ಪ್ರಭಾರ ಯುವಸಬಲೀಕರಣ,ಕ್ರೀಡಾಧಿಕಾರಿ ಹುದ್ದೆಯಿಂದ ದೈಹಿಕ ಶಿಕ್ಷಣ ಶಿಕ್ಷಕರ ನಿಯೋಜನೆ ರದ್ದು
Team Udayavani, Oct 14, 2021, 10:27 AM IST
ದಕ್ಷಿಣ ಕನ್ನಡ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ದೈಹಿಕ ಶಿಕ್ಷಕರನ್ನು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಅಧಿಕಾರಿಗಳಾಗಿ ಹೆಚ್ಚುವರಿ ಪ್ರಭಾರದಲ್ಲಿರಿಸಿರುವ ಆದೇಶಗಳನ್ನು ಶಿಕ್ಷಣ ಇಲಾಖೆ ರದ್ದುಗೊಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಹಾಗೂ ಸರ್ಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಕರನ್ನು ತಾಲ್ಲೂಕು ಹಂತದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲು ತಾತ್ಕಾಲಿಕವಾಗಿ ಹೆಚ್ಚುವರಿ ಪ್ರಭಾರದಲ್ಲಿರಿಸಿ ನಿಯೋಜನೆ ಮಾಡಲಾಗಿತ್ತು.
ಗಣೇಶ್ ಪಿ, ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1,ಸರ್ಕಾರಿ ಪ್ರೌಢಶಾಲೆ, ಏನೆಕಲ್ಲು ಇವರನ್ನು ಕಡಬ ತಾಲ್ಲೂಕು ಯುವಸಬಲೀಕರಣ ಮತ್ತು ಕ್ರೀಡಾಧಿಕಾರಿಯಾಗಿ,ರಾಮಕೃಷ್ಣ ಎ. ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1, ಸರ್ಕಾರಿ ಪ್ರೌಢಶಾಲೆ, ಉಪ್ಪಳಿಗೆ ಇವರನ್ನು ಪುತ್ತೂರು ತಾಲ್ಲೂಕು ಯುವಸಬಲೀಕರಣ ಮತ್ತು ಕ್ರೀಡಾಧಿಕಾರಿಯಾಗಿ, ಶ್ರೀ ವೆಂಕಟರಮಣ.ಕೆ.ಎಸ್., ಪದವೀಧರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1, ಸರ್ಕಾರಿ ಪ್ರೌಢಶಾಲೆ, ದುಗ್ಗಲಡ್ಕ ಇವರನ್ನು ಸುಳ್ಯ ತಾಲ್ಲೂಕು ಯುವಸಬಲೀಕರಣ ಮತ್ತು ಕ್ರೀಡಾಧಿಕಾರಿಯಾಗಿ,ನವೀನ್, ಪಿ.ಎಸ್, ದೈಹಿಕ ಶಿಕ್ಷಣ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಿ. ಮೂಡ ಇವರನ್ನು ಬಂಟ್ವಾಳ ತಾಲ್ಲೂಕು ಯುವಸಬಲೀಕರಣ ಮತ್ತು ಕ್ರೀಡಾಧಿಕಾರಿಯಾಗಿ,ಪ್ರಭಾಕರ, ದೈಹಿಕ ಶಿಕ್ಷಣ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ನಾರಾವಿ ಇವರನ್ನು ಬೆಳ್ತಂಗಡಿ ತಾಲ್ಲೂಕು ಯುವಸಬಲೀಕರಣ ಮತ್ತು ಕ್ರೀಡಾಧಿಕಾರಿಯಾಗಿ, ವಿನೋದ್ ಕುಮಾರ್, ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1, ಸರ್ಕಾರಿ ಮಂಗಳೂರು ಉತ್ತರ ವಲಯ ಪ್ರೌಢಶಾಲೆ, ಸೂರಿಂಜೆ ಇವರನ್ನು ಮಂಗಳೂರು ತಾಲೂಕು ಯುವಸಬಲೀಕರಣ ಮತ್ತು ಕ್ರೀಡಾಧಿಕಾರಿಯಾಗಿ,ಶಿವಾನಂದ ಕಾಯ್ಕಿಣಿ, ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1, ಸರ್ಕಾರಿ ಪ್ರೌಢಶಾಲೆ, ನೆಲ್ಲಕಾಡುಇವರನ್ನು ಮೂಡಬಿದ್ರೆ ತಾಲ್ಲೂಕು ಯುವಸಬಲೀಕರಣ ಮತ್ತು ಕ್ರೀಡಾಧಿಕಾರಿಯಾಗಿ ನಿಯೋಜಿಸಲಾಗಿತ್ತು.
ದೈಹಿಕ ಶಿಕ್ಷಕರ ಸೇವೆಯು ಶಾಲೆಗಳಲ್ಲಿ ಅತ್ಯಂತ ಅವಶ್ಯಕವಾಗಿದ್ದು, ಪ್ರಸ್ತುತ ಎಲ್ಲಾ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಹುದ್ದೆಗಳ ಇಲ್ಲದೇ ಇರುವುದರಿಂದ, ಶಾಲೆಗಳಲ್ಲಿ ದೈಹಿಕ ಶಿಕ್ಷಕರ ತೀವ್ರ ಕೊರತೆ ಇದ್ದು, ಈಗಾಗಲೇ ಶಾಲೆಗಳೂ ಸಹ ಪುನರಾರಂಭಗೊಂಡಿದ್ದು, ವಿದ್ಯಾರ್ಥಿಗಳ ಕ್ರೀಡಾ ಕೊರತೆ ಇರುತ್ತದೆ. ಹಾಗೂ ದೈಹಿಕ ಚಟುವಟಿಕೆಗಳಿಗಾಗಿ ದೈಹಿಕ ಶಿಕ್ಷಕರು ಪೂರ್ಣಕಾಲಿಕವಾಗಿ ಶಾಲೆಯಲ್ಲಿಯೇ ಕರ್ತವ್ಯನಿರ್ವಹಿಸುವುದು ಅತ್ಯಂತ ಆವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರನ್ನು ಇತರೆ ಕಾರ್ಯಗಳಿಗೆ ನಿಯೋಜಿಸುವುದು ಸಾಧ್ಯವಾಗುವುದಿಲ್ಲ. ಅಲ್ಲದೇ ಶಿಕ್ಷಕರನ್ನು ಇತರೆ ಕಾರ್ಯಗಳಿಗೆ ನಿಯೋಜಿಸಿದಲ್ಲಿ, ಇಲಾಖೆಗೆ ಹೆಚ್ಚುವರಿ ಆರ್ಥಿಕ ಹೊರೆ ಉಂಟಾಗುತ್ತದೆ. ಮುಂದುವರೆದು, ಶಿಕ್ಷಕರನ್ನು ಬೋಧನಾ ಕಾರ್ಯ ಹೊರತುಪಡಿಸಿ ಅನ್ಯ ಕಾರ್ಯಗಳಿಗೆ ನಿಯೋಜಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ.
ಈ ಅಂಶಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನಿಯೋಜನೆಗಳನ್ನು ರದ್ದುಪಡಿಸಿ ನಿಯೋಜಿತ ದೈಹಿಕ ಶಿಕ್ಷಕರು ಮೂಲ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಲು ಅಗತ್ಯ ಕ್ರಮ ವಹಿಸಲು ಶಿಕ್ಷಣ ಇಲಾಖೆಯ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.