ಅ.20ರಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಸಚಿವ ಬಿ. ಶ್ರೀರಾಮುಲು
Team Udayavani, Oct 13, 2021, 7:28 PM IST
ಬೆಂಗಳೂರು: ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅ.20ರಂದು ಬೆಂಗಳೂರಿನಲ್ಲಿ ಆಚರಿಸಲಾಗುವುದು ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಬಿ. ಶ್ರೀರಾಮುಲು ಅವರು ತಿಳಿಸಿದರು.
ವಿಧಾನಸೌಧದಲ್ಲಿಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಅಂದು ಬೆಳಿಗ್ಗೆ 10.30ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಿದ್ದಾರೆ. ಈ ವರ್ಷ ಐವರು ಸಾಧಕರಿಗೆ ಹಾಗೂ ಕಳೆದ ಸಾಲಿಗೆ ಐವರು ಸಾಧಕರಿಗೆ ಪ್ರಶಸ್ತಿ ಯನ್ನು ನೀಡಿ ಗೌರವಿಸಲಾಗುವುದು. ಈಗಾಗಲೇ ಪ್ರಶಸ್ತಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು,ನಿಯಮಾನುಸಾರ ಅರ್ಹ ಸಾಧಕರನ್ನು ಸಮಿತಿಯು ಆಯ್ಕೆ ಮಾಡಲಿದೆ. ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನ ನಂದಪುರಿ ಮಹಾಸ್ಬಾಮಿಗಳು ದಿವ್ಯಸಾನಿಧ್ಯವಹಿಸಲಿದ್ದಾರೆ. ಅದಕ್ಕೂ ಮುನ್ನ ಶಾಸಕರ ಭವನದ ಮುಂಭಾಗದಲ್ಲಿರುವ ಮಹರ್ಷಿ ವಾಲ್ಮೀಕಿ ತಪೋವನದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಲಾಗುವುದು. ಜಯಂತಿಯನ್ನು ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಮಾಡಲಾಗುವುದು ಎಂದು ತಿಳಿಸಿದರು.
ಪರಿಶಿಷ್ಟ ಪಂಗಡಗಳ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದ್ದು, ಪರಿಶಿಷ್ಟ ವರ್ಗಗಳ ಅಭಿವೃದ್ಧಿಯ ಮೇಲುಸ್ತುವಾರಿಗಾಗಿ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಎನ್. ನಾಗಾಂಬಿಕ ದೇವಿ ಮತ್ತು ನಿರ್ದೇಶಕರಾದ ಪಿ.ಎಸ್. ಕಾಂತರಾಜು ಅವರು ಕಾರ್ಯಕ್ರಮದ ರೂಪುರೇಷೆ ಕುರಿತು ವಿವರಿಸಿದರು.
ಸಭೆಯಲ್ಲಿ ಸಂಸದ ರಾಜ ಅಮರೇಶ ನಾಯಕ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರಪ್ಪ, ಶಾಸಕ ಇ.ತುಕಾರಾಮ್, ರಘುಮೂರ್ತಿ, ವಿಧಾನಪರಿಷತ್ ಸದಸ್ಯರಾದ ಶಾಂತರಾಂ ಬುದ್ನಸಿದ್ದಿ , ಸಮುದಾಯದ ವಿವಿಧ ಮುಖಂಡರು ಸಲಹೆಗಳನ್ನು ನೀಡಿದರು.
ಸಭೆಯಲ್ಲಿ ಉಪಕಾರ್ಯದರ್ಶಿ ಶಂಭುಲಿಂಗಯ್ಯ, ಸಚಿವರ ಆಪ್ತಕಾರ್ಯದರ್ಶಿ ರಾಘವೇಂದ್ರ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕವಿತಾ ವಾರಂಗಲ್, ಪ್ರಧಾನ ವ್ಯವಸ್ಥಾಪಕರಾದ ರಾಜು, ಉಪನಿರ್ದೇಶಕರಾದ ರಾಜಕುಮಾರ್, ರಾಜಶೇಖರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್ ಕಸ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.