ಪರಿಹಾರ ವಿತರಣೆಗೆ ನೀಡಿ ಮೊದಲ ಆದ್ಯತೆ
ಜಿಲ್ಲೆಯ ಅಭಿವೃದ್ಧಿ ಚಟುವಟಿಕೆಗಳ ಪರಿಶೀಲನಾ ಸಭೆ | ನೊಂದವರ ಕಷ್ಟಕ್ಕೆ ಸ್ಪಂದಿಸಲು ರವಿಕುಮಾರ ಸೂಚನೆ
Team Udayavani, Oct 14, 2021, 8:08 PM IST
ಧಾರವಾಡ: ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳು, ಬೆಳೆ ಹಾಗೂ ಕೋವಿಡ್‌ನಿಂದ ಮೃತಪಟ್ಟವರ ವಾರಸುದಾರರಿಗೆ ಪರಿಹಾರ ವಿತರಣೆ ಕಾರ್ಯಕ್ಕೆ ಮೊದಲ ಆದ್ಯತೆ ನೀಡಿ ನೊಂದವರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಆಯುಕ್ತ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|ರವಿಕುಮಾರ ಸುರಪುರ ಹೇಳಿದರು.
ಜಿಪಂ ಸಭಾಂಗಣದಲ್ಲಿ ಜಿಲ್ಲೆಯ ಅಭಿವೃದ್ಧಿ ಚಟುವಟಿಕೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಸದರು ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿ ಧಿಯಡಿ ಕೈಗೊಳ್ಳುವ ಕಾಮಗಾರಿಗಳನ್ನು ವಿಳಂಬ ಮಾಡಬಾರದು. ಆರೋಗ್ಯ ನಂದನ ಕಾರ್ಯಕ್ರಮದ ಮೂಲಕ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ನಿರಂತರವಾಗಿ ನಡೆಯಬೇಕು. ಹಿಂಗಾರು ಹಂಗಾಮಿನ ಬೀಜ, ರಸಗೊಬ್ಬರ ವಿತರಣೆ ಸಮರ್ಪಕವಾಗಿ ಜರುಗಬೇಕು. ವಿವಿಧ ಇಲಾಖೆ ಹಾಸ್ಟೆಲ್‌ಗಳಿಗೆ ಹಾಪ್‌ಕಾಮ್ಸ್ ನಿಗದಿ ಪಡಿಸಿದ ದರಗಳಲ್ಲಿ ನೇರವಾಗಿ ರೈತರಿಂದ ತರಕಾರಿ-ಹಣ್ಣುಗಳನ್ನು ಖರೀದಿಸಿ ಪೂರೈಸಬಹುದು. ಜಿಪಂ ಜಲಶಕ್ತಿ ಅಭಿಯಾನದಡಿ ಹಾಸ್ಟೆಲ್ ಕಟ್ಟಡಗಳಿಗೆ ಮಳೆನೀರು ಕೊಯ್ಲು ಸೌಲಭ್ಯ ಕಲ್ಪಿಸಬೇಕು. ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಮ್ಯಾನ್ಯುವಲ್ ಸ್ಕಾ ವೆಂಜಿಂಗ್ ನಿಷೇಧ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜೆಟ್ಟಿಂಗ್ ಅಥವಾ ಸಕ್ಕಿಂಗ್ ಯಂತ್ರಗಳನ್ನು ಬಳಸಬೇಕು ಎಂದು ಸೂಚಿಸಿದರು.
ಡಿಸಿ ನಿತೇಶ ಪಾಟೀಲ ಮಾತನಾಡಿ, ಸಂಸದರು ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿ ಧಿಯಡಿ ಕೈಗೊಂಡಿರುವ ಕಾಮಗಾರಿಗಳು ವಿಳಂಬವಾದರೆ ಸಂಬಂಧಿಸಿದ ಏಜೆನ್ಸಿಗಳು ಸಕಾರಣಗಳೊಂದಿಗೆ ಜಿಲ್ಲಾಡಳಿತ ಹಾಗೂ ಸಂಬಂ ಧಿಸಿದ ಚುನಾಯಿತ ಪ್ರತಿನಿಧಿಗಳಿಗೆ ಪತ್ರ ಬರೆಯಬೇಕು. ಅದನ್ನು ಪರಿಶೀಲಿಸಿ ಪರ್ಯಾಯ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದರು. ಜಿಪಂ ಸಿಇಒ ಡಾ|ಬಿ. ಸುಶೀಲಾ, ಹು-ಧಾ ಪಾಲಿಕೆ ಆಯುಕ್ತ ಡಾ|ಸುರೇಶ ಇಟ್ನಾಳ, ಪ್ರೊಬೆಷನರಿ ಐಎಎಸ್ ಅಧಿಕಾರಿ ಮಾಧವ ಗಿತ್ತೆ, ಅಪರ ಜಿಲ್ಲಾ ಧಿಕಾರಿ ಶಿವಾನಂದ ಕರಾಳೆ, ಎಸಿ ಡಾ|ಬಿ.ಗೋಪಾಲಕೃಷ್ಣ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.