ಸರ್ಕಾರಿ ಹೆರಿಗೆ ಆಸ್ಪತ್ರೆಗೆ ಕಾಯಕಲ್ಪ ಭಾಗ್ಯ


Team Udayavani, Oct 15, 2021, 6:23 PM IST

ಉದಯವಾಣಿ ಫಲಶ್ರುತಿ

ನಂಜನಗೂಡು: ತಾಲೂಕಿನ ಕಾಡಂಚಿನ ಈರೇಗೌಡನ ಹುಂಡಿಯ ಸರ್ಕಾರಿ ಹೆರಿಗೆ ಆಸ್ಪತ್ರೆಗೆ ಕಡೆಗೂ ಕಾಯಕಲ್ಪ ಭಾಗ್ಯ ಲಭಿಸಿದೆ. ಆಸ್ಪತ್ರೆಯ ಹಾಸಿಗೆ ಮೇಲೆಯೇ ಮೇಲ್ಛಾವಣಿಯ ಸಿಮೆಂಟ್‌ ಉದುರುತ್ತಿತ್ತು. ಆಗಲೋ ಈಗಲೋ ಧರೆಗುರುಳುವ ಸ್ಥಿತಿಗೆ ತಲುಪಿರುವ ಸಜ್ಜಾಕ್ಕೆ ಕಂಬ ಕೊಟ್ಟು ನಿಲ್ಲಿಸಲಾಗಿತ್ತು.

ಆಸ್ಪತ್ರೆಗೆ ರೋಗಿಗಳು ಬರಲು ಭಯ ಪಡುತ್ತಿದ್ದರು. ಈ ಆಸ್ಪತ್ರೆ ಅವ್ಯವಸ್ಥೆ ಕುರಿತು ಉದಯವಾಣಿಯಲ್ಲಿ ಅ.5ರಂದು “ಆಸ್ಪತ್ರೆ ಹಾಸಿಗೆ ಮೇಲೆಯೇ ಬೀಳ್ತಿದೆ ತಾರಸಿ ಸಿಮೆಂಟ್‌’ ಶೀರ್ಷಿಕೆಯಡಿ ವರದಿ ಪ್ರಕಟಿಸಿ, ಬೆಳಕು ಚೆಲ್ಲಲಾ ಗಿತ್ತು. ಇದಕ್ಕೆ ಟಿವಿಎಸ್‌ ಕಂಪನಿಯ ಸೇವಾ ಟ್ರಸ್ಟ್‌ ಸ್ಪಂದಿಸಿದ್ದು, ಆಸ್ಪತ್ರೆ ದುರಸ್ತಿಗೆ ಮುಂದಾಗಿದೆ.

ಮೈಸೂರು ತಾಲೂಕಿನ ಸಿಂಧುವಳ್ಳಿ ಬಳಿ ಕಾರ್ಯನಿರ್ವಹಿಸುತ್ತಿರುವ ಟಿವಿಎಸ್‌ ಮೋಟಾರು ಕಂಪನಿಯ ಅಂಗಸಂಸ್ಥೆಯಾದ ಟಿ.ವಿ.ಶ್ರೀನಿವಾಸ್‌ ಸೇವಾಟ್ರಸ್ಟ್‌ನಿಂದ ತಾಲೂಕಿನ ಕಾಡಂಚಿನ ಗ್ರಾಮ ಈರೇಗೌಡನಹುಂಡಿಯ ಸರ್ಕಾರಿ ಹೆರಿಗೆ ಆಸ್ಪತ್ರೆಗೆ ಕಾಯಕಲ್ಪ ಮಾಡಲು ಸಿದ್ಧತೆ ನಡೆಸಲಾಗಿದೆ. ಸಂಸ್ಥೆಯ ನುರಿತ ಎಂಜಿನಿಯರ್‌ಗಳು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುರಸ್ತಿ ಕಾರ್ಯಕ್ಕೆ ಅಂದಾಜು ಪಟ್ಟಿ ಸಿದ್ಧಪಡಿಸಿದ್ದಾರೆ.

