ಭಯೋತ್ಪಾದಕ ಮುಖಂಡರ ಜತೆ ಐಎಸ್ ಐ ರಹಸ್ಯ ಸಭೆ: ಕಾಶ್ಮೀರಿ ಪಂಡಿತರ ಹತ್ಯೆಗೆ ಸಂಚು
ಜಮ್ಮು-ಕಾಶ್ಮೀರದಲ್ಲಿ ಬೃಹತ್ ಪ್ರಮಾಣದ ದಾಳಿ ನಡೆಸಲು ಐಎಸ್ ಐ ಸಿದ್ಧತೆ ನಡೆಸುತ್ತಿದೆ.
Team Udayavani, Oct 15, 2021, 4:36 PM IST
ಇಸ್ಲಾಮಾಬಾದ್: ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ ಐ ಇತ್ತೀಚೆಗಷ್ಟೇ ಪಾಕ್ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್ ನಲ್ಲಿ ಹಲವಾರು ಭಯೋತ್ಪಾದಕ ಸಂಘಟನೆಗಳ ಮುಖಂಡರ ಜತೆ ರಹಸ್ಯ ಮಾತುಕತೆ ನಡೆಸಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.
ಇದನ್ನೂ ಓದಿ:ಅಫ್ಘಾನ್: ಕಂದಾಹಾರ್ ಮಸೀದಿಯೊಳಗೆ ಬಾಂಬ್ ಸ್ಫೋಟ, ನೂರಾರು ಮಂದಿ ಸಾವು?
ಐಎಸ್ ಐ ಅಧಿಕಾರಿಗಳು ಮತ್ತು ಭಯೋತ್ಪಾದಕ ಸಂಘಟನೆ ನಡುವೆ ನಡೆದ ರಹಸ್ಯ ಮಾತುಕತೆ ಬಗ್ಗೆ ಭಾರತದ ಗುಪ್ತಚರ ಇಲಾಖೆಗೆ ತಿಳಿದಿದ್ದು, ಈ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿತ್ತು ಎಂದು ವರದಿ ವಿವರಿಸಿದೆ.
ಗುಪ್ತಚರ ಇಲಾಖೆಯ ಸಂದೇಶದಲ್ಲಿ, ಜಮ್ಮು-ಕಾಶ್ಮೀರದಲ್ಲಿ ಬೃಹತ್ ಪ್ರಮಾಣದ ದಾಳಿ ನಡೆಸಲು ಐಎಸ್ ಐ ಸಿದ್ಧತೆ ನಡೆಸುತ್ತಿದೆ. ಈ ದಾಳಿಯಲ್ಲಿ ಕಾಶ್ಮೀರದಲ್ಲಿ ಹೆಚ್ಚಿನ ಪ್ರಮಾಣದ ಸಾವು ಸಂಭವಿಸಬೇಕೆಂದು ರಹಸ್ಯ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿತ್ತು ಎಂದು ಹೇಳಿದೆ.
ಪೊಲೀಸರ ಜತೆ ಕಾರ್ಯನಿರ್ವಹಿಸುವ ಕಾಶ್ಮೀರಿಗಳು, ಭದ್ರತಾ ಪಡೆ, ಕಾಶ್ಮೀರಿ ಪಂಡಿತರು ಹಾಗೂ ಗುಪ್ತಚರ ಇಲಾಖೆಯ ಜನರನ್ನೂ ಕೊಲ್ಲಬೇಕೆಂದು ಸಭೆಯಲ್ಲಿ ಚರ್ಚಿಸಲಾಗಿತ್ತು. ಅಷ್ಟೇ ಅಲ್ಲ ಬಿಜೆಪಿ , ಆರ್ ಎಸ್ ಎಸ್ ಜನರನ್ನು ಗುರಿಯಾಗಿರಿಸಿ ದಾಳಿ ನಡೆಸಬೇಕೆಂದು ರಹಸ್ಯ ಸಭೆಯಲ್ಲಿ ಚರ್ಚಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.