ಶಿವಮೊಗ್ಗ ಸೇರಿದಂತೆ 3 ರಾಜ್ಯಗಳ 20ಕ್ಕೂ ಹೆಚ್ಚು ಕಡೆ NIA ದಾಳಿ
Team Udayavani, Oct 13, 2021, 11:02 AM IST
ಶಿವಮೊಗ್ಗ : ಶಿವಮೊಗ್ಗ ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳ 20ಕ್ಕೂ ಹೆಚ್ಚು ಕಡೆ ಇವತ್ತು (ಬುಧವಾರ) ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಶೃಂಗೇರಿ, ಕಾರ್ಕಳಕ್ಕೆ ಹೊಂದಿಕೊಂಡಂತೆ ಇರುವ ಶಿವಮೊಗ್ಗದ ಕೆಲವು ಕಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ನಕ್ಸಲ್ ಚಳವಳಿ ಸಂಬಂಧ ತನಿಖೆ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ರಾಜ್ಯದ ಮೂರು ಜಿಲ್ಲೆಗಳಲ್ಲಿ ಪರಿಶೀಲನೆ
ಕೇರಳ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಶಿವಮೊಗ, ಚಿಕ್ಕಮಗಳೂರು, ಉಡುಪಿ ಐದು ಕಡೆಯಲ್ಲಿ ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೈಲೆಂಟ್ ದಾಳಿ, ಪರಿಶೀಲನೆ
ಎನ್ಐಎ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ ದಾಳಿ ಮಾಡಿದ್ದಾರೆ. ತಮಿಳುನಾಡಿನ ಕೊಯಮತ್ತೂರು, ಥೇಣಿ, ರಾಮನಾಥಪುರಂ, ಸೇಲಂ, ಕನ್ಯಾಕುಮಾರಿ, ಕೃಷ್ಣಗಿರಿ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಇನ್ನು, ಕೇರಳದ ವಯನಾಡ್, ತ್ರಿಶೂರ್ ಮತ್ತು ಕಣ್ಣೂರು ಜಿಲ್ಲೆಗಳಲ್ಲೂ ಪರಿಶೀಲಿಸಿದ್ದಾರೆ.
ಏನಿದು ಪ್ರಕರಣ? ಪರಿಶೀಲನೆಗೇನು ಕಾರಣ?
ನಕ್ಸಲ್ (ಸಿಪಿಐ ಮಾವೋವಾದಿ) ಚಳವಳಿಗೆ ಶಕ್ತಿ ತುಂಬಲು 2016ರ ಸೆಪ್ಟೆಂಬರ್ ಕೊನೆಯ ವಾರದಲ್ಲಿ ತರಬೇತಿ ಕ್ಯಾಂಪ್ ನಡೆಸಲು ನಿರ್ಧರಿಸಲಾಗಿತ್ತು. ಕೇರಳ ರಾಜ್ಯದ ಮಲ್ಲಾಪುರಂ ಜಿಲ್ಲೆಯ ಎಡಕ್ಕರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ತರಬೇತಿ ಶಿಬಿರ ಸ್ಥಳ ಗುರುತಿಸಲಾಗಿತ್ತು. ಶಿಬಿರದಲ್ಲಿ ಧ್ವಜಾರೋಹಣ ನೆರವೇರಿಸಿ, ಶಸ್ತ್ರಾಸ್ತ್ರ ಬಳಕೆಯ ತರಬೇತಿ ನೀಡಲು ಚಿಂತಿಸಲಾಗಿತ್ತು. ಈ ಸಂಬಂಧ 2017ರಲ್ಲಿ ಕೇರಳದ ಎಡಕ್ಕರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐವರನ್ನು ಬಂಧಿಸಲಾಗಿತ್ತು.
ಮರು ಎಫ್ ಐ ಆರ್ ದಾಖಲಿಸಿದ ಎನ್ಐಎ
ಪ್ರಕರಣದ ತನಿಖೆಯನ್ನು ವಹಿಸಿಕೊಂಡ ಎನ್ಐಎ ಅಧಿಕಾರಿಗಳು ಮರು ಎಫ್ಐಆರ್ ದಾಖಲು ಮಾಡಿಕೊಂಡರು. ಪ್ರಕರಣದಲ್ಲಿ ಇನ್ನೂ 20 ಮಂದಿ ಇರುವುದು ಬೆಳಕಿಗೆ ಬಂದಿತ್ತು. ಕರ್ನಾಟಕ ನಕ್ಸಲ್ ಚಳವಳಿಯ ಮುಂಚೂಣಿ ನಾಯಕರಾದ ಬಿ.ಜಿ.ಕೃಷ್ಣಮೂರ್ತಿ, ವಿಕ್ರಂ ಗೌಡ ಅವರ ಹೆಸರುಗಳು ಈ ಪಟ್ಟಿಯಲ್ಲಿತ್ತು. ಹಾಗಾಗಿ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಜಿಲ್ಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದ ಎನ್ಐಎ ಅಧಿಕಾರಿಗಳು ತೀರ್ಥಹಳ್ಳಿ, ಹೊಸನಗರದ ಕೆಲವು ಕಡೆ ಭೇಟಿ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.