ಸಂಬಂಧಿ ಮನೆಯಲ್ಲಿ ಕಳವು: ಬಂಧನ
Team Udayavani, Oct 13, 2021, 10:10 AM IST
ಬೆಂಗಳೂರು: ಹೆಲ್ಮೆಟ್ ಧರಿಸಿ ಸಂಬಂಧಿಕರ ಮನೆ ಯಲ್ಲೇ ಕಳ್ಳತನ ಮಾಡಿದ್ದ ಗುತ್ತಿಗೆದಾರನನ್ನು ವಿಜಯ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ನಿವಾಸಿ ಶ್ರೀನಿವಾಸ್(46) ಬಂಧಿತ ಗುತ್ತಿಗೆದಾರ. ಆತನಿಂದ ಹತ್ತು ಲಕ್ಷ ರೂ. ಮೌಲ್ಯದ 260 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ನಗರ ದಲ್ಲಿ ಗುತ್ತಿಗೆದಾರನಾಗಿರುವ ಆರೋಪಿ ಸುಮಾರು 25 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಹೀಗಾಗಿ ಸಾಲ ತೀರಿಸಲು ಬಹಳಷ್ಟು ಬ್ಯಾಂಕ್, ಫೈನಾನ್ಸ್ ನಲ್ಲಿ ಸಾಲಕ್ಕೆ ಯತ್ನಿಸಿದರೂ ಹಣ ಸಿಕ್ಕಿರಲಿಲ್ಲ. ಹೀಗಾಗಿ ಸಂಬಂಧಿಯೊಬ್ಬರ ಮನೆಯಲ್ಲಿ ಚಿನ್ನಾಭರಣ ಇಟ್ಟಿರುವ ಮಾಹಿತಿ ಪಡೆದುಕೊಂಡಿದ್ದ ಆರೋಪಿ, ಸೆ.30ರಂದು ಸಂಬಂಧಿ ಮನೆ ಸಮೀಪದಲ್ಲಿ ಅವಿತುಕೊಂಡು ಅವರ ಚಲನವಲನಗಳ ಮೇಲೆ ನಿಗಾವಹಿಸಿದ್ದ. ಅಲ್ಲದೆ, ಅವರ ದಿನಚರಿಗಳ ಬಗ್ಗೆಯೂ ತಿಳಿದುಕೊಂಡಿದ್ದ.
ಇದನ್ನೂ ಓದಿ;- ಪಂಪ್‌ಸೆಟ್‌ಗೆ ಸಮರ್ಪಕ ವಿದ್ಯುತ್ ಪೂರೈಸಿ
ಹೀಗಾಗಿ ಸೆ.30ರಂದು ಸಂಬಂಧಿಯ ಪತ್ನಿ ಸಂಜೆ 4 ಗಂಟೆ ಸುಮಾರಿಗೆ ಯೋಗ ತರಗತಿಗೆ ಹೋಗಲು ಮನೆ ಬೀಗ ಹಾಕಿ ಹೂ ಕುಂಡದಲ್ಲಿ ಇಟ್ಟಿದ್ದರು. ಈ ವಿಚಾರ ಮೊದಲೇ ತಿಳಿದುಕೊಂಡಿದ್ದ ಆರೋಪಿ, ಆ ಮಹಿಳೆ ಹೊರಗಡೆ ಹೋಗುತ್ತಿದ್ದಂತೆ ಹೆಲ್ಮೆಟ್ ಧರಿಸಿ ಕೀ ತೆಗೆದುಕೊಂಡು ಮನೆಯೊಳಗೆ ಹೋಗಿ ಬೀರುವಿನಲ್ಲಿದ್ದ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದ. ಸಂಜೆ 5 ಗಂಟೆಗೆ ಮಹಿಳೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಸಿಸಿ ಕ್ಯಾಮೆರಾ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.