ಜಿಲ್ಲಾದ್ಯಂತ ವಿಜಯ ದಶಮಿ ಸಂಭ್ರಮ

ಶಕ್ತಿ ದೇವಿ ಆರಾಧನೆ, ಸಾಂಸ್ಕೃತಿಕ ಆಚರಣೆಗಳ ಅನಾವರಣ „ ದೇವಾಲಯಗಳಲ್ಲಿ ವಿಶೇಷ ಪೂಜೆ

Team Udayavani, Oct 16, 2021, 11:20 AM IST

doddaballapura dasara

ದೊಡ್ಡಬಳ್ಳಾಪುರ: ತಾಲೂಕಾದ್ಯಂತ ವಿಜಯದಶಮಿ ಹಬ್ಬವನ್ನು ಸಡಗರ ಸಂಭ್ರಮಗಳಿಂದ ಆಚರಿಸಲಾಯಿತು. ಶಕ್ತಿ ದೇವಿಯ ಆರಾಧನೆ, ಸಾಂಸ್ಕೃತಿಕ ಆಚರಣೆಗಳ ಅನಾವರಣವಾಗುವ ನವರಾತ್ರಿಯ ಒಂಬತ್ತು ದಿನಗಳು ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.

 ಆಯುಧಪೂಜೆ ಕಾರ್ಯಕ್ರಮದಲ್ಲಿ ಸಿಎಂ: ವಿಜಯ ದಶಮಿಗೂ ಮುನ್ನ ನವಮಿಯಂದು ಆಚರಿಸುವ ಆಯುಧಪೂಜೆಯನ್ನು ಜನತೆ ಶ್ರದ್ಧಾ ಭಕ್ತಿಗಳಿಂದ ನೆರವೇರಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ತಮ್ಮ ಪುತ್ರ ಭರತ್‌ ಅವರ ಮ್ಯಾಗ್ನಟಿಕ್‌ ಎಂಜಿನಿಯರ್ಸ್‌ ಕಾರ್ಖಾನೆಗೆ ಭೇಟಿ ನೀಡಿ ಯಂತ್ರಗಳಿಗೆ ಪೂಜೆ ಸಲ್ಲಿಸಿದರು. ಕಾರ್ಖಾನೆಗೆ ಗುರುವಾರ ಬೆಳಗ್ಗೆ ಆಗಮಿಸಿದ ಸಿಎಂ ಬೊಮ್ಮಾಯಿ, ಅವರ ಪತ್ನಿ ಚೆನ್ನಮ್ಮ ಫ್ಯಾಕ್ಟರಿಯಲ್ಲಿನ ಯಂತ್ರಗಳಿಗೆ ಪೂಜೆ ಸಲ್ಲಿಸಿದರು.

ಇದನ್ನೂ ಓದಿ;- ಶರಣರ ವೈಚಾರಿಕತೆ ವೈಜ್ಞಾನಿಕ ಕಾಂತ್ರಿಗೆ ಪೂರಕ: ಅಗಸರ

ಜತೆಗೆ, ಅಲ್ಲಿನ ಕಾರ್ಮಿಕರಿಗೆ ವಿಜಯದಶಮಿ ಶುಭಾಶಯ ತಿಳಿಸಿ, ಉಡುಗೊರೆ ಹಾಗೂ ಸಿಹಿಯನ್ನು ಹಂಚಿದರು. ಈ ವೇಳೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌, ಉಪವಿಭಾಗಾಧಿಕಾರಿ ಅರುಳ್‌ ಕುಮಾರ್‌, ಡಿವೈಎಸ್ಪಿ ರಂಗಪ್ಪ ಇದ್ದರು. ನೇಕಾರಿಕೆಯೇ ಪ್ರಧಾನವಾಗಿರುವ ನಗರದಲ್ಲಿ ಮಗ್ಗಗಳು ಹಾಗೂ ಯಂತ್ರಗಳಿಗೆ ಪೂಜೆ ಸಲ್ಲಿಸಲಾಯಿತು. ವಾಹನಗಳು ಮತ್ತಿತರ ಸಾಧನಗಳನ್ನು ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ನಗರಸಭೆ ವತಿಯಿಂದ, ನಗರಸಭೆಯ ವಾಹನಗಳು ಹಾಗೂ ವಿವಿಧ ಪರಿಕರಗಳಿಗೆ ಆಯುಧಪೂಜೆ ಸಲ್ಲಿಸಲಾಯಿತು.

ವಿಜಯ ದಶಮಿ: ವಿಜಯ ದಶಮಿ ಅಂಘವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಬನ್ನಿ ಹೊಡೆಯುವ ಆಚರಣೆ ನಡೆಯಿತು. ಮಹಿಳೆಯರು ಬನ್ನಿ ಮರಕ್ಕೆ ಮಳ್ಳು ಕಟ್ಟಿ ಪೂಜೆ ಸಲ್ಲಿಸಿದರು. ನಗರದ ನೆಲದಾಂಜ ನೇಯಸ್ವಾಮಿ ದೇವಾಲಯದಲ್ಲಿನ ಬನ್ನಿ ಮರಕ್ಕೆ ಭಕ್ತಾ ದಿಗಳು ಪೂಜೆ ಸಲ್ಲಿಸಿದರು. ನಗರದ ವನ್ನಿಗರ ಪೇಟೆಯಲ್ಲಿರುವ ಶ್ರೀ ಸಪ್ತ ಮಾತೃಕಾ ಮಾರಿಯಮ್ಮ ದೇವಾಲಯದಲ್ಲಿ ನವರಾತ್ರಿ ಅಂಗವಾಗಿ ದುರ್ಗಾ ದೇವಿಯ ಮೂರ್ತಿ ಹಾಗೂ ದಸರಾ ಬೊಂಬೆಗಳನ್ನು ಪ್ರತಿಷ್ಟಾಪಿಸಿ, ದೇವಿಗೆ ಪ್ರತಿನಿತ್ಯ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ದುರ್ಗಾದೇವಿ ಮೂರ್ತಿಯನ್ನು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ವಿಸರ್ಜಿಸಲಾಯಿತು. ನಗರದ ಕಾಳಮ್ಮ ದೇವಾಲಯದಲ್ಲಿ ಪ್ರತಿನಿತ್ಯ ವಿಶೇಷ ಅಲಂಕಾರ ಮಾಡಿ ವಿಜಯದಶಮಿಯಂದು ನಗರ ಉತ್ಸವ ನಡೆಸಿ ಬನ್ನಿ ಮಂಟಪದ ಪೂಜೆ ನೆರವೇರಿಸಲಾಯಿತು. ತಾಲೂಕಿನ ಲಿಂಗನಹಳ್ಳಿಯಲ್ಲಿ ಶ್ರೀ ಆಂಜನೇಯ, ಬಸವೇಶ್ವರ ಮೂರ್ತಿಗಳ ಆರಾಧನೆಯಲ್ಲಿ ಗ್ರಾಮಸ್ಥರು ಶ್ರದ್ಧಾಭಕ್ತಿಗಳಿಂದ ಭಾಗಿಯಾಗಿದ್ದರು.

ನಗರದ ಶ್ರೀ ರಾಮಲಿಂಗ ಚೌಡೇಶ್ವರಿ, ಶ್ರೀ ಶಾರದಾ ಶಂಕರ ಸದನ, ಮುತ್ಯಾಲಮ್ಮ ದೇವಿ,ಅಯ್ಯಪ್ಪಸ್ವಾಮಿ ದೇವಾಲಯ,ಶ್ರೀ ವಾಸವಿ ಕ್ಕನಿಕಾ ಪರಮೇಶ್ವರಿ, ಶ್ರೀ ಜನಾರ್ದನಸ್ವಾಮಿ, ಶ್ರೀ ವೇಣುಗೋಪಾಲಸ್ವಾಮಿ ಹಾಗೂ ಕುಚ್ಚಪ್ಪನಪೇಟೆಯ ಮಾರಮ್ಮದೇವಿ ದೇವಾಲಯಗಳಲ್ಲಿ ಶರನ್ನವರಾತ್ರೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ವಾದ್ಯಗೋಷ್ಟಿಯೊಂದಿಗೆ ಪಥ ಸಂಚಲನ ನಡೆಸಲಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಆಕರ್ಷಕ ಪಥ ಸಂಚಲನದಲ್ಲಿ ನೂರಾರು ಗಣವೇಷ ಧಾರಿಗಳು ಶಿಸ್ತಿನಿಂದ ಭಾಗವಹಿಸಿದ್ದರು.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.