ಎನ್ಇಪಿ ಬಗ್ಗೆ ಅಲ್ಪಸಂಖ್ಯಾತರಿಗೆ ಆತಂಕ ಬೇಡ : ಸಚಿವ ಅಶ್ವತ್ಥನಾರಾಯಣ

ಮುಸ್ಲಿಂ ಪ್ರತಿನಿಧಿಗಳ ಜತೆ ಉನ್ನತ ಶಿಕ್ಷಣ ಸಚಿವರ ಸಭೆ

Team Udayavani, Oct 12, 2021, 7:21 PM IST

hghftyht

ಬೆಂಗಳೂರು: “ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇಪಿ-2020) ಬಗ್ಗೆ ಅಲ್ಪಸಂಖ್ಯಾತ ಸಮುದಾಯದವರಿಗೆ ಯಾವುದೇ ಅನುಮಾನವಾಗಲಿ, ಆತಂಕವಾಗಲಿ ಬೇಡ. ಇದು ಯಾರ ಹಕ್ಕುಗಳನ್ನಾಗಲಿ, ಸೌಲಭ್ಯಗಳನ್ನಾಗಲಿ ಕಸಿದು ಕೊಳ್ಳುವುದಿಲ್ಲ. ಎಲ್ಲ ಸಮುದಾಯಗಳ ಮಕ್ಕಳ ಉಜ್ವಲ ಭವಿಷ್ಯವೇ ಎನ್ಇಪಿಯ ಗುರಿಯಾಗಿದೆ” ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ಎನ್ಇಪಿ ಕುರಿತು ಮುಸ್ಲಿಂ ಸಮುದಾಯದ ಪ್ರತಿನಿಧಿಗಳೊಂದಿಗೆ ನಡೆದ ಸಂವಾದ ಸಭೆಯಲ್ಲಿ ಅವರು ಈ ಭರವಸೆ ನೀಡಿದರು.

ಸಭೆಯಲ್ಲಿ ಸಮುದಾಯದ ಧರ್ಮಗುರುಗಳು, ನಿವೃತ್ತ ಐಎಎಸ್ ಅಧಿಕಾರಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು, ಪ್ರಾಧ್ಯಾಪಕರು, ಎನ್.ಜಿಒ ಪ್ರತಿನಿಧಿಗಳು, ವಿದ್ಯಾರ್ಥಿ ಪ್ರತಿನಿಧಿಗಳು ಮುಂತಾದವರು ಪಾಲ್ಗೊಂಡಿದ್ದರು.

ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷರಾದ ಪ್ರೊ.ತಿಮ್ಮೇಗೌಡರು ಮೊದಲಿಗೆ ಅಲ್ಪಸಂಖ್ಯಾತ ಪ್ರತಿನಿಧಿಗಳಿಗೆ ಎನ್ಇಪಿ ಕುರಿತು ಸ್ಥೂಲವಾಗಿ ವಿವರಿಸಿದರು. ನಂತರ ಚಾಲನೆ ಪಡೆದ ಸಂವಾದದಲ್ಲಿ ಸಚಿವರು ಎಲ್ಲ ಪ್ರಶ್ನೆ ಮತ್ತು ಅನುಮಾನಗಳಿಗೆ ಕಿವಿಯಾಗಿ, ಸುಮಾರು ಒಂದು ಗಂಟೆ ಕಾಲ ವಸ್ತುನಿಷ್ಠ ಉತ್ತರಗಳನ್ನು ನೀಡಿದರು.

