಶೀಲಿಸಿ ಅರ್ಹರು ಬಿಟ್ಟು ಹೋಗಿದ್ದರೆ ಸೇರ್ಪಡೆ ಮಾಡಿ ಗ್ರಾಮಸಭೆ ಮೂಲಕ ಏಕಕಾಲದಲ್ಲಿ ಆಯ್ಕೆ ಮಾಡಬೇಕು ಎಂದು ವಸತಿ ಇಲಾಖೆಯ ಕಾರ್ಯದರ್ಶಿ ಮನೋಜ್‌ ಕುಮಾರ್‌ ಮೀನಾ ಸೂಚನೆ ನೀಡಿದ್ದಾರೆ.

27 ಗ್ರಾ.ಪಂ.ಗಳನ್ನುಆಯ್ಕೆ ಮಾಡುವಾಗ ಬಹುತೇಕ ಸರಕಾರಿ ನಿವೇಶನ ಲಭ್ಯ ಇರುವ ಗ್ರಾ.ಪಂ.ಗಳನ್ನೇ ಆರಿಸಿ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಹಾಗಾಗಿ ಅರ್ಹರೆಲ್ಲರಿಗೂ ವಸತಿ ಮತ್ತು ನಿವೇಶನ ದೊರೆಯಲಿದೆ.
– ಡಾ| ಕುಮಾರ್‌, ದ.ಕ. ಜಿ.ಪಂ. ಸಿಇಒ

ಅಮೃತ ಗ್ರಾಮೀಣ
ವಸತಿ ಯೋಜನೆಗೆ ಉಡುಪಿ ಜಿಲ್ಲೆಯ 19 ಗ್ರಾ.ಪಂ.ಗಳನ್ನು ಆಯ್ಕೆ ಮಾಡಬೇಕಿದ್ದು, ಪ್ರಕ್ರಿಯೆ ನಡೆಯುತ್ತಿದೆ. ಆಯ್ಕೆ ಪೂರ್ಣಗೊಳಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿ ಸಲು ಒಂದು ವಾರದ ಅವಕಾಶವಿದೆ, ನಿಗ ದಿತ ಅವಧಿಯೊಳಗೆ ಅಂತಿಮಗೊಳಿ ಸಲಾಗುವುದು.
 -ಡಾ| ನವೀನ್‌ ಭಟ್‌,
ಉಡುಪಿ ಜಿ.ಪಂ. ಸಿಇಒ

- ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Mangaluru: ಕಾಂಕ್ರೀಟ್‌ ರಸ್ತೆ ನಿರ್ಮಿಸಿದರೂ ಫುಟ್‌ಪಾತ್‌ ಇಲ್ಲ

11

Mangaluru: ಕರಾವಳಿ ಉತ್ಸವ; ಅರಣ್ಯ ಅನುಭವ!

10(1

Mangaluru: ನಗರದ 18 ಕಡೆಗಳಲ್ಲಿ ಪೇ ಪಾರ್ಕಿಂಗ್‌

8

Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ

7

Mulki: ಉಗುಳಿದರೆ ದಂಡ; ಹಾಕುವವರು ಯಾರು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-neemo

ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.