ಶೀಘ್ರದಲ್ಲೇ ಹೆರಿಗೆ ಆಸ್ಪತ್ರೆಗೆ ಕಾಯಕಲ್ಪ ನೀಡಲಾಗುವುದು ಎಂದು ಸಂಸ್ಥೆಯ ಮುಖ್ಯಸ್ಥರು ಉದಯವಾಣಿಗೆ ತಿಳಿಸಿದ್ದಾರೆ. ಆಸ್ಪತ್ರೆ ಮೇಲ್ಛಾವಣಿ ಶಿಥಲಗೊಂಡಿದ್ದು, ತರಸಿಯ ಸಿಮೆಂಟ್‌, ಪ್ಲಾಸ್ಟರ್‌ ಬೆಡ್‌ಗಳ ಮೇಲೆಯೇ ಬೀಳುತ್ತಿದೆ. ಜೊತೆಗೆ ಸಜ್ಜಾ ಕೂಡ ನೆಲಕಚ್ಚುವಂತಿದೆ. ಈ ಆಸ್ಪತ್ರೆ ಕಟ್ಟಡ ದುರಸ್ತಿಗಾಗಿ ಪ್ರಾಥಮಿಕವಾಗಿ 1.70 ಲಕ್ಷ ರೂ. ಅಂದಾಜು ಪಟ್ಟಿ ಸಿದ್ಧಪಡಿಸಲಾಗಿದೆ. ಕಾಮಗಾರಿ ಪ್ರಾರಂಭವಾದ ನಂತರ ಅಂದಾಜು ಪಟ್ಟಿ ತುಸು ವ್ಯತ್ಯಾಯ ಆಗಬಹುದು. ಆದರೆ, ಎಷ್ಟೇ ವೆಚ್ಚವಾದರೂ ಅದನ್ನು ಮಾಡಿಯೇ ತೀರುತ್ತೇವೆ. ರೋಗಿಗಳು ಆಸ್ಪತ್ರೆಗೆ ಬರಲು ಪೂರಕ ವಾತಾವರಣ ಕಲ್ಪಿಸುತ್ತೇವೆ ಎಂದು ಟಿ.ವಿ.ಶ್ರೀನಿವಾಸ್‌ ಸೇವಾ ಟ್ರಸ್ಟ್‌ ಭರವಸೆ ನೀಡಿದೆ.

ಇದನ್ನೂ ಓದಿ:- ಸಿನಿ ರಸಿಕರ ಗಮನ ಸೆಳೆದ ‘ಗರುಡ ಗಮನ, ವೃಷಭ ವಾಹನ’ ಟ್ರೈಲರ್

ಹೆರಿಗೆ ಆಸ್ಪತ್ರೆಯಿಂದ 22 ಗ್ರಾಮಗಳಿಗೆ ಅನುಕೂಲ-

ತಾಲೂಕು ಕೇಂದ್ರದಿಂದ ಸುಮಾರು 35 ಕಿ.ಮೀ. ದೂರವಿರುವ ಈರೇಗೌಡನಹುಂಡಿಯಲ್ಲಿ ಈ ಭಾಗದ 22 ಗ್ರಾಮಗಳ ಜನರಿಗೆ ಅನುಕೂಲ ಆಗುವಂತೆ 1988ರಲ್ಲಿ ಸರ್ಕಾರಿ ಹೆರಿಗೆ ಆಸ್ಪತ್ರೆ ನಿರ್ಮಿಸಲಾಗಿತ್ತು. ಇದು ನೂರಾರು ವರ್ಷದ ಕಟ್ಟಡವಲ್ಲ.

ಹೆಚ್ಚೆಂದರೆ 30-33 ವರ್ಷ ಆಗಿರಬಹುದು. ಒಮ್ಮೆ ದುರಸ್ತಿ ಮಾಡಿಸಲಾಗಿದೆ ಎಂದು ದಾಖಲೆಯಲ್ಲಿ ನಮೂದಾಗಿ ದ್ದರೂ ಕಟ್ಟಡ ಮಾತ್ರ ಬೀಳುವ ಸ್ಥಿತಿಯಲ್ಲಿದೆ. ಮೂರು ವರ್ಷಗಳ ಹಿಂದೆ ಇದೇ ಆಸ್ಪತ್ರೆಯ ದುರಸ್ತಿಗಾಗಿ ಹಣ ಖರ್ಚು ಮಾಡಿದ್ದರ ಬಗ್ಗೆ ದಾಖಲೆ ಕೂಡ ಇದೆ. ಆದರೆ ದುರಸ್ತಿ ಮಾತ್ರ ಆದ ಹಾಗೆ ಕಾಣುತ್ತಿಲ್ಲ.

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.