ಆರಂಭದಲ್ಲಿ ಮಾತನಾಡಿದ ನಿವೃತ್ತ ಐಎಎಸ್ ಅಧಿಕಾರಿ ಸನಾವುಲ್ಲಾ, ಎನ್ಇಪಿ-2020 ನೀತಿಯು ಸಂವಿಧಾನವು ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಹೇಳಿರುವ ಆಶಯಗಳಿಗೆ ವಿರುದ್ಧವಾಗಿರುವಂತಿದೆ ಎಂದು ಸಂದೇಹ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, “ನಿಮ್ಮ ಹಿತರಕ್ಷಣೆಗೆಂದು ಸಂವಿಧಾನದಲ್ಲಿರುವ 28, 29 ಮತ್ತು 30ನೇ ವಿಧಿಗಳು ಎಂದಿನಂತೆಯೇ ಇರಲಿವೆ. ಅವುಗಳನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ಎನ್ಇಪಿ ವಿಶೇಷವಾಗಿ, ಶಿಕ್ಷಣದಲ್ಲಿ ಹಿಂದುಳಿದಿರುವ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಮತ್ತು ಜನಾಂಗದವರು ಹಾಗೂ ಬುಡಕಟ್ಟು ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಲು ತುಂಬಾ ಒತ್ತು ಕೊಟ್ಟಿದೆ. ಹೀಗಾಗಿ ಯಾವುದೇ ಆಧಾರರಹಿತ ಅನುಮಾನಗಳನ್ನು ಇಟ್ಟುಕೊಳ್ಳಬೇಡಿ,’’ ಎಂದು ಮನವರಿಕೆ ಮಾಡಿಕೊಟ್ಟರು.

ಇದಾದ ಮೇಲೆ ಕೆಲವರು ಎನ್ಇಪಿಯಿಂದಾಗಿ ಈಗ ತಮಗೆ ಸಿಗುತ್ತಿರುವ ಸ್ಕಾಲರ್ಶಿಪ್, ಮೀಸಲು ಇತ್ಯಾದಿಗಳು ಇನ್ನಿಲ್ಲವಾಗಬಹುದು ಎಂದು ಸಂದೇಹಪಟ್ಟರು. ಆಗ ಸಚಿವರು, “ದೇಶಕ್ಕೆ ಸ್ವಾತಂತ್ರ್ಯ ಬಂದ ಮೇಲೆ ಜಾರಿಗೆ ಬರುತ್ತಿರುವ ಮೂರನೇ ಎನ್ಇಪಿ ಇದಾಗಿದೆ. ಹಿಂದೆ ಎರಡೂ ಸಲ ಎನ್ಇಪಿ ಬಗ್ಗೆ ಒಂದೇ ಒಂದು ಸಂವಾದವೂ ನಡೆದಿಲ್ಲ. ಇದೇ ಮೊದಲ ಬಾರಿಗೆ ಎನ್ಇಪಿ ಜಾರಿ ಕುರಿತು ಎಲ್ಲರೊಂದಿಗೂ ಮುಕ್ತವಾದ ಸಂವಾದಗಳನ್ನು ನಾವು ನಡೆಸುತ್ತಿದ್ದೇವೆ. ಎನ್ಇಪಿ ನಿಮ್ಮ ಸವಲತ್ತುಗಳನ್ನಾಗಲಿ, ಹಕ್ಕುಗಳನ್ನಾಗಲಿ ಕಿತ್ತುಕೊಳ್ಳುವುದಿಲ್ಲ. ಎನ್ಇಪಿ ಮತ್ತು ಉಳಿದ ವಿಷಯಗಳನ್ನು ಅನಗತ್ಯವಾಗಿ ತಳುಕು ಹಾಕಿಕೊಂಡು, ಗೊಂದಲಕ್ಕೆ ಒಳಗಾಗಬೇಡಿ,’’ ಎಂದು ಸ್ಪಷ್ಟಪಡಿಸಿದರು.

“ಶಿಕ್ಷಣ ಕ್ಷೇತ್ರದಲ್ಲಿ ಸಮಸ್ಯೆಗಳಿಲ್ಲ ಎಂದಲ್ಲ. ಆದರೆ, ಅವುಗಳನ್ನು ಬಗೆಹರಿಸಿಕೊಳ್ಳಬೇಕೇ ವಿನಾ ಸುಮ್ಮನೆ ಕೂರಬಾರದು. ನಮ್ಮ ಸರಕಾರವು ಸುಧಾರಣೆಗಳಲ್ಲಿ ನಂಬಿಕೆ ಇಟ್ಟುಕೊಂಡಿದೆ. ಪರಸ್ಪರ ನಂಬಿಕೆಯಿದ್ದರೆ ಮಾತ್ರ ನಾವು ಅಭಿವೃದ್ಧಿಯನ್ನು ಸಾಧಿಸಬಹುದು. ಇದಕ್ಕೆ ಇಂದಿನ ಈ ಸಭೆಯೇ ಸಾಕ್ಷಿ”ಎಂದು ಸಚಿವರು ಹೇಳಿದಾಗ, ಎದುರಿದ್ದವರ ಮುಖದಲ್ಲಿ ನಿರಾಳತೆ ಕಾಣಿಸಿಕೊಂಡಿತು.

ಎನ್ಇಪಿ ಕೇವಲ ಬಿಜೆಪಿಯ ಕಾರ್ಯಕ್ರಮವಲ್ಲ. ಇದಕ್ಕೆ ಅಂತಿಮರೂಪ ಕೊಡುವ ಮುನ್ನ 3 ಲಕ್ಷಕ್ಕೂ ಹೆಚ್ಚು ಸಲಹೆಗಳನ್ನು ಸ್ವೀಕರಿಸಲಾಗಿದೆ. ಹಿಂದಿನ ಕಾಂಗ್ರೆಸ್ ಸರಕಾರ, ಬಳಿಕ ಬಂದ ಸಮ್ಮಿಶ್ರ ಸರಕಾರಗಳು ಕೂಡ ಸಲಹೆ ನೀಡಿವೆ. ಅವುಗಳನ್ನೂ ಇದರಲ್ಲಿ ಅಳವಡಿಸಿಕೊಳ್ಳಲಾಗಿದೆ. ಶಿಕ್ಷಣ ವ್ಯವಸ್ಥೆ ಸರಿಯಾದರೆ ಮಾತ್ರ ಇಡೀ ಸಮಾಜ ಸರಿಯಾಗುತ್ತದೆ. ಎನ್ಇಪಿ ಯನ್ನು ಅತ್ಯಂತ ಪಾರದರ್ಶಕವಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಅವರು ಒತ್ತಿ ಹೇಳಿದರು.

ಲವಲವಿಕೆಯಿಂದ ನಡೆದ ಸಂವಾದಕ್ಕೆ ತೆರೆ ಬಿದ್ದಾಗ, ಅಲ್ಪಸಂಖ್ಯಾತರ ಮೊಗದಲ್ಲಿ ಸಮಾಧಾನ ಮನೆಮಾಡಿತ್ತು; ಎನ್ಇಪಿ ಬಗ್ಗೆ ಅವರಲ್ಲಿದ್ದ ಆತಂಕ ಕರಗಿತ್ತು.

ಸಂವಾದದಲ್ಲಿ ಧರ್ಮಗುರುಗಳಾದ ಮೌಲಾನ ಶಬೀರ್ ಅಹ್ಮದ್, ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ, ನಿವೃತ್ತ ಐಎಎಸ್ ಅಧಿಕಾರಿ ಅಜೀಜುಲ್ಲಾ ಬೇಗ್, ನಿವೃತ್ತ ಡಿಸಿಪಿ ಜಿ.ಎ.ಬಾವಾ, ಪ್ರೊ.ನೂರುದ್ದೀನ್, ಪ್ರೊ.ಶಾಕಿರಾ ಖಾನುಂ, ಪತ್ರಕರ್ತ ಎಂ.ಎ.ಸಿರಾಜ್, ಬೆಂವಿವಿ ಸಿಂಡಿಕೇಟ್ ಮಾಜಿ ಸದಸ್ಯ ಆಘಾ ಸುಲ್ತಾನ್, ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಮುಖ್ಯಸ್ಥ ಶಾವೀಜ್ ಅಹ್ಮದ್ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.