ಮೊದಲ ಪತ್ನಿ ವಿಚ್ಚೇದನವಿಲ್ಲದೆ 2ನೇ ಪತ್ನಿಗೆ ಆಸ್ತಿಯಿಲ್ಲ

Team Udayavani, Oct 13, 2021, 6:08 PM IST

ಮೊದಲ ಪತ್ನಿ ವಿಚ್ಚೇದನವಿಲ್ಲದೆ 2ನೇ ಪತ್ನಿಗೆ ಆಸ್ತಿಯಿಲ್ಲ

ಆಲೂರು: ಮೊದಲ ಪತ್ನಿ ಬದುಕಿದ್ದಾಗ ಅವಳಿಂದ ವಿಚ್ಛೇಧನ ಪಡೆಯದೆ ಎರಡನೆ ಮದುವೆಯಾದರೆ, ಎರಡನೆ ಪತ್ನಿಗೆ ಆಸ್ತಿಯಲ್ಲಿ ಹಕ್ಕು ಸಿಗುವುದಿಲ್ಲ ಎಂದು ಜೆಎಂಎಫ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಡಿ. ಎಸ್‌. ಪ್ರತಿಭಾ ತಿಳಿಸಿದರು. ಪಾಳ್ಯ ಹೋಬಳಿ ನಾಕಲಗೂಡು ಗ್ರಾಮದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾ. ವಕೀಲರ ಸಂಘ, ಕಣತೂರು ಗ್ರಾಪಂ ಮತ್ತು ತಾಲೂಕಿನ ಎಲ್ಲ ಇಲಾಖೆಗಳ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ, ಸ್ವಾತಂತ್ರ್ಯದ ಅಮೃತ ಮಹೊತ್ಸವದ ಅಂಗವಾಗಿ, ರಾಷ್ಟ್ರೀಯತೆ ಜಾಗೃತಿ ಮತ್ತು ಅಪರಿಮಿತ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಜನರಿಗೆ ಕಾನೂನು ಬಗ್ಗೆ ಅರಿವಿಲ್ಲದೆ ಗೊತ್ತಿದ್ದೋ, ಗೊತ್ತಿಲ್ಲದೆಯೋ ವಿಶೇಷವಾಗಿ ಆಸ್ತಿಗೆ ಸಂಬಂಧಿಸಿದ ಪ್ರಕರಣ ಗಳು ನ್ಯಾಯಾಲಯದಲ್ಲಿ ದಾಖಲಾಗುತ್ತಿವೆ. ಇಂತಹ ಪ್ರಕರಣ ಗಳನ್ನು ಶೀಘ್ರ ಇತ್ಯರ್ಥ ಮಾಡಲೆಂದು ತಿಂಗಳು, ಎರಡು ತಿಂಗಳಿಗೊಮ್ಮೆ ನ್ಯಾಯಾಲಯದಲ್ಲಿ ಜನತಾ ನ್ಯಾಯಾಲಯ ನಡೆಯುತ್ತದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ನ್ಯಾಯಾಧೀಶರ ಸಮ್ಮುಖದಲ್ಲಿ ಹಳ್ಳಿಗಳಿಗೆ ಹೋಗಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ;- ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣ: ಆಶಿಶ್ ಮಿಶ್ರಾ ಜಾಮೀನು ಅರ್ಜಿ ವಜಾ

ವಕೀಲ ಕೆ. ಜಿ. ನಾಗರಾಜು ರವರು ಮಾತನಾಡಿ, ಕೆಲ ದಶಕ ಗಳ ಹಿಂದೆ ಪ್ರತಿ ಗ್ರಾಮಗಳಲ್ಲಿ ಪಂಚಾಯಿತಿ ತೀರ್ಮಾನಕ್ಕೆ ಬಲವಿತ್ತು. ನ್ಯಾಯಾಲಯದಲ್ಲೂ ಇದೆ ತೀರ್ಮಾನವಾಗುವುದ ರಿಂದ, ಅಂತಿಮವಾಗಿ ಪಂಚಾಯಿತಿ ತೀರ್ಮಾನಕ್ಕೆ ತಲೆ ಬಾಗ ಬೇಕಾಗುತ್ತದೆ. ಜನತಾ ನ್ಯಾಯಾಲಯವನ್ನು ಸದ್ಬಳಕೆ ಮಾಡ ಕೊಂಡರೆ ಸಮಯ, ಹಣ ಉಳಿಯುವುದರೊಂದಿಗೆ ಕುಟುಂಬದಲ್ಲಿ ಶಾಂತಿ ನೆಲೆಸುತ್ತದೆ ಎಂದು ಹೇಳಿದರು.

ತಾಪಂ ಮಾಜಿ ಸದಸ್ಯ ನಟರಾಜ್‌ ಅಧ್ಯಕ್ಷತೆ ವಹಿಸಿದ್ದರು. ತಾ. ವಕೀಲರ ಸಂಘದ ಅಧ್ಯಕ್ಷ ಕೆ. ಎಸ್‌. ರವಿಶಂಕರ್‌, ಸಹಾಯಕ ಸರ್ಕಾರಿ ಅಭಿಯೋಜಕಿ ಜಯಶ್ರೀ, ವಕೀಲರಾದ ಆರ್‌. ಬಿ. ಸುರೇಶ್‌, ಎಚ್‌. ಡಿ. ಮಧು, ಗ್ರಾಪಂ ಸದಸ್ಯೆ ಪದ್ಮಜಗದೀಶ್‌, ಅರಣ್ಯ ಸಮಿತಿ ಅಧ್ಯಕ್ಷ ಚಂದ್ರಶೇಖರ್‌, ಪಿಡಿಒ ಪುರುಷೋತ್ತಮ, ಮೋಹನ್‌ ಇತರರು ಹಾಜರಿದ್ದರು.

ಸೂಕ್ತ ನಿರ್ಧಾರದಿಂದ ವಿವಾದ ತಡೆ ಸಾಧ್ಯ ಪತಿ ಬದುಕಿದ್ದಾಗ ಪಿತ್ರಾರ್ಜಿತ ಪತ್ನಿಗೆ ಆಸ್ತಿಯಲ್ಲಿ ಹಕ್ಕು ಬರುವುದಿಲ್ಲ. ಹಕ್ಕುದಾರ ಮರಣ ಹೊಂದಿದ ನಂತರ ಅವನ ಪತ್ನಿ ಜತೆಗೆ ಮಕ್ಕಳನ್ನೂ ಸೇರಿಸಿ ಖಾತೆ ಮಾಡಿದರೆ ಮುಂಬರುವ ವಿವಾದಗಳನ್ನು ತಡೆಗಟ್ಟಬಹುದು. ಪಿತ್ರಾರ್ಜಿತ ಆಸ್ತಿಗೆ ಎಲ್ಲರೂ ಹಕ್ಕುದಾರರಾಗಿರುತ್ತಾರೆ. ಸ್ವಯಾರ್ಜಿತ ಆಸ್ತಿಗೆ ಕೊಂಡವರು ಮಾತ್ರ ಹಕ್ಕುದಾರರಾಗಿ ರುತ್ತಾರೆ ಎಂದು ವಕೀಲ ಬಿ. ಡಿ ಸಂದೀಪ್‌ ವಿವರಿಸಿದರು.

ಟಾಪ್ ನ್ಯೂಸ್

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

Hasanamabe

Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್‌ ರದ್ದು

HD-Revanna

Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್‌.ಡಿ.ರೇವಣ್ಣ ಕಿಡಿ

BYV-Hasan

Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್‌: ಬಿ.ವೈ.ವಿಜಯೇಂದ್ರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.