![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Oct 15, 2021, 8:58 AM IST
ಕೊಪ್ಪಳ: ನಗರದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ಆಗಿ ಕಂಪ್ಯೂಟರ್ ಸೇರಿ ವಿವಿಧ ಕೆಲವು ದಾಖಲೆ ಸುಟ್ಟಿದ್ದು ಇದರಿಂದ ವಸತಿ ನಿಲಯದ ವಿದ್ಯಾರ್ಥಿನಿಯರು ಭಯಭೀತರಾದ ಘಟನೆ ನಡೆದಿದೆ.
ಕೊಪ್ಪಳ ಪಾಂಡುರಂಗ ದೇವಸ್ಥಾನ ಬಳಿ ಇರುವ ಪರಿಶಿಷ್ಟ ಪಂಗಡ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಆಕಸ್ಮಿಕ ಶಾರ್ಟ್ ಸರ್ಕ್ಯೂಟ್ ಆಗಿದೆ. ಈ ವೇಳೆ ವಸತಿ ನಿಲಯದಲ್ಲಿದ್ದ ಕಂಪ್ಯೂಟರ್ ಸುಟ್ಟು ಭಸ್ಮವಾಗಿದೆ. ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿದ್ಯಾರ್ಥಿನಿಯರು ಭಯಗೊಂಡು ಸ್ಥಳೀಯರು ಹಾಗೂ ಅಗ್ನಿಶಾಮಕಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.
ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಯಿಂದ ವಿದ್ಯಾರ್ಥಿಗಳು ಭಯಭೀತರಾಗಿದ್ದರು. ಬಳಿಕ ಪೊಲೀಸರು ಹಾಗೀ ಅಗ್ನಿಶಾಮಕ ತಂಡವು ಧೈರ್ಯ ಹೇಳಿದ ಬಳಿಕ ಅವರು ಸಾವರಿಸಿಕೊಂಡರು. ಸ್ಥಳಕ್ಕೆ ಕೊಪ್ಪಳ ನಗರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು.
You seem to have an Ad Blocker on.
To continue reading, please turn it off or whitelist Udayavani.