ನ್ಯಾಷನಲ್ ಕಾನ್ಫರೆನ್ಸ್ ಗೆ ರಾಜೀನಾಮೆ;ದೇವೇಂದ್ರ ರಾಣಾ,ಸುರ್ಜಿತ್ ಸಿಂಗ್ ಬಿಜೆಪಿಗೆ ಸೇರ್ಪಡೆ
2019ರಲ್ಲಿ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿತ್ತು
Team Udayavani, Oct 11, 2021, 4:33 PM IST
ನವದೆಹಲಿ: ಫಾರೂಖ್ ಅಬ್ದುಲ್ಲಾ ನೇತೃತ್ವದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ದೇವೇಂದ್ರ ರಾಣಾ ಮತ್ತು ಸುರ್ಜಿತ್ ಸಿಂಗ್ ಸ್ಲಾಥಿಯಾ ಸೋಮವಾರ(ಅಕ್ಟೋಬರ್ 11) ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಇದನ್ನೂ ಓದಿ:ಅರಣ್ಯ ಇಲಾಖೆಯ ಸಿಬ್ಬಂದಿಗಳ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಹರ್ದೀಪ್ ಸಿಂಗ್ ಹಾಗೂ ಜಿತೇಂದ್ರ ಸಿಂಗ್ ಸಮ್ಮುಖದಲ್ಲಿ ರಾಣಾ ಮತ್ತು ಸ್ಲಾಥಿಯಾ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ವರದಿ ತಿಳಿಸಿದೆ. ರಾಣಾ ಮಾಜಿ ಶಾಸಕ ಹಾಗೂ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರ ಸಹೋದರ. ರಾಣಾ ಅವರು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ನ ಒಮರ್ ಅಬ್ದುಲ್ಲಾ ಅವರ ರಾಜಕೀಯ ಸಲಹೆಗಾರರಾಗಿಯೂ ಕಾರ್ಯನಿರ್ವಹಿಸಿದ್ದರು.
ಇಬ್ಬರ ಸೇರ್ಪಡೆಯನ್ನು ಜಮ್ಮು-ಕಾಶ್ಮೀರದ ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ತರುಣ್ ಚುಂಗ್ ಮತ್ತು ಜಮ್ಮು-ಕಾಶ್ಮೀರ ಘಟಕದ ಅಧ್ಯಕ್ಷ ರವೀಂದ್ರ ರೈನಾ ಅವರು ಸ್ವಾಗತಿಸಿದ್ದಾರೆ.
2019ರಲ್ಲಿ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿತ್ತು. ಬಳಿಕ ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Mangaluru: ಪಂಪ್ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.