ಸರಳತೆಯಲ್ಲೂ ಸಂಭ್ರಮದಿಂದ ಮುಕ್ತಾಯಗೊಂಡ ಮೈಸೂರು ದಸರಾ ಜಂಬೂ ಸವಾರಿ
Mysore Dasara, Nadahabba , Karnataka ,
Team Udayavani, Oct 15, 2021, 6:29 PM IST
ಮೈಸೂರು: ವಿಶ್ವ ವಿಖ್ಯಾತ ಮೈಸೂರಿನ ಜಂಬೂ ಸವಾರಿ ಮೆರವಣಿಗೆ ಶುಕ್ರವಾರ ಸಂಜೆ ಸರಳವಾಗಿ ಸಂಭ್ರಮದಿಂದ ಮುಕ್ತಾಯಗೊಂಡಿದೆ.
ಕೊರೊನಾ ಹಿನ್ನೆಲೆಯಲ್ಲಿ ಆಹ್ವಾನಿತ ಗಣ್ಯರಿಗಷ್ಟೇ ಅರಮನೆ ಆವರಣದಲ್ಲಷ್ಟೇ ಉತ್ಸವ ಕಣ್ತುಂಬಿಕೊಳ್ಳಲು ಸಾಧ್ಯವಾಯಿತು. ಆದರೆ ನೇರ ಪ್ರಸಾರವನ್ನು ಕೋಟ್ಯಂತರ ಮಂದಿ ವೀಕ್ಷಿಸಿ ಸಂಭ್ರಮಿಸಿದರು. ಈ ಬಾರಿ ಕೇವಲ 20 ನಿಮಿಷದಲ್ಲಿ ಮೆರವಣಿಗೆ ಮುಕ್ತಾಯಗೊಂಡಿತು.
ಈ ಬಾರಿಯ ದಸರಾ ಜಂಬೂಸವಾರಿ ಮೆರವಣಿಗೆ ವೀಕ್ಷಿಸಲು 500 ಮಂದಿಗಷ್ಟೇ ಅವಕಾಶ ನೀಡಲಾದ ಹಿನ್ನಲೆಯಲ್ಲಿ ಗಣ್ಯಾತಿಗಣ್ಯರಷ್ಟೇ ಭಾಗಿಯಾಗಿದ್ದರು.
ಸಂಜೆ 4:32 ರ ಮೀನ ಲಗ್ನದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಸಲ್ಲಿಸಿದ ಬಳಿಕ ಜಂಬೂ ಸವಾರಿ ಆರಂಭವಾಯಿತು.
ಪುಷ್ಪಾರ್ಚನೆ ವೇಳೆ ಆರು ಗಣ್ಯರಾದ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ರಾಜವಂಶಸ್ಥರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್,ಜಿಲ್ಲಾಧಿಕಾರಿ , ನಗರ ಪೊಲೀಸ್ ಆಯುಕ್ತ, ಮೇಯರ್ ಅವರು ಉಪಸ್ಥಿತರಿದ್ದರು.
2ನೇ ಬಾರಿಗೆ 750 ಕೆಜಿ ತೂಕದ ಅಂಬಾರಿ ಹೊತ್ತ ಅಭಿಮನ್ಯು ನಾಡದೇವತೆ ಚಾಮುಂಡೇಶ್ವರಿಯ ಉತ್ಸವ ಮೂರ್ತಿಯೊಂದಿಗೆ ಗಾಂಭೀರ್ಯದಲ್ಲಿ ಹೆಜ್ಜೆ ಹಾಕಿದ. ಕಾವೇರಿ, ಚೈತ್ರಾ ಅಭಿಮನ್ಯುಗೆ ಸಾಥ್ ನೀಡಿದವು. ಈ ಬಾರಿ ಕೇವಲ 6 ಸ್ತಬ್ಧಚಿತ್ರಗಳು ಮಾತ್ರ ಮೆರವಣಿಗೆಯಲ್ಲಿ ಭಾಗಿಯಾದವು.
ಸಾರ್ವಜನಿಕರಿಗೆ ಅರಮನೆ ಆವರಣಕ್ಕೆ ಪ್ರವೇಶ ನಿರ್ಬಂಧಿಸಿದ್ದರು ಸಾವಿರಾರು ಮಂದಿ ಆಗಮಿಸಿದ್ದರು. ಅವರನ್ನು ಹೊರಬಾಹೆಯಲ್ಲಿ ಪೊಲೀಸರು ತಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.