ಕಸದ ತೊಟ್ಟಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ
Team Udayavani, Oct 13, 2021, 12:12 PM IST
ಚಿಂತಾಮಣಿ: ನಗರದ ವಾರ್ಡ್ ನಂ 30ರ ಅಗ್ರಹಾರದ ತಿಮ್ಮನಕುಂಟೆಯ ಕಸದಲ್ಲಿ ನವಜಾತ ಹೆಣ್ಣುಮಗುವನ್ನು ಬಿಸಾಕಿರುವುದು ಮಂಗಳವಾರ ಕಂಡು ಬಂದಿದೆ.
ಕಸದಲ್ಲಿ ನವಜಾತ ಹೆಣ್ಣುಮಗುವನ್ನು ಕಂಡ ಸಾರ್ವಜನಿಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಮಗುವನ್ನು ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಪರೀಕ್ಷಿಸಿದಾಗ ಮಗು ಮೃತಪಟ್ಟಿರುವುದು ಗೊತ್ತಾಗಿದೆ.
6 ತಿಂಗಳ ಅವಧಿಪೂರ್ವ ಶಿಶುವಾಗಿದ್ದು ಮಂಗಳವಾರ ಮುಂಜಾನೆ ಕಸದ ತೊಟ್ಟಿಯಲ್ಲಿ ಬಿಸಾಡಿರಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆ ಮಾಡಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಕ್ರಮಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.