ಜೆಡಿಎಸ್ ಸರ್ಕಾರ ಬಂದರೆ ಬೇಡಿಕೆ ಈಡೇರಿಕೆ: ದೇವೇಗೌಡ
Team Udayavani, Oct 14, 2021, 12:47 PM IST
ಇಂಡಿ: ಕಳೆದ ನಲವತ್ನಾಲ್ಕು ದಿನದಿಂದ ಹೋರಾಟ ನಡೆಸಿದರೂ ಸರ್ಕಾರ ಸ್ಪಂದಿಸದಿರುವುದು ದುರ್ದೈವದ ಸಂಗತಿ. ಈ ಸರ್ಕಾರಕ್ಕೆ ರೈತರ ಋಣ ತೀರಿಸುವ ಭಾಗ್ಯವಿಲ್ಲ. ಕುಮಾರಸ್ವಾಮಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗ ನಿಮ್ಮ ಎಲ್ಲ ಬೇಡಿಕೆ ಈಡೀರಿಸುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.
ತಾಲೂಕು ಸಮಗ್ರ ನೀರಾವರಿಗೆ ಆಗ್ರಹಿಸಿ ಮಿನಿ ವಿಧಾನಸೌಧ ಮುಂಭಾಗ ಜೆಡಿಎಸ್ ಹಮ್ಮಿಕೊಂಡಿದ್ದ ಧರಣಿ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಮಾತನಾಡಿದ ಅವರು, ನಾನು ರಾಜಕೀಯ ಮಾಡಲು ಇಲ್ಲಿಗೆ ಬಂದಿಲ್ಲ. ನಾನೂ ರೈತನ ಮಗನಾಗಿದ್ದು ನಿಮಗೆ ಸ್ಪೂರ್ತಿ ತುಂಬಲು ಬಂದಿದ್ದೇನೆ ಎಂದರು.
ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದಾಗ ರಾಜ್ಯದ ರೈತರ 25 ಲಕ್ಷ ಕೋಟಿ ರೂ. ಮನ್ನಾ ಮಾಡಿದ್ದಾರೆ. ನಾವು ಯಾವಾಗಲೂ ರೈತರ ಪರವಾಗಿದ್ದೇವೆ. ಇಂಡಿ ಶಾಂತೇಶ್ವರ ದೇವತೆ ಮೇಲೆ ಪ್ರಮಾಣ ಮಾಡುವೆ, ಮುಂದೆ ಕುಮಾರಸ್ವಾಮಿ ಅಧಿಕಾರ ಹಿಡಿದರೆ ನಿಮ್ಮ ನೀರಾವರಿ ಯೋಜನೆಯ ಎಲ್ಲ ಬೇಡಿಕೆಗಳನ್ನು ಈಡೇರಿಸುವೆ ಎಂದು ಭರವೆ ನೀಡಿದರು. ನನ್ನನ್ನು ಮತ್ತು ಜೆಡಿಎಸ್ ಪಕ್ಷವನ್ನು ಮುಗಿಸಲು ದೇವೇಗೌಡರು ವೀರಶೈವ ಲಿಂಗಾಯತರ ವಿರೋಧಿಗಳು, ಉತ್ತರ ಕರ್ನಾಟಕದ ವಿರೋಧಿಗಳು ಎಂದು ಬಿಂಬಿಸಿದ್ದಾರೆ. ಆದರೆ ನಾನು ಯಾರ ವಿರೋಧಿ ಯೂ ಇಲ್ಲ. ನಾನು ಸಮಸ್ತ ಜನಾಂಗವನ್ನು ಮತ್ತು ಇಡಿ ದೇಶವನ್ನು ಒಂದೇ ರೀತಿಯಾಗಿ ಕಾಣುತ್ತೇನೆ ಎಂದರು.
ಬಿ.ಡಿ. ಪಾಟೀಲರ ಹಿಂದೆ ನಾವಿದ್ದೇವೆ. ಮುಂದಿನ ಚುನಾವಣೆಯವರೆಗೂ ನಾನು ಸಾಯಲ್ಲ, ಇರುತ್ತೇನೆ. ನಿಮ್ಮ ಭಾಗಕ್ಕೆ ಅರ್ಧದಷ್ಟು ನೀರಾವರಿ ಮಾಡಿದ್ದೇನೆ. ಬಿ.ಡಿ. ಪಾಟೀಲ ಪರ ಮತಯಾಚನೆಗೆ ಬಂದು ಮತಯಾಚನೆ ಮಾಡಿತ್ತೇನೆ. ಇಂತಹ ಮುಗ್ದ ಮತ್ತು ನಿಲ್ಕಷ್ಮಷ ವ್ಯಕ್ತಿಗೆ ಆರಿಸಿದರೆ ಕ್ಷೇತ್ರದ ಅಭಿವೃದ್ಧಿಯಾಗುತ್ತದೆ ಎಂದರು.
ಇದನ್ನೂ ಓದಿ : ನೀತಿ ಸಂಹಿತೆ ಉಲ್ಲಂಘನೆ ಸುದ್ದಿ ಪ್ರಸಾರ ಬಗ್ಗೆ ನಿಗಾಕ್ಕೆ ಸೂಚನೆ
ಬೀದರ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಕಾಶಂಪುರ, ನಾಗಠಾಣ ಶಾಸಕ ದೇವಾನಂದ ಚವ್ಹಾಣ, ಮುಖಂಡರಾದ ರಾಜು ಕೆಂಭಾಗಿ, ಮಲ್ಲಿಕಾರ್ಜುನ ಯಂಡಿಗೇರಿ, ಬಿ.ಜಿ. ಪಾಟೀಲ, ಮೋಹನ ಮೇಟಿ ಮಾತನಾಡಿದರು.
ಜೆಡಿಎಸ್ ತಾಲೂಕಾಧ್ಯಕ್ಷ, ಹೋರಾಟದ ಮುಖಂಡ ಬಿ.ಡಿ. ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಹುಲಜಂತಿಯ ಮಾಳಿಂಗರಾಯ ಮಹಾರಾಜರು ಆಶೀರ್ವಚನ ನೀಡಿದರು. ರಾಜುಗೌಡ ಪಾಟೀಲ, ಮಂಜುನಾಥ ಕಾಮಗೊಂಡ, ಮಂಗಳಾದೇವಿ ಬಿರಾದಾರ, ವಿಜಯಕುಮಾರ ಭೋಸಲೆ, ಸಿದ್ದು ಡಂಗಾ, ಮಹಿಬೂಬ ಬೇನೂರ, ಶ್ರೀಶೈಲಗೌಡ ಪಾಟೀಲ, ಬಸವರಾಜ ಹಂಜಗಿ, ರಾಜುಗೌಡ ಪಾಟೀಲ, ಭೀಮಶಿ ಕಲಾದಗಿ, ಅಯೂಬ ನಾಟೀಕಾರ, ಗುರಣ್ಣಗೌಡ ಪಾಟೀಲ, ರಾಮು ರಾಠೊಡ, ಭಾರತಿ ವಾಲಿ, ಮರೆಪ್ಪ ಗಿರಿಣಿವಡ್ಡರ, ನಾನಾಗೌಡ ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.