ಅ. 21ರಿಂದ ಪೂರ್ಣ ಶಾಲಾರಂಭ; ದಸರಾ ರಜೆ ಬಳಿಕ 1-10ನೇ ತರಗತಿ, ಬಿಸಿಯೂಟ
Team Udayavani, Oct 12, 2021, 6:50 AM IST
ಬೆಂಗಳೂರು: ದಸರಾ ರಜೆ ಮುಗಿದ ತತ್‌ಕ್ಷಣ 1ರಿಂದ 10ನೇ ತರಗತಿಯ ವಿದ್ಯಾರ್ಥಿ ಗಳು ಪೂರ್ಣಪ್ರಮಾಣದ ತರಗತಿಗಳಿಗೆ ಹಾಜ ರಾಗಲು ಸಿದ್ಧರಾಗಬೇಕು.
ಅ. 21ರಿಂದಲೇ ರಾಜ್ಯದಲ್ಲಿ 1-10 ತರಗತಿಗಳಿಗೆ ಪೂರ್ಣ ಪ್ರಮಾಣದಲ್ಲಿ ತರಗತಿಗಳನ್ನು ಆರಂಭಿಸಲಿ ದ್ದೇವೆ ಮತ್ತು ಬಿಸಿಯೂಟ ನೀಡಲಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಶುಲ್ಕ ಸಮಸ್ಯೆಗೆ ಪರಿಹಾರ
ಖಾಸಗಿ ಶಾಲೆಯ ಶುಲ್ಕ ಸಮಸ್ಯೆಗೆ ನ್ಯಾಯಾಲಯದ ಆದೇಶದ ಪ್ರತಿ ಲಭಿಸಿದ ಬಳಿಕ ಪರಿಶೀಲಿಸಿ, ಸರಕಾರದಿಂದ ಸೂಕ್ತ ನಿರ್ದೇಶನ ನೀಡಲಾಗುತ್ತದೆ. ಜತೆಗೆ ಹೆತ್ತವರು ಮತ್ತು ಖಾಸಗಿ ಶಾಲಾಡಳಿತ ಮಂಡಳಿಗಳ ಸಭೆ ನಡೆಸಲಿದ್ದೇವೆ. ಆಂಧ್ರ ಪ್ರದೇಶ, ತೆಲಂಗಾಣ ಮಾದರಿಯಲ್ಲಿ ಶುಲ್ಕ ನಿಯಂತ್ರಣ ಸಮಿತಿ ರಚನೆ ಮಾಡಬಹುದೇ ಎಂಬುದರ ಬಗ್ಗೆಯೂ ಪರಿಶೀಲನೆ ನಡೆಸಿ, ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದೇವೆ ಎಂದರು.
ಬ್ರಿಡ್ಜ್ ಕೋರ್ಸ್
ಈಗ ಪ್ರಥಮ ಪಿಯುಸಿಯಲ್ಲಿರುವ ವಿದ್ಯಾರ್ಥಿಗಳಿಗೆ ಕಳೆದ ಬಾರಿ ಎಸೆಸೆಲ್ಸಿಯಲ್ಲಿ ಶೇ. 30ರಷ್ಟು ಪಠ್ಯಕಡಿತ ಮಾಡಲಾಗಿತ್ತು. ಈ ಕೊರತೆಯನ್ನು ಸರಿಪಡಿಸಲು ಪೂರ್ಣ ಪ್ರಮಾಣದ ಪಠ್ಯ ಬೋಧನೆ ಮತ್ತು ಕಲಿಕೆಗೆ ತಕ್ಕಂತೆ ಬ್ರಿಡ್ಜ್
ಕೋರ್ಸ್ ರೂಪಿಸಲಿದ್ದೇವೆ.
ಈ ವರ್ಷ ಪಠ್ಯ ಕಡಿತ ಮಾಡದೆ ನಿರ್ದಿಷ್ಟ ಅವಧಿಯಲ್ಲಿ ಬೋಧನೆ ಮುಗಿಸಲಿದ್ದೇವೆ. ಶನಿವಾರ ಮತ್ತು ರವಿವಾರ ವಿಶೇಷ ತರಗತಿ ನಡೆಸುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದೇವೆ ಎಂದು ಸಚಿವರು ಮಾಹಿತಿ ನೀಡಿದರು.
ಇದನ್ನೂ ಓದಿ:ಆರ್‌ಸಿಬಿ ಮೇಲೆ ರೈಡ್ ಮಾಡಿದ ಕೆಕೆಆರ್
ಪಠ್ಯಪುಸ್ತಕ ಪರಿಷ್ಕರಣೆ
ಶಾಲಾ ಪಠ್ಯದಲ್ಲಿರುವ ಅನೇಕ ಅಂಶಗಳಿಗೆ ಸಂಬಂಧಿಸಿ ದೂರು ಬಂದಿರುವ ಹಿನ್ನೆಲೆಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಹೊಸ ಸಮಿತಿ ನಿರ್ದಿಷ್ಟ ಕಾಲಮಿತಿಯಲ್ಲಿ ವರದಿ ಸಲ್ಲಿಸಲಿದೆ. ಪಠ್ಯ ಪರಿಷ್ಕರಣೆಗೆ ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲಿದ್ದೇವೆ ಮತ್ತು ಅಗತ್ಯವಿರುವ ಅಂಶಗಳನ್ನು ಸೇರಿಸಲಿದ್ದೇವೆ ಎಂದು ಸಚಿವ ಬಿ.ಸಿ. ನಾಗೇಶ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thalapathy 69: ರಿಲೀಸ್ ಗೂ ಮುನ್ನ ಕೋಟಿ